ಕನ್ನಡಿಗರಿಗೆ ಉದ್ಯೋಗ ಮೀಸಲು; ಕಜಾವೇ ಹಕ್ಕೊತ್ತಾಯ

KannadaprabhaNewsNetwork |  
Published : Oct 02, 2024, 01:02 AM IST
ದೊಡ್ಡಬಳ್ಳಾಪುರ ಪ್ರವಾಸಿ ಮಂದಿರದಲ್ಲಿ ಕನ್ನಡ ಜಾಗೃತಿ ವೇದಿಕೆಯಿಂದ ಜಿಲ್ಲಾ ಹಾಗೂ ತಾಲೂಕು ಪದಾಧಿಕಾರಿಗಳ ಸಭೆ ನಡೆಯಿತು. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: ರಾಜ್ಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕುರಿತಂತೆ ಸರ್ಕಾರ ಯಾವುದೇ ರೀತಿಯ ಸ್ಪಷ್ಟ ನಿರ್ಧಾರ ಕೈಗೊಂಡಿಲ್ಲ. ಉದ್ಯೋಗ ಮೀಸಲಾತಿಗಾಗಿ ಆಗ್ರಹಿಸಿ ಅ.19 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಕನ್ನಡ ಜಾಗೃತಿ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಕೆ. ಮಂಜುನಾಥ್ ದೇವಣ್ಣ ಹೇಳಿದರು.

ದೊಡ್ಡಬಳ್ಳಾಪುರ: ರಾಜ್ಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕುರಿತಂತೆ ಸರ್ಕಾರ ಯಾವುದೇ ರೀತಿಯ ಸ್ಪಷ್ಟ ನಿರ್ಧಾರ ಕೈಗೊಂಡಿಲ್ಲ. ಉದ್ಯೋಗ ಮೀಸಲಾತಿಗಾಗಿ ಆಗ್ರಹಿಸಿ ಅ.19 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಕನ್ನಡ ಜಾಗೃತಿ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಕೆ. ಮಂಜುನಾಥ್ ದೇವಣ್ಣ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಕನ್ನಡ ಜಾಗೃತಿ ವೇದಿಕೆ ವತಿಯಿಂದ ನಡೆದ ಜಿಲ್ಲಾ ಹಾಗೂ ತಾಲೂಕು ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಸರೋಜಿನಿ ಮಹಿಷಿ ವರದಿ ಜಾರಿಗೊಳಿಸುವಲ್ಲಿ ರಾಜ್ಯದಲ್ಲಿ ಆಡಳಿತ ನಡೆಸಿರುವ ಎಲ್ಲಾ ಸರ್ಕಾರಗಳು ವಿಫಲವಾಗಿವೆ. ಈ ಬಗ್ಗೆ ನಾವು ಎಚ್ಚೆತ್ತುಕೊಳ್ಳದೇ ಇದ್ದರೆ ನಾಡಿನ ಯುವ ಸಮುದಾಯ ನಮ್ಮಲ್ಲಿ ಕೈಗಾರಿಕೆಗಳು ಇದ್ದು ಸಹ ಉದ್ಯೋಗ ಇಲ್ಲದೆ ಬರಿಗೈಯಲ್ಲಿ ಕೂರುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಹೇಳಿದರು.

ನಾಡಿನ ಜನತೆ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕಿದೆ. ಹಾಗೆಯೇ ಯುವಕರಲ್ಲಿ ಪರಭಾಷೆಗಳ ವ್ಯಾಮೋಹ ಹೆಚ್ಚಾಗುತ್ತಿದೆ. ನಾಡು, ನುಡಿ ಮತ್ತು ನಮ್ಮ ಸಂಸ್ಕೃತಿಯನ್ನು ಗೌರವಿಸುವ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು ಎಂದರು.

ಕನ್ನಡ ಜಾಗೃತಿ ವೇದಿಕೆ ಜಿಲ್ಲಾ ಅಧ್ಯಕ್ಷ ಎಂ.ನಾಗರಾಜ್, ನಮ್ಮ ರಾಜ್ಯದ ಜನರ ಉದ್ಯೋಗ ಅನ್ಯ ರಾಜ್ಯದವರ ಪಾಲಾಗುತ್ತಿವೆ. ಖಾಸಗಿ ಕಂಪನಿಗಳಲ್ಲಿ ಕೆಳ ಹಂತದ ಉದ್ಯೋಗಗಳಿಗೆ ಮಾತ್ರ ಕನ್ನಡಿಗರನ್ನು ಸೀಮಿತಗೊಳಿಸಲಾಗುತ್ತಿದೆ. ಇದರ ವಿರುದ್ಧ ನಡೆಯುವ ಪ್ರತಿಭಟನೆಗೆ ಯುವ ಸಮುದಾಯ ಹೆಚ್ಚಿನ ಬೆಂಬಲ ನೀಡಬೇಕಿದೆ ಎಂದರು.

ಕನ್ನಡ ಜಾಗೃತ ವೇದಿಕೆ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಕವಿತಾ ಪೇಟೆಮಠ, ಸುಮಂಗಲಿ ರಾಮಾಚಾರಿ, ಆನೇಕಲ್ ಯುವ ಘಟಕದ ಅಧ್ಯಕ್ಷ ಮಧುಸುಧನ್, ಸತೀಶ್, ಜಿಲ್ಲಾ ಮುಖಂಡರಾದ ಅಗ್ನಿ ವೆಂಕಟೇಶ, ತಾಲೂಕು ಅಧ್ಯಕ್ಷ ಸಿ.ಶಶಿಧ‌ರ್, ಉಪಾಧ್ಯಕ್ಷ ಗಿರೀಶ್, ಗೌರವ ಅಧ್ಯಕ್ಷ ಅನಿಲ್ ದೇಶಪಾಂಡೆ, ಕಾರ್ಮಿಕ ಯುವ ಘಟಕದ ತರುಣ್ ಸರ್ಜಾ, ಚೇತನ್ ಚಂದನ್, ಬಾಲಾಜಿ, ಕಾರ್ಯದರ್ಶಿ ಬಿ.ಪ್ರಕಾಶ್, ತಾಲೂಕು ಸಂಚಾಲಕ ಮನುಕುಮಾ‌ರ್, ಶಿವಕುಮಾರ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರ ಕ್ಷೇತ್ರಕ್ಕೆ ಆರ್ಥಿಕ ಶಿಸ್ತು ಅಗತ್ಯ
ಅಧಿಕಾರಿಗಳು ಜಾತ್ಯತೀತವಾಗಿ ಕೆಲಸ ಮಾಡಿ : ಸಿಎಂ ಸಿದ್ದರಾಮಯ್ಯ