ಕನ್ನಡಪ್ರಭ ವಾರ್ತೆ ಮಡಿಕೇರಿ
ಶುಕ್ರವಾರ ಸಂಜೆ 6ಕ್ಕೆ ರಸಮಂಜರಿ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಶನಿವಾರ ಬೆಳಗ್ಗೆ 9 ಗಂಟೆಗೆ ‘ಮಕ್ಕಳ ದಸರಾ’ ನಡೆಯಲಿದೆ. ಜೊತೆಗೆ ಸಂಜೆ 6 ಗಂಟೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
6ರಂದು ಬೆಳಗ್ಗೆ 10 ಗಂಟೆಗೆ ‘ಕಾಫಿ ದಸರಾ’ ನಡೆಯಲಿದ್ದು, ಕೃಷಿ ಸಂಬಂಧಿಸಿದ ಉಪಯುಕ್ತ ಮಾಹಿತಿ ಉಳ್ಳ ಪ್ರದರ್ಶನ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ಪಾಲ್ಗೊಳ್ಳುವ ಸಾಧ್ಯತೆ ಇದೆ. ಸಂಜೆ 6 ಗಂಟೆಗೆ ಹೆಸರಾಂತ ಕಲಾವಿದರಿಂದ ರಸಮಂಜರಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ವಿವರಿಸಿದರು.8ರಂದು ಮಹಿಳಾ ದಸರಾ:
7ರಂದು ಸ್ಟಾರ್ ಸಿಂಗರ್ ಪ್ರಶಸ್ತಿ ವಿಜೇತ ಅವಿರ್ಭವ್ ಅವರಿಂದ ಗಾನಸುಧೆ ನಡೆಯಲಿದೆ. 8ರಂದು ಬೆಳಗ್ಗೆ 10 ಗಂಟೆಗೆ ‘ಮಹಿಳಾ ದಸರಾ’ ನಡೆಯಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.9ರಂದು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ. 10ರಂದು ಬೆಳಗ್ಗೆ 10 ಗಂಟೆಗೆ ಕೊಡಗು ಜಿಲ್ಲಾ ಜಾನಪದ ಪರಿಷತ್ತು ಸಹಯೋಗದಲ್ಲಿ ‘ಜಾನಪದ ದಸರಾ’ ನಡೆಯಲಿದೆ. ಸಂಜೆ 6 ಗಂಟೆಗೆ ‘ಯುವದಸರಾ’ ನಡೆಯಲಿದ್ದು, ಯುವ ದಸರಾಗೆ ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಆಗಮಿಸುವ ಸಾಧ್ಯತೆ ಇದೆ ಎಂದು ತಿಳಿಸಿದರು.
11ರಂದು ಆಯುಧ ಪೂಜೆ:11ರ ಆಯುಧ ಪೂಜೆಯಂದು ಸಂಜೆ 6 ಗಂಟೆಗೆ ನಾಡಿನ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ, ಹಿನ್ನೆಲೆ ಗಾಯಕ ರಾಜೇಶ್ ಕಷ್ಣನ್ ಮತ್ತು ತಂಡದವರಿಂದ ಸಂಗೀತ ರಸಮಂಜರಿ ನಡೆಯಲಿದೆ.
11 ಅಥವಾ 12ರಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಅವರು ಆಗಮಿಸುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿ ವಿವರಿಸಿದರು.