ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕೈಜೋಡಿಸಿ: ನ್ಯಾಯಾಧೀಶ ಹರೀಶ ಎ.

KannadaprabhaNewsNetwork |  
Published : Jun 15, 2026, 04:00 AM IST
ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ ಕಾರ್ಯಕ್ರಮಕ್ಕೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿ ಅರವಿಂದ ಹಾಗರಗಿ  ಚಾಲನೆ ನೋಡಿದರು.  | Kannada Prabha

ಸಾರಾಂಶ

ವಿಜಯಪುರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮಕ್ಕೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹರೀಶ ಎ. ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಸಮಾಜದಲ್ಲಿನ ಅನಿಷ್ಠ ಪಿಡುಗಾಗಿರುವ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಸಾರ್ವಜನಿಕರು ಕೈಜೋಡಿಸಿ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹರೀಶ ಎ. ಹೇಳಿದರು.

ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಇವರ ಸಹಯೋಗದಲ್ಲಿ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಆಚರಿಸಲಾದ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅವರು ಮಾತನಾಡಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿ ಅರವಿಂದ ಹಾಗರಗಿ ಮಾತನಾಡಿ, ಬಾಲಕಾರ್ಮಿಕ ಪದ್ಧತಿ ಮತ್ತು ಬಾಲ್ಯ ವಿವಾಹದ ಕುರಿತು ಜನರಲ್ಲಿ ಸೂಕ್ತ ತಿಳಿವಳಿಕೆ ಹಾಗೂ ಕಾನೂನಿನ ಜಾಗೃತಿ ಹೊಂದುವುದು ಅಗತ್ಯವಾವಾಗಿದೆ. ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು. ಮಕ್ಕಳ ಹಕ್ಕುಗಳ ಕುರಿತಾಗಿ ಸೂಕ್ತ ಅರಿವು ಮೂಡಿಸಬೇಕು. ಈ ಬಗ್ಗೆ ಜಾಗೃತಿ ಹಾಗೂ ಸಹಕಾರ ನೀಡಲು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಾ ಸಿದ್ಧವಾಗಿದೆ ಎಂದು ಹೇಳಿದರು. ಮಕ್ಕಳ ಶ್ರೇಯೋಭಿವೃದ್ಧಿಗಾಗಿ ಇರುವ ಕಾನೂನಾತ್ಮಕ ಕ್ರಮಗಳ ಕುರಿತು ವಿವರಿಸಿದರು.

ಕಾರ್ಮಿಕ ಅಧಿಕಾರಿ ರಮೇಶ ಸುಂಬಡ ಪ್ರಾಸ್ತಾವಿಕವಾಗಿ ಮಾತನಾಡಿ, ಬಾಲಕಾರ್ಮಿಕ ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016 ರನ್ವಯ ಪ್ರತಿ ತಿಂಗಳು ವಿವಿಧ ಇಲಾಖೆಗಳ ಅಧಿಕಾರಿಗಳ ತಂಡದೊಂದಿಗೆ ಅನಿರೀಕ್ಷಿತ ದಾಳಿ ಕೈಗೊಂಡು ಮಕ್ಕಳನ್ನು ರಕ್ಷಿಸಿ ಪ್ರಕರಣ ದಾಖಲಿಸಿ ತಪ್ಪಿತಸ್ಥ ಮಾಲೀಕರಿಂದ ಕಾರ್ಪಸ್ ನಿಧಿ ವಸೂಲಿ ಮಾಡಲು ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಜನಜಾಗೃತಿ ಕಾರ್ಯಕ್ರಮ ಆಯೋಜಿಸಲಾಗುತ್ತದೆ. ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಎಲ್ಲ ಇಲಾಖೆಗಳ ಸಹಕಾರದ ಅಗತ್ಯವಿದೆ. ಕಾರ್ಯವೈಖರಿಯೊಂದಿಗೆ ಬಾಲಕಾರ್ಮಿಕ ಪದ್ಧತಿ ತೊಡೆದು ಹಾಕಲು ಎಲ್ಲ ಇಲಾಖೆಗಳ ಹಾಗೂ ಸಾರ್ವಜನಿಕರ ಸಹಕಾರದ ಅಗತ್ಯವಿದೆ ಎಂದು ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ನಿರ್ಮಲಾ ಸುರಪುರ ಮಾತನಾಡಿ, ಬಾಲಕಾರ್ಮಿಕ ಪದ್ಧತಿ, ಬಾಲ್ಯ ವಿವಾಹದಂತಹ ಪ್ರಕರಣಗಳು ಕಂಡು ಬಂದಲ್ಲಿ 1098 ಕರೆ ಮಾಡಬೇಕು. ಎಲ್ಲಾ ಮಕ್ಕಳು ಶಿಕ್ಷಣ ಪಡೆಯುವುದು ಅವರ ಹಕ್ಕಾಗಿದೆ. ಮಕ್ಕಳಿಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳು ಎದುರಾದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಬೇಕೆಂದು ಹೇಳಿದರು.

ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಯ ಕುರಿತು ಫಾದರ್ ಸುಮನ್ ಬಾಲು ಉಪನ್ಯಾಸ ನೀಡಿದರು. ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ವಿರಯ್ಯ ಸಾಲಿಮಠ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದೀಪಾ ಕಾಳೆ, ಅನೌಪಚಾರಿಕ ಶಿಕ್ಷಣ ಸಂಸ್ಥೆಯ ಮಹಾದೇವಿ ರಾಠೋಡ, ಕಾರ್ಮಿಕ ನಿರೀಕ್ಷಕರಾದ ಜಗದೇವಿ ಸಜ್ಜನ, ಮಲ್ಲಿಕಾರ್ಜುನ ಸೇರಿ ಕಾರ್ಮಿಕ ಇಲಾಖೆ, ಅನೌಪಚಾರಿಕ ಶಿಕ್ಷಣ ಸಂಸ್ಥೆಯ ಸಿಬ್ಬಂದಿ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಿತ್ತೂರು ಇತಿಹಾಸದ ಮೂಲ ಜಾನಪದ
ಮಕ್ಕಳು ಆಡುವ ಉದ್ಯಾನವನಗಳಲ್ಲಿ ಅದ್ವಾನ