ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ 79ನೇ ಸ್ವಾತಂತ್ರ್ಯ ದಿನವನ್ನು ತಾಲೂಕು ಆಡಳಿತ ಸೌಧದ ಮುಂಭಾಗ ಆಚರಿಸಲಾಯಿತು. ಬಂಟ್ವಾಳ ತಹಸೀಲ್ದಾರ್ ಅರ್ಚನಾ ಭಟ್ ಧ್ವಜಾರೋಹಣ ನೆರವೇರಿಸಿದರು. ಶಾಸಕ ರಾಜೇಶ್ ನಾಯ್ಕ್ ವಿವಿಧ ತುಕುಡಿಗಳಿಂದ ಗೌರವ ವಂದನೆ ಸ್ವೀಕರಿಸಿದರು.
ಕನ್ನಡಪ್ರಭ ವಾರ್ತೆ ಬಂಟ್ವಾಳ
ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ 79ನೇ ಸ್ವಾತಂತ್ರ್ಯ ದಿನವನ್ನು ತಾಲೂಕು ಆಡಳಿತ ಸೌಧದ ಮುಂಭಾಗ ಆಚರಿಸಲಾಯಿತು. ಬಂಟ್ವಾಳ ತಹಸೀಲ್ದಾರ್ ಅರ್ಚನಾ ಭಟ್ ಧ್ವಜಾರೋಹಣ ನೆರವೇರಿಸಿದರು. ಶಾಸಕ ರಾಜೇಶ್ ನಾಯ್ಕ್ ವಿವಿಧ ತುಕುಡಿಗಳಿಂದ ಗೌರವ ವಂದನೆ ಸ್ವೀಕರಿಸಿದರು.ಬಳಿಕ ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಅರ್ಚನಾ ಭಟ್ ಸಂದೇಶ ನೀಡಿ, ನಮಗೆ ಸಿಕ್ಕಿರುವ ಸ್ವಾತಂತ್ರ್ಯವನ್ನು ದುರುಪಯೋಗ ಪಡಿಸದೆ ರಾಷ್ಟ್ರದ ಪ್ರಗತಿಗೆ ಕೈ ಜೋಡಿಸಬೇಕು ಎಂದರು.ಬಂಟ್ವಾಳ ಪುರಸಭಾಧ್ಯಕ್ಷ ಬಿ.ವಾಸು ಪೂಜಾರಿ ಅಧ್ಯಕ್ಷತೆ ವಹಿಸಿ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ಬಂದು 79 ವರ್ಷ ಸಂದರೂ ಇಂದಿಗೂ ಅನೇಕ ಮಂದಿ ಮೂಲಸೌಲಭ್ಯದಿಂದ ವಂಚಿತರಾದ ಜನರಿದ್ದಾರೆ. ಅವರಿಗೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿ ವರ್ಗ ಮೂಲಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಸ್ಪಂದನೆ ನೀಡುವ ಕಾರ್ಯ ಆಗಬೇಕಿದೆ ಎಂದು ಹೇಳಿದರು.ಬೂಡ ಅಧ್ಯಕ್ಷ ಬೇಬಿ ಕುಂದರ್ ಮಾತನಾಡಿದರು.ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ಪೂಜಾರಿ ಶುಭ ಹಾರೈಸಿದರು. ಎಸ್‌ವಿಎಸ್ ವಿದ್ಯಾಗಿರಿ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಭೂಮಿಕಾ ಎಸ್. ಶೆಟ್ಟಿ ಉಪನ್ಯಾಸ ನೀಡಿದರು.ಇಲಾಖಾಧಿಕಾರಿಗಳಾದ ಸಚಿನ್ ಕುಮಾರ್, ಜೋ ಪ್ರದೀಪ್ ಡಿಸೋಜಾ, ನೋಣಯ್ಯ ನಾಯ್ಕ, ಅಶೋಕ್ ಕುಮಾರ್ ರೈ, ಎಸ್.ಆರ್. ನಾಯಕ್, ಶಶಾಂಕ್, ಪೊಲೀಸ್ ಸಂದೀಪ್ ಕೆ.ಎಸ್., ಆಶಾನಾಯಕ್, ವಿನಯ ಕುಮಾರಿ ಉಪಸ್ಥಿತರಿದ್ದರು.ಗೋಪಾಲಕೃಷ್ಣ ನೇರಳಕಟ್ಟೆ ಹಾಗೂ ಸುರೇಖಾ ಯಳವಾರ ಕಾರ್ಯಕ್ರಮ ನಿರೂಪಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.