ಕನ್ನಡಪ್ರಭ ವಾರ್ತೆ ಮಂಗಳೂರು
ಸುಭದ್ರ ಮತ್ತು ಸಮೃದ್ಧ ದೇಶ ಕಟ್ಟುವಲ್ಲಿ ವಕೀಲರ ಪಾತ್ರ ಅತ್ಯಂತ ಮಹತ್ವದ್ದು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಲಿಷ್ಠ, ವಿಕಸಿತ ಭಾರತವನ್ನು ಕಟ್ಟಲು ವಕೀಲರ ಸಮುದಾಯ ಮಹತ್ವದ ಯೋಗದಾನ ನೀಡಬೇಕು ಎಂದು ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಹೇಳಿದ್ದಾರೆ.ನಗರದಲ್ಲಿರುವ ಬಿಜೆಪಿಯ ಜಿಲ್ಲಾ ಚುನಾವಣೆ ಕಾರ್ಯಾಲಯದಲ್ಲಿ ಸೋಮವಾರ ನಡೆದ ವಕೀಲರ ಪರಿಷತ್ ಸಭೆಯಲ್ಲಿ ಅವರು ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ವಿಕಸಿತ ಭಾರತವನ್ನು ನಿರ್ಮಿಸುವಲ್ಲಿ ವಕೀಲರ ಸಮುದಾಯ ಕೈಜೋಡಿಸಬೇಕು ಎಂದು ಕರೆ ನಿಡಿದರು.ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಶಾಸಕ ಡಿ ವೇದವ್ಯಾಸ ಕಾಮತ್, ಹಿರಿಯರಾದ ಮೋನಪ್ಪ ಭಂಡಾರಿ, ಶಂಭು ಶರ್ಮ, ಸುಧಾಕರ ಜೋಶಿ, ಪ್ರಕೋಷ್ಠಗಳ ಜಿಲ್ಲಾ ಸಂಚಾಲಕ ಪ್ರಸನ್ನ ದರ್ಭೆ ಮತ್ತಿತರರು ಇದ್ದರು.
--------------*ಕದ್ರಿ ಪಾರ್ಕಿನಲ್ಲಿ ಬೆಳಗಿನ ವಾಯುವಿಹಾರದಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಿದ ಕ್ಯಾಪ್ಟನ್:*ಇಂದು ಮುಂಜಾನೆ ಮಂಗಳೂರು ನಗರದಲ್ಲಿರುವ ಕದ್ರಿ ಪಾರ್ಕಿನಲ್ಲಿ ಕ್ಯಾಪ್ಟನ್ ಬ್ರಿಜೇಶ್ ಚೌಟರವರು ವಾಯುವಿಹಾರದ ವೇಳೆ ಸಾರ್ವಜನಿಕರನ್ನು ಭೇಟಿ ಮಾಡಿ ಕುಶಲೋಪರಿಯಾಗಿ ವಿಚಾರಿಸಿ ಕೆಲ ಸಮಯ ಕಳೆದರು. ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಕ್ಕೆ ಭೇಟಿ ನೀಡಿ ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿ ಹಾಗೂ ಕಣಿಯೂರು ಶ್ರೀ ಚಾಮುಂಡೇಶ್ವರೀ ದೇವಿ ಕ್ಷೇತ್ರದ ಶ್ರೀ ಮಹಾಬಲ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.ಮನಪಾ ಬಿಜೆಪಿ ಪ್ರತಿನಿಧಿಗಳ ಮಹತ್ವದ ಸಭೆದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು, ಜಿಲ್ಲಾ ಬಿಜೆಪಿ ಚುನಾವಣಾ ಕಚೇರಿಯಲ್ಲಿ ಮಹಾನಗರ ಪಾಲಿಕೆ ಸದಸ್ಯರ ಮಹತ್ವದ ಸಂಘಟನಾತ್ಮಕ ಸಭೆ ನಡೆಯಿತು.
ಜಿಲ್ಲಾ ಚುನಾವಣಾ ಪ್ರಭಾರಿ ಕ್ಯಾ. ಗಣೇಶ್ ಕಾರ್ಣಿಕ್, ಜಿಲ್ಲಾ ಚುನಾವಣಾ ಉಸ್ತುವಾರಿ ನಿತಿನ್ ಕುಮಾರ್, ಪಕ್ಷದ ಹಿರಿಯರಾದ ಮೋನಪ್ಪ ಭಂಡಾರಿ, ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಅವರು ಚುನಾವಣೆ ಎದುರಿಸುವ ನಿಟ್ಟಿನಲ್ಲಿ ಮಾರ್ಗದರ್ಶನ ಮಾಡಿದರು.