ಸದೃಢ ಭಾರತ ನಿರ್ಮಾಣಕ್ಕೆ ಕೈಜೋಡಿಸಿ

KannadaprabhaNewsNetwork |  
Published : Dec 25, 2023, 01:31 AM ISTUpdated : Dec 25, 2023, 01:32 AM IST
(ಫೋಟೋ 24ಬಿಕೆಟಿ3,ಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನೆ. ) | Kannada Prabha

ಸಾರಾಂಶ

ವಿದ್ಯಾರ್ಥಿಗಳು ಸರ್ವಾಂಗೀಣ ಅಭಿವೃದ್ಧಿ ಜೊತೆಗೆ ಸದೃಢ ಭಾರತ ನಿರ್ಮಾಣಕ್ಕೆ ಕೈಜೋಡಿಸುವ ಅಗತ್ಯತೆ ಇದೆ: ಎಂದು ಅಂತಾರಾಷ್ಟ್ರೀಯ ಹಾಕಿ ಕೋಚ್ ಶಂಕರ ತೋಳಮಟ್ಟಿ

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ವಿದ್ಯಾರ್ಥಿಗಳು ಸರ್ವಾಂಗೀಣ ಅಭಿವೃದ್ಧಿ ಜೊತೆಗೆ ಸದೃಢ ಭಾರತ ನಿರ್ಮಾಣಕ್ಕೆ ಕೈಜೋಡಿಸುವ ಅಗತ್ಯತೆ ಇದೆ ಎಂದು ಅಂತಾರಾಷ್ಟ್ರೀಯ ಹಾಕಿ ಕೋಚ್ ಶಂಕರ ತೋಳಮಟ್ಟಿ ಹೇಳಿದರು.

ಅವರು ನಗರದ ಬಿ.ವ್ಹಿ.ವ್ಹಿ.ಸಂಘ ವಾಣಿಜ್ಯ ಮಹಾವಿದ್ಯಾಯದ ನೂತನ ಸಭಾ ಭನದಲ್ಲಿ ನಡೆದ ಸಾಂಸ್ಕೃತಿಕ ಕ್ರೀಡಾ ಹಾಗೂ ಎನ್.ಎನ್.ಎಸ್, ಸ್ಕೌಟ್ಸ್‌, ಕ್ರೀಡಾ ಚಟುವಟಿಕೆಗಳಿಗೆ ಸಸಿಗೆ ನೀರೂಣಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಆಧುನಿಕ ಜಗತ್ತಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ವಿಫುಲ ಅವಕಾಶಗಳಿವೆ. ಸಾಂಸ್ಕೃತಿಕ ಚಟುವಟಿಕೆಗಳಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಗೊಳ್ಳುವುದು, ತಮ್ಮೊಳಗಿನ ಶಕ್ತಿಯ ಅರಿವು ಮುಖ್ಯ. ಎಲ್ಲರಲ್ಲಿಯೂ ಪ್ರತಿಭೆ ಇರುತ್ತದೆ. ವಿದ್ಯಾರ್ಥಿಗಳ ಪ್ರತಿಭೆಗಳ ಅನಾವರಣಗೊಳಿಸಲು ಈ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳನ್ನು ಹಮ್ಮಿಕೊಂಡಿದ್ದು, ವಿದ್ಯಾರ್ಥಿಗಳ ಸಾಧನೆಗೆ ಇದು ಮೊದಲನೇ ಮೆಟ್ಟಿಲು, ಮೊಬೈಲ್‌ನಿಂದ ಜೀವನ ರೂಪಿಸಲೂ ಸಾಧ್ಯವಿಲ್ಲ. ಪುಸ್ತಕದ ಜ್ಞಾನ, ಸಾಮಾನ್ಯ ಜ್ಞಾನದಿಂದ ಜೀವನ ರೂಪಿಸಿಕೊಳ್ಳಲು ಸಾಧ್ಯ. ವಿದೇಶಿ ಸಂಸ್ಕೃತಿಯಿಂದ ಜೀವನ ಪದ್ಧತಿ ನಾಶವಾಗದಿರಲಿ, ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಭಾರತೀಯ ಮೂಲ ಸಂಸ್ಕೃತಿ ಹಾಗೂ ಮೂಲ ಆಹಾರ ಪದ್ಧತಿಗಳನ್ನು ಅಳವಡಿಸಿಕೊಂಡು ಜೀವನ ಗಟ್ಟಿಗೊಳಿಸುವುದರ ಜೊತೆಗೆ ಸರ್ವಾಂಗೀಣ ಪ್ರಗತಿಗೆ ಕ್ರೀಯಾಶೀಲ ಆಲೋಚನೆಗಳನ್ನು ಮೈಗೂಡಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಜೆ.ವ್ಹಿ.ಚವ್ಹಾಣ ಮಹಾವಿದ್ಯಾಲಯದಲ್ಲಿ ವಿದ್ಯಾಥಿಗಳ ದೈಹಿಕ ಸದೃಢತೆ ಹಾಗೂ ಮನೋವಿಕಾಸಕ್ಕೆ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸಿದ್ದು, ನಮ್ಮ ಮಹಾವಿದ್ಯಾಲಯ ವಿದ್ಯಾರ್ಥಿಗಳು ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿರುವುದು ಹೆಮ್ಮೆಯ ವಿಷಯವಾಗಿದೆ. ಜೊತೆಗೆ ನಮ್ಮ ಮಹಾವಿದ್ಯಾಲಯ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಮೊದಲನೆ ಸ್ಥಾನದಲ್ಲಿದ್ದೇವೆ. ವಿದ್ಯಾರ್ಥಿಗಳು ಜೀವನ ರೂಪಿಸಿಕೊಳ್ಳುವ ನಿಟ್ಟಿನಲ್ಲಿ ಅವರನ್ನು ಉತ್ತಮ ಪ್ರಜೆಯನ್ನಾಗಿ ಮಾಡಲು ನಾವು ಗುಣಮಟ್ಟದ ಶಿಕ್ಷಣ ನೀಡುತ್ತಾ ಬಂದಿದ್ದು, ವಿದ್ಯಾರ್ಥಿಗಳ ಸರ್ವೋತ್ತಮ ಅಭಿವೃದ್ಧಿಗೆ ಬಿ.ವ್ಹಿ.ವ್ಹಿ.ಸಂಘ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಶ್ರಮಿಸುತ್ತಿದೆ ಎಂದರು.

ವೇದಿಕೆಯ ಮೇಲೆ ವಿದ್ಯಾರ್ಥಿ ಪ್ರತಿನಿಧಿ ಪರೇಶ ಗುಂದೆಚಾ, ವೈಷ್ಣವಿ ದೇಸಾಯಿ, ಕೀರ್ತಿ ಕಿತ್ತಲಿ ಇದ್ದರು. ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಸಾಂಸ್ಕೃತಿಕ ವಿಭಾಗ ಸಂಯೋಜಕ ಆರ್.ಪಿ.ಮೇಲಿನಮನಿ ಸ್ವಾಗತಿಸಿದರು. ದೈಹಿಕ ನಿರ್ದೇಶಕ ಎಸ್.ಎಸ್.ಕೋಟ್ಯಾಳ ವಂದಿಸಿದರು. ಕವಿತಾ ಮಳಜಿ, ಎಸ್.ವ್ಹಿ.ಬಾರ್ಶಿ ನಿರೂಪಿಸಿದರು. ಪ್ರೊ.ಎಂ.ಎಂ.ಹುದ್ದಾರ ಹಾಗೂ ಐ.ಕೆ.ಮಠದ ಇವರು ಪಿ.ಎಚ್.ಡಿ ಪೂರೈಸಿದ್ದಕ್ಕಾಗಿ ಮಹಾವಿದ್ಯಾಲಯದಿಂದ ಸನ್ಮಾನ ಮಾಡಲಾಯಿತು. ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು.

--

ಬಾಕ್ಸ್:

ಮೊಬೈಲ್‌ನಿಂದ ಜೀವನ ರೂಪಿಸಲೂ ಸಾಧ್ಯವಿಲ್ಲ. ಪುಸ್ತಕದ ಜ್ಞಾನ, ಸಾಮಾನ್ಯ ಜ್ಞಾನದಿಂದ ಜೀವನ ರೂಪಿಸಿಕೊಳ್ಳಲು ಸಾಧ್ಯ. ಸಕ್ಷಮ ಸಮೃದ್ಧಿ, ಸದೃಢ ಭಾರತ ನಿರ್ಮಾಣಕ್ಕೆ ಯುವಶಕ್ತಿಯ ಅಗತ್ಯತೆ ಇದೆ.

- ಶಂಕರ ತೋಳಮಟ್ಟಿ ಅಂತಾರಾಷ್ಟ್ರೀಯ ಹಾಕಿ ಕೋಚ್

PREV

Recommended Stories

ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ
ಡಾ.ರಾಜ್‌ಕುಮಾರ್‌ರ ನೆಚ್ಚಿನ ಸಹೋದರಿ ನಾಗಮ್ಮ ನಿಧನ