ಕನ್ನಡಪ್ರಭ ವಾರ್ತೆ ಶಿಕಾರಿಪುರ
ಶುಕ್ರವಾರ ಪಟ್ಟಣದ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಆವರಣದಲ್ಲಿ ಮಾಜಿ ಸಿ.ಎಂ. ಯಡಿಯೂರಪ್ಪನವರ ಹುಟ್ಟುಹಬ್ಬದ ಅಂಗವಾಗಿ ಮೂಡಬಿದರೆ ಆಳ್ವಾಸ್ ಫೌಂಡೇಶನ್ ಟ್ರಸ್ಟ್ ಸಹಯೋಗದಲ್ಲಿ ಸತತ 2 ದಿನ ಆಯೋಜಿಸಲಾದ ಬೃಹತ್ ಉದ್ಯೋಗ ಮೇಳ 2026ಕ್ಕೆ ಚಾಲನೆ ನೀಡಿ ಮಾತನಾಡಿದರು.
ಮಾಜಿ ಸಿಎಂ ಯಡಿಯೂರಪ್ಪನವರಿಗೆ ರಾಜಕೀಯ ಜನ್ಮ ನೀಡಿದ ತಾಲೂಕಿನ ಯುವಕ ಯುವತಿಯರಿಗೆ ಉದ್ಯೋಗ ದೊರಕಿಸಿಕೊಡುವ ಬಹು ಮಹತ್ವಾಕಾಂಕ್ಷೆಯ ಕನಸು ಇದೀಗ ನನಸಾಗಿದ್ದು, ಈ ದಿಸೆಯಲ್ಲಿ ಕಳೆದ 2-3 ತಿಂಗಳಿನಿಂದ ಸತತ ಶ್ರಮವಹಿಸಿ ಯಶಸ್ವಿಯಾಗಲು ಸಹಕರಿಸಿದ ಆಳ್ವಾಸ್ ಫೌಂಡೇಶನ್ ಟ್ರಸ್ಟಿ ವಿವೇಕ್ ಆಳ್ವ ಸಹಿತ ಪ್ರತಿಯೊಬ್ಬರಿಗೂ ಧನ್ಯವಾದ ಸಲ್ಲಿಸಿದರು.ತಾಲೂಕು ಇದೀಗ ಜಿಲ್ಲಾ ಕೇಂದ್ರಕ್ಕೆ ಆಗತ್ಯವಾದ ಸಕಲ ಸೌಲಭ್ಯ ಹೊಂದಿದ್ದು, ನೀರಾವರಿ, ಶಿಕ್ಷಣ, ಆರೋಗ್ಯ ಸಹಿತ ಮೂಲಭೂತ ಸೌಲಭ್ಯದ ಮೂಲಕ ಕ್ರಾಂತಿಕಾರಕ ಬದಲಾವಣೆಯಾಗಿದೆ ಎಂದ ಅವರು, ಉದ್ಯೋಗಾಕಾಂಕ್ಷಿಗಳು ವೇತನ, ಹುದ್ದೆ, ಸ್ಥಳದ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳದೆ ಸಂಕೋಚ ಮುಜುಗರ ತೊರೆದು ಮನೆಯಲ್ಲಿ ಕುಳಿತುಕೊಳ್ಳದೆ ಅವಕಾಶ ಸದ್ಭಳಕೆ ಮೂಲಕ ಭವಿಷ್ಯಕ್ಕೆ ಹೆಚ್ಚು ಗಮನ ನೀಡುವಂತೆ ಕಿವಿಮಾತು ಹೇಳಿದರು.
ಯಡಿಯೂರಪ್ಪನವರ ಹುಟ್ಟುಹಬ್ಬದ ಅಂಗವಾಗಿ ಇದೇ 27ರಂದು ಕುಮದ್ವತಿ ಕಾಲೇಜಿನ ಏಕಲವ್ಯ ಕ್ರೀಡಾಂಗಣದಲ್ಲಿ ಸುದೀರ್ಘ ಕಾಲ ರಾಜಕೀಯ ಕ್ಷೇತ್ರದಲ್ಲಿ ಹರಸಿ ಬೆಳೆಸಿದ ತಾಲೂಕಿನ ಎಲ್ಲ ಸಮಾಜದ ಮುಖಂಡರಿಗೆ ಸಂಜೆ 4ಕ್ಕೆ ಗೌರವ ಸಮರ್ಪಣೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಪಾಲ್ಗೊಳ್ಳಲಿದ್ದು, ಆನಂದಪುರ ಮುರುಘಾಮಠದ ಶ್ರೀ ಮ.ನಿ.ಪ್ರ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮಿಗಳು ಸಾನ್ನಿದ್ಯ ವಹಿಸಲಿದ್ದಾರೆ. ನಂತರದಲ್ಲಿ ಹೆಸರಾಂತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾ ತಂಡದಿಂದ ಸಂಗೀತ ಕಾರ್ಯಕ್ರಮದಲ್ಲಿ ಗಾಯಕಿ ಮಂಗ್ಲೀಬಾಯಿ, ಹನುಮಂತ ನಾಯ್ಕ, ಗಿಲ್ಲಿ ಮತ್ತಿತರರು ಪಾಲ್ಗೊಳ್ಳಲಿದ್ದಾರೆ, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುವಂತೆ ಮನವಿ ಮಾಡಿದರು.
ಕಾರ್ಯಕ್ರಮ ಉದ್ಟಾಟಿಸಿದ ಆಳ್ವಾಸ್ ಫೌಂಡೇಶನ್ ಟ್ರಸ್ಟಿ ವಿವೇಕ್ ಆಳ್ವ, ರಾಜ್ಯ ರಾಜಕಾರಣದಲ್ಲಿ ಯಡಿಯೂರಪ್ಪನವರು ವಿಶೇಷವಾಗಿ ಗುರುತಿಸಿಕೊಂಡಿದ್ದು, ರಾಜ್ಯಾದ್ಯಂತ ಅವರಿಗೆ ದೊರೆಯುವ ಪ್ರಾತಿನಿದ್ಯತೆ ಇತರೆ ರಾಜಕಾರಣಿಗಳಿಗೆ ಕಾಣಲು ಸಾದ್ಯವಿಲ್ಲ. ಇದೀಗ ಅಪ್ಪನ ಹಾದಿಯಲ್ಲಿ ಮಕ್ಕಳು ಸಾಗುತ್ತಿದ್ದಾರೆ ಎಂದು ತಿಳಿಸಿ ಯಡಿಯೂರಪ್ಪನವರ ಹುಟ್ಟುಹಬ್ಬಕ್ಕೆ ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗುವ ಮೂಲಕ ಉಡುಗೊರೆ ನೀಡುವಂತೆ ತಿಳಿಸಿದರು.
ಡಾ.ಶಿವಕುಮಾರ್ ಸ್ವಾಗತಿಸಿ, ಕೋಟೋಜಿರಾವ್ ನಿರೂಪಿಸಿ ವಂದಿಸಿದರು.