ಕನ್ನಡಪ್ರಭ ವಾರ್ತೆ ಬೆಂಗಳೂರು
ಶುಕ್ರವಾರ ನಗರದ ಪುರಭವನದಲ್ಲಿ ಸಾರ್ವಜನಿಕ ಸ್ಥಳಗಳ ಪುನರುಜ್ಜೀವನಕ್ಕಾಗಿ ನಾಗರಿಕರಿಗೆ ಮುಕ್ತ ಅವಕಾಶ ಕಲ್ಪಿಸಲು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಕಳೆದ ವರ್ಷ ಜಿಬಿಎ ಮನವಿಯಂತೆ ಸ್ಥಳೀಯರು, ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು, ನಗರ ವಿನ್ಯಾಸಕಾರರು, ವಾಸ್ತು ಶಿಲ್ಪಿಗಳು ಹಾಗೂ ಶೈಕ್ಷಣಿಕ ಸಂಸ್ಥೆಗಳು 250ಕ್ಕೂ ಅಧಿಕ ಸ್ಥಳಗಳನ್ನು ಗುರುತಿಸಿದ್ದಾರೆ. ಪ್ರಾಥಮಿಕ ಪರಿಶೀಲನೆಯ ನಂತರ 194 ಸ್ಥಳಗಳನ್ನು ಕಾರ್ಯಗತಗೊಳಿಸಬಹುದೆಂದು ಗುರುತಿಸಲಾಗಿದೆ. ಸರ್ಕಾರ, ಸಿಎಸ್ಆರ್, ಎನ್‌ಜಿಎ ಹಾಗೂ ವಿವಿಧ ಸಂಸ್ಥೆಗಳ ಸಹಯೋಗದೊಂದಿಗೆ ಅವುಗಳನ್ನು ಹೇಗೆ ಅಭಿವೃದ್ಧಿಪಡಿಸಬೇಕು ಎಂಬುದರ ಬಗ್ಗೆ ಯೋಜನೆ ರೂಪಿಸಬೇಕಿದೆ. ನಂತರ ಸ್ಥಳೀಯರೊಂದಿಗೆ ಸೇರಿ ಆ ಜಾಗಗಳನ್ನು ಆಕರ್ಷಕ ಸಾರ್ವಜನಿಕ ಸ್ಥಳಗಳಾಗಿ ಪರಿವರ್ತಿಸುವ ಕೆಲಸ ಆಗಲಿದೆ ಎಂದು ಆಯುಕ್ತರು ಹೇಳಿದರು.
ನಗರದ ಸೌಂದರ್ಯವನ್ನು ಹೆಚ್ಚಿಸುವ ಭಾಗವಾಗಿ ‘ಸುರಕ್ಷಾ–75’ ಅಡಿ ಜಂಕ್ಷನ್ ಗಳ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದೆ. ಇದೀಗ ಬಳಸದ ಸ್ಥಳಗಳಿಗೆ ಮರುಜೀವ ನೀಡುವ ಕೆಲಸ ನಡೆಯುತ್ತಿದೆ. ಇದರಿಂದ ಸ್ಥಳೀಯರು ಆ ಸ್ಥಳಗಳಿಗೆ ಭೇಟಿ ನೀಡಿ ವಿಶ್ರಾಂತಿ ಪಡೆಯಲು ಸಾಧ್ಯವಾಗುತ್ತದೆ ಎಂದರು.ಜಿಬಿಎ ಪ್ರಧಾನ ಎಂಜಿನಿಯರ್ ಡಾ. ಬಿ.ಎಸ್. ಪ್ರಹ್ಲಾದ್ ಮಾತನಾಡಿ, ಸಾರ್ವಜನಿಕ ಸ್ಥಳಗಳನ್ನು ಅಭಿವೃದ್ಧಿಪಡಿಸಲು, ವೇಗವಾಗಿ ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ‘ಪಿಪಿಪಿ ಸೆಲ್’ ಸ್ಥಾಪಿಸಿದೆ ಎಂದು ತಿಳಿಸಿದರು.
ಅಭಿವೃದ್ಧಿಪಡಿಸಲು ಉದ್ದೇಶಿಸಿರುವ ಸ್ಥಳಗಳನ್ನು https://www.blrpublicspace-revival.in/repository ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ತಿಳಿದುಕೊಳ್ಳಬಹುದು ಎಂದು ಜಿಬಿಎ ತಿಳಿಸಿದೆ.