ವಲಸಿಗರಿಂದ ಸ್ಥಳೀಯ ಕಾರ್ಮಿಕರ ಉದ್ಯೋಗಕ್ಕೆ ಕತ್ತರಿ

KannadaprabhaNewsNetwork |  
Published : Oct 01, 2026, 01:45 AM IST
30ಎಚ್ಎಸ್ಎನ್14 :  | Kannada Prabha

ಸಾರಾಂಶ

ಹೊರರಾಜ್ಯಗಳಿಂದ ಬರುವ ಕಾರ್ಮಿಕರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯರಿಗೆ ಕೆಲಸದ ಅವಕಾಶಗಳು ಕಡಿಮೆಯಾಗುತ್ತಿವೆ. ಇದರಿಂದ ಸಣ್ಣಪುಟ್ಟ ಗುತ್ತಿಗೆ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಜೀವನ ನಡೆಸುವುದಕ್ಕೂ ತೊಂದರೆಯಾಗುತ್ತಿದೆ ಎಂದರು. ಹೊರರಾಜ್ಯಗಳಿಂದ ಕಾರ್ಮಿಕರು ಉದ್ಯೋಗ ಅರಸಿ ಕರ್ನಾಟಕಕ್ಕೆ ಬರುವ ಪರಿಸ್ಥಿತಿ ಏಕೆ ನಿರ್ಮಾಣವಾಗಿದೆ ಎಂಬುದನ್ನು ಆಯಾ ರಾಜ್ಯ ಸರ್ಕಾರಗಳು ಪರಿಶೀಲಿಸಬೇಕು. ತಮ್ಮ ರಾಜ್ಯದಲ್ಲಿಯೇ ಕಾರ್ಮಿಕರಿಗೆ ಕೂಲಿ ಕೆಲಸ ಕಲ್ಪಿಸಲು ಸಾಧ್ಯವಾಗದಿದ್ದರೆ, ಅಲ್ಲಿನ ಸರ್ಕಾರಗಳು ಜನರ ಜೀವನೋಪಾಯಕ್ಕಾಗಿ ಕೈಗೊಂಡಿರುವ ಕ್ರಮಗಳೇನು ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಪ್ರಶ್ನಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ಹೊರರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಬಂದಿರುವ ವಲಸೆ ಕಾರ್ಮಿಕರಿಂದ ಸ್ಥಳೀಯ ಕಟ್ಟಡ ಕಾರ್ಮಿಕರಿಗೆ ಕೆಲಸದ ಅವಕಾಶಗಳು ಕಡಿಮೆಯಾಗಿದ್ದು, ಜೀವನ ನಿರ್ವಹಣೆ ಕಷ್ಟಕರವಾಗಿದೆ ಎಂದು ಕಟ್ಟಡ ಕಾರ್ಮಿಕರು ಬುಧವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಇದೇ ವೇಳೆ ಮಾಧ್ಯಮದೊಂದಿಗೆ ದಯಾನಂದ್ ಕುಮಾರ್‌ ಮಾತನಾಡಿ, ಸ್ಥಳೀಯವಾಗಿ ಕಟ್ಟಡ ನಿರ್ಮಾಣ ಸೇರಿದಂತೆ ಸಣ್ಣಪುಟ್ಟ ಗುತ್ತಿಗೆ ಕಾಮಗಾರಿಗಳನ್ನು ಪಡೆದುಕೊಂಡು ನಾಲ್ಕಾರು ಕಾರ್ಮಿಕರನ್ನು ಕೆಲಸಕ್ಕೆ ತೆಗೆದುಕೊಂಡು ಜೀವನ ಸಾಗಿಸುತ್ತಿದ್ದೇವೆ. ಆದರೆ ಹೊರರಾಜ್ಯಗಳಿಂದ ಬರುವ ಕಾರ್ಮಿಕರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯರಿಗೆ ಕೆಲಸದ ಅವಕಾಶಗಳು ಕಡಿಮೆಯಾಗುತ್ತಿವೆ. ಇದರಿಂದ ಸಣ್ಣಪುಟ್ಟ ಗುತ್ತಿಗೆ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಜೀವನ ನಡೆಸುವುದಕ್ಕೂ ತೊಂದರೆಯಾಗುತ್ತಿದೆ ಎಂದರು. ಹೊರರಾಜ್ಯಗಳಿಂದ ಕಾರ್ಮಿಕರು ಉದ್ಯೋಗ ಅರಸಿ ಕರ್ನಾಟಕಕ್ಕೆ ಬರುವ ಪರಿಸ್ಥಿತಿ ಏಕೆ ನಿರ್ಮಾಣವಾಗಿದೆ ಎಂಬುದನ್ನು ಆಯಾ ರಾಜ್ಯ ಸರ್ಕಾರಗಳು ಪರಿಶೀಲಿಸಬೇಕು. ತಮ್ಮ ರಾಜ್ಯದಲ್ಲಿಯೇ ಕಾರ್ಮಿಕರಿಗೆ ಕೂಲಿ ಕೆಲಸ ಕಲ್ಪಿಸಲು ಸಾಧ್ಯವಾಗದಿದ್ದರೆ, ಅಲ್ಲಿನ ಸರ್ಕಾರಗಳು ಜನರ ಜೀವನೋಪಾಯಕ್ಕಾಗಿ ಕೈಗೊಂಡಿರುವ ಕ್ರಮಗಳೇನು ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಪ್ರಶ್ನಿಸಿದರು.

ಕರ್ನಾಟಕದಲ್ಲಿಯೂ ಬೆಲೆ ಏರಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವ ಸಂದರ್ಭದಲ್ಲಿ ಕೆಲಸದ ಅವಕಾಶಗಳು ಕಡಿಮೆಯಾದರೆ ಸ್ಥಳೀಯ ಕಾರ್ಮಿಕರು ಜೀವನ ನಡೆಸುವುದು ಹೇಗೆ ಎಂಬುದು ಗಂಭೀರ ಪ್ರಶ್ನೆಯಾಗಿದೆ. ಕುಟುಂಬ ನಿರ್ವಹಣೆ, ಮಕ್ಕಳ ಶಿಕ್ಷಣ ಸೇರಿದಂತೆ ಮೂಲಭೂತ ಅಗತ್ಯಗಳನ್ನು ಪೂರೈಸಲು ನಿರಂತರ ಕೆಲಸ ಅಗತ್ಯವಿದೆ ಎಂದು ತಿಳಿಸಿದರು.

ಸ್ಥಳೀಯ ಕಾರ್ಮಿಕರು ವರ್ಷಗಳಿಂದ ಕಟ್ಟಡ ನಿರ್ಮಾಣ ಕ್ಷೇತ್ರದಲ್ಲಿ ದುಡಿಯುತ್ತಿದ್ದು, ಅವರಿಗೆ ಕೆಲಸದ ಅವಕಾಶ ಹಾಗೂ ಸೂಕ್ತ ಮಾನ್ಯತೆ ದೊರೆಯಬೇಕು. ಸ್ಥಳೀಯ ಕಾರ್ಮಿಕರಿಗೆ ಕೆಲಸವೇ ಇಲ್ಲದ ಪರಿಸ್ಥಿತಿಯಲ್ಲಿ ಹೊರರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರನ್ನು ಕರೆತರುವುದರಿಂದ ಸಮಸ್ಯೆ ಮತ್ತಷ್ಟು ಉಲ್ಬಣಗೊಳ್ಳುತ್ತಿದೆ. ಸರ್ಕಾರ ಈ ಬಗ್ಗೆ ಗಮನಹರಿಸಿ ಸ್ಥಳೀಯ ಕಾರ್ಮಿಕರ ಹಿತ ಕಾಪಾಡಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಹೊರರಾಜ್ಯಗಳಿಂದ ಆಗಮಿಸುವ ಕಾರ್ಮಿಕರ ವಿಚಾರದಲ್ಲಿ ಸರ್ಕಾರ ಸೂಕ್ತ ನಿಯಮ ರೂಪಿಸಿ, ಸ್ಥಳೀಯ ಕಾರ್ಮಿಕರಿಗೆ ಉದ್ಯೋಗದಲ್ಲಿ ಆದ್ಯತೆ ದೊರೆಯುವಂತೆ ಮಾಡಬೇಕು. ಕಟ್ಟಡ ಕಾರ್ಮಿಕರ ಜೀವನೋಪಾಯಕ್ಕೆ ಧಕ್ಕೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕಾರ್ಮಿಕರಾದ ಕಿರಣ್ ಕುಮಾರ್‌, ನಂದೇಶ್, ಸೋಮಶೇಖರ್‌, ರವಿ, ಜಯಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿಕ್ಷಕರು ರಾಜಕೀಯದಿಂದ ದೂರ ಉಳಿಯಬೇಕು: ಪಿ.ಎಂ.ನರೇಂದ್ರಸ್ವಾಮಿ
ಅಂಕಗಳು ಕಲಿಕೆಯ ಒಂದು ಭಾಗವೇ ಹೊರತು ಅದೇ ಶಿಕ್ಷಣದ ಮೂಲ ಗುರಿಯಲ್ಲ