ಮಾದಕ ವಸ್ತುಗಳ ನಿರ್ಮೂಲನೆಗೆ ಕೈ ಜೋಡಿಸಿ

KannadaprabhaNewsNetwork | Published : Apr 30, 2025 2:05 AM

ಸಾರಾಂಶ

ಮಾದಕ ದ್ರವ್ಯಗಳು ಮತ್ತು ಮನೋವಿಕೃತ ಪದಾರ್ಥಗಳ ಅಕ್ರಮ ಸ್ವಾದೀನ, ಮಾರಾಟ, ಸಾಗಾಣೆ ಮತ್ತು ಸೇವನೆಯ ನಿಯಂತ್ರಣ, ನಿಯಂತ್ರಣ ಮತ್ತು ಮೇಲ್ವಿಚಾರಣೆಗಾಗಿ ಕಠಿಣ ನಿಬಂಧನೆಗಳನ್ನು ಮಾದಕ ವಸ್ತುಗಳು ಹಾಗೂ ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆ 1985ರಲ್ಲಿ ಸ್ಥಾಪಿಸಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣನವರ್ ಹೇಳಿದ್ದಾರೆ.

- ಕಾನೂನು ಜಾಗೃತಿ ಕಾರ್ಯಕ್ರಮದಲ್ಲಿ ನ್ಯಾ. ಮಹಾವೀರ ಮ. ಕರೆಣ್ಣನವರ್

- - -

ಕನ್ನಡಪ್ರಭ ವಾರ್ತೆ ದಾವಣಗೆರೆ ಮಾದಕ ದ್ರವ್ಯಗಳು ಮತ್ತು ಮನೋವಿಕೃತ ಪದಾರ್ಥಗಳ ಅಕ್ರಮ ಸ್ವಾದೀನ, ಮಾರಾಟ, ಸಾಗಾಣೆ ಮತ್ತು ಸೇವನೆಯ ನಿಯಂತ್ರಣ, ನಿಯಂತ್ರಣ ಮತ್ತು ಮೇಲ್ವಿಚಾರಣೆಗಾಗಿ ಕಠಿಣ ನಿಬಂಧನೆಗಳನ್ನು ಮಾದಕ ವಸ್ತುಗಳು ಹಾಗೂ ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆ 1985ರಲ್ಲಿ ಸ್ಥಾಪಿಸಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣನವರ್ ಹೇಳಿದರು.

ನಗರದ ಆರ್.ಎಲ್. ಕಾನೂನು ಕಾಲೇಜಿನ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಮತ್ತು ರಾಷ್ಟ್ರೀಯ ಸೇವಾ ಯೋಜನೆ, ಆರ್.ಎಲ್. ಕಾನೂನು ಕಾಲೇಜು ಸಹಯೋಗದೊಂದಿಗೆ ನಡೆದ ಮಾದಕ ವಸ್ತುಗಳು ಹಾಗೂ ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆ 1985 ರ ಕುರಿತು ಕಾನೂನು ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ದೇಶದ ಅಭಿವೃದ್ಧಿಗೆ ಮಾರಕವಾಗಿರುವ ಹಲವು ಪೀಡೆಗಳ ಸಮಾಧಿಯ ಮೇಲೆ ಸದೃಢ ಸಮೃದ್ಧ ಭಾರತವನ್ನು ಕಟ್ಟಬೇಕಾಗಿದೆ. ಸಾರ್ವಜನಿಕರು ಮಾದಕ ವಸ್ತುಗಳ ಪಿಡುಗನ್ನು ನಿರ್ಮೂಲನೆ ಮಾಡಲು ಒಟ್ಟಾಗಿ ಈ ಪಿಡುಗಿನ ವಿರುದ್ಧ ಕೈ ಜೋಡಿಸಬೇಕೆಂದು ತಿಳಿಸಿದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಎಚ್. ಅರುಣಕುಮಾರ್ ಮಾತನಾಡಿ, ಭಾರತ ದೇಶ ಯುವಕರ ದೇಶವಾಗಿದ್ದು, ದೇಶದ ಜನಸಂಖ್ಯೆಯ ಅರ್ಧಕ್ಕಿಂತಲೂ ಹೆಚ್ಚು ಯುವಕರು ತುಂಬಿದ್ದಾರೆ. ಭಾರತದ ಯುವಸಮೂಹವನ್ನು ಕಂಡು ಬೇರೆ ದೇಶಗಳು ಬೆರಗಾಗಿವೆ. ಬಹುರಾಷ್ಟ್ರೀಯ ಕಂಪನಿಗಳಲ್ಲಿ ಭಾರತೀಯ ಯುವಕರಿಗೆ ಎಲ್ಲಿಲ್ಲದ ಬೇಡಿಕೆಯಿದೆ. ಸುಭದ್ರ ಸದೃಢ ರಾಷ್ಟçವನ್ನು ಕಟ್ಟಲು ಯುವಕರ ಪಾತ್ರ ಬಹಳ ಮುಖ್ಯವಾಗಿದೆ ಎಂದರು.

ಸಹಾಯಕ ಪ್ರಾಧ್ಯಾಪಕ ಕೆ.ಎನ್. ಪ್ರದೀಪ್ ಕೆ.ಎನ್. ಅಧ್ಯಕ್ಷತೆ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ದ್ದ ಸಹಾಯಕ ಕಾನೂನು ನೆರವು ಅಭಿರಕ್ಷಕರಾದ ಮಹಾದೇವಿ ಸಿ. ಹಿರೇಮಠ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಲಹೆಗಾರ ಸತೀಶ್ ಕಲಹಾಳ್, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಎಚ್.ಆರ್.ಪವನ್, ಸಹಾಯಕ ಪ್ರಾಧ್ಯಾಪಕ ಟಿ.ವಿದ್ಯಾಧರ ವೇದವರ್ಮ, ಉಪನ್ಯಾಸಕರು, ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

- - -

-29ಕೆಡಿವಿಜಿ44:

ದಾವಣಗೆರೆಯ ಆರ್.ಎಲ್. ಕಾನೂನು ಕಾಲೇಜಿನಲ್ಲಿ ನಡೆದ ಕಾನೂನು ಜಾಗೃತಿ ಕಾರ್ಯಕ್ರಮವನ್ನು ಮಹಾವೀರ ಮ. ಕರೆಣ್ಣವರ್ ಉದ್ಘಾಟಿಸಿದರು.

Share this article