ಕನ್ನಡಪ್ರಭ ವಾರ್ತೆ ಹಾಸನ
ಅವರು ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಜಿಲ್ಲಾ ಹಾಸನ ಶಾಖೆಯ ವತಿಯಿಂದ 202- 26ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿ, ಹಾಸನ ಜಿಲ್ಲೆಯಲ್ಲಿ ರೆಡ್‌ಕ್ರಾಸ್ ಸಂಸ್ಥೆಯ ವತಿಯಿಂದ ರಕ್ತದಾನ ಶಿಬಿರಗಳು, ಆರೋಗ್ಯ ತಪಾಸಣಾ ಶಿಬಿರಗಳು ಹಾಗೂ ವಿವಿಧ ಅರಿವು ಮೂಡಿಸುವ ಕಾರ್ಯಕ್ರಮ ಸೇರಿದಂತೆ ಹಲವು ಮಾನವೀಯ ಸೇವಾ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು. ತಾವು ಬಾಲ್ಯದಲ್ಲಿಯೇ ರೆಡ್‌ಕ್ರಾಸ್ ಸಂಸ್ಥೆಯ ಬಗ್ಗೆ ತಿಳಿದುಕೊಂಡಿದ್ದು, ಇದೀಗ ಅದೇ ಸಂಸ್ಥೆಯ ಜಿಲ್ಲಾ ಮಟ್ಟದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವುದು ಅತ್ಯಂತ ಸಂತೋಷದಾಯಕವಾಗಿದೆ ಎಂದು ಹೇಳಿದರು. ಮುಂದಿನ ದಿನಗಳಲ್ಲಿಯೂ ರೆಡ್‌ಕ್ರಾಸ್ ಸಂಸ್ಥೆಯ ವತಿಯಿಂದ ಇನ್ನಷ್ಟು ಮಾನವೀಯ ಹಾಗೂ ಸಮಾಜಮುಖಿ ಕಾರ್ಯಕ್ರಮಗಳು ನಡೆಯಲಿ ಎಂದು ಆಶಿಸಿದರು.
ಇದೇ ಸಂದರ್ಭದಲ್ಲಿ ರೆಡ್‌ಕ್ರಾಸ್ ಸಂಸ್ಥೆಯ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಣಾ ಬುಟ್ಟಿಯನ್ನು ಉದ್ಘಾಟಿಸಲಾಯಿತು. ಮುಂದಿನ ದಿನಗಳಲ್ಲಿ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಪ್ರಮುಖ ಸ್ಥಳಗಳಲ್ಲಿ ಇಂತಹ ತ್ಯಾಜ್ಯ ಸಂಗ್ರಹಣಾ ಬುಟ್ಟಿಗಳನ್ನು ಉಚಿತವಾಗಿ ಅಳವಡಿಸಲಾಗುವುದು ಎಂದು ಸಂಸ್ಥೆಯ ಸಭಾಪತಿ ಹೆಮ್ಮಿಗೆ ಮೋಹನ್ ಅವರು ತಿಳಿಸಿದರು.ಕಾರ್ಯಕ್ರಮದಲ್ಲಿ ರೆಡ್‌ಕ್ರಾಸ್ ಸಂಸ್ಥೆಯ ಕಾರ್ಯಕಾರಿಣಿ ಮಂಡಳಿಯ ನಿರ್ದೇಶಕರು, ಸದಸ್ಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.