ದೊಡ್ಡಬಳ್ಳಾಪುರ: ಕನ್ನಡ ಉಳಿವಿಗಾಗಿ, ಸ್ಥಳೀಯ ಕನ್ನಡಿಗರ ಉದ್ಯೋಗಕ್ಕಾಗಿ ಹಾಗೂ ಆಡಳಿತದಲ್ಲಿ ಕನ್ನಡ ಭಾಷೆಗಾಗಿ ಹಕ್ಕೊತ್ತಾಯ ಮುಂದಿಟ್ಟು ಇಲ್ಲಿನ ಶ್ರೀ ಭುವನೇಶ್ವರಿ ಕನ್ನಡ ಸಂಘ, ಡಿಟಿಎಎ ಸಹಯೋಗದಲ್ಲಿ ಭಾನುವಾರ ಬೆಳಗ್ಗೆ ಹಮ್ಮಿಕೊಳ್ಳಲಾಗಿದ್ದ 5 ಕಿ.ಮೀ. ಮ್ಯಾರಥಾನ್‌ನಲ್ಲಿ ನೂರಾರು ನಾಗರಿಕರು, ವಿದ್ಯಾರ್ಥಿಗಳು ಭಾಗಿಯಾದರು.
ನಗರಸಭೆ ಮಾಜಿ ಅಧ್ಯಕ್ಷ ತ.ನ.ಪ್ರಭುದೇವ್ ಮಾತನಾಡಿ, ತಾಲೂಕಿನಲ್ಲಿ ತೆಲುಗು ತಮಿಳು ಚಲನಚಿತ್ರಗಳಿಗೆ ಹೆಚ್ಚಿನ ಆದ್ಯತೆ ನೀಡದೆ ಕನ್ನಡ ಚಿತ್ರಗಳ ಪ್ರದರ್ಶನಕ್ಕೆ ಆದ್ಯತೆ ನೀಡುವಂತೆ ಹೋರಾಟ ನಡೆಸಿದ ಹೆಗ್ಗಳಿಕೆ ಭುವನೇಶ್ವರಿ ಕನ್ನಡ ಸಂಘಕ್ಕೆ ಸಲ್ಲುತ್ತದೆ ಎಂದರು.
ನಗರಸಭೆ ಸದಸ್ಯ ಎಚ್.ಎಸ್.ಶಿವಶಂಕರ್ ಮಾತನಾಡಿ, ಇಂತಹ ಕ್ರೀಡಾ ಕಾರ್ಯಕ್ರಮಗಳ ಆಯೋಜನೆಯಿಂದ ಯುವಕರಲ್ಲಿ ಕ್ರೀಡಾ ಮನೋಭಾವ ಹೆಚ್ಚಿಸುವುದಷ್ಟೇ ಅಲ್ಲದೇ ಭಾಷೆ ಕುರಿತು ಅಭಿಮಾನ ಹೆಚ್ಚುತ್ತದೆ. ಓಟ ಕೇವಲ ದೈಹಿಕವಾಗಿ ಶಕ್ತಿ ನೀಡುವುದಲ್ಲದೆ ಮಾನಸಿಕವಾಗಿ ವ್ಯಕ್ತಿಯನ್ನು ಸದೃಢರನ್ನಾಗಿ ಮಾಡುತ್ತದೆ ಎಂದರು.ಸಿದ್ದಲಿಂಗಯ್ಯ ವೃತ್ತದಿಂದ ಆರಂಭವಾದ ಮ್ಯಾರಾಥಾನ್, ಜಯಚಾಮರಾಜೇಂದ್ರ ವೃತ್ತ, ಮಹಾತ್ಮ ಗಾಂಧಿ ವೃತ್ತ, ಬಿಎಂಶ್ರೀ ರಸ್ತೆ, ಡಿಕ್ರಾಸ್‌ನ ಡಾ.ರಾಜ್‌ಕುಮಾರ್ ವೃತ್ತ, ಪ್ರವಾಸಿ ಮಂದಿರ ಬಳಿಯ ಡಾ.ಬಿ.ಆರ್.ಅಂಬೇಡ್ಕರ್ ವೃತ್ತ, ಬಸವ ಭವನ ಬಳಿಯ ಜಿ.ರಾಮೇಗೌಡ ವೃತ್ತದ ಮೂಲಕ ಭಗತ್‌ಸಿಂಗ್ ಕ್ರೀಡಾಂಗಣ ತಲುಪಿತು.
17ಕೆಡಿಬಿಪಿ5- ಕನ್ನಡಿಗರಿಗೆ ಉದ್ಯೋಗ ಸಂಕಲ್ಪದೊಂದಿಗೆ ದೊಡ್ಡಬಳ್ಳಾಪುರದಲ್ಲಿ ಭುವನೇಶ್ವರಿ ಕನ್ನಡ ಸಂಘದ ನೇತೃತ್ವದಲ್ಲಿ ಭಾನುವಾರ ನಡೆದ ಕನ್ನಡಕ್ಕಾಗಿ ಓಟದಲ್ಲಿ ನೂರಾರು ನಾಗರಿಕರು ಭಾಗಿಯಾದರು.