ಬಾಲ್ಯ ವಿವಾಹ ತಡೆಗಟ್ಟಲು ಕೈಜೋಡಿಸಿ: ವಿಶ್ವನಾಥ್

KannadaprabhaNewsNetwork |  
Published : Nov 23, 2026, 02:00 AM IST
21ಜಿಯುಡಿ2 | Kannada Prabha

ಸಾರಾಂಶ

ಬಾಲ್ಯ ವಿವಾಹ ಮುಕ್ತ ಭಾರತ ಅಭಿಯಾನದ ಅಂಗವಾಗಿ ನಡೆದ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಗುಡಿಬಂಡೆ: ಬಾಲ್ಯ ವಿವಾಹವು ಮಕ್ಕಳ ಭವಿಷ್ಯಕ್ಕೆ ಮಾರಕವಾಗಿದ್ದು, ಅದನ್ನು ತಡೆಗಟ್ಟಲು ಸಮಾಜದ ಪ್ರತಿಯೊಬ್ಬರೂ ಜವಾಬ್ದಾರಿಯಿಂದ ಕೈಜೋಡಿಸಬೇಕು ಎಂದು ಸಂಪನ್ಮೂಲ ವ್ಯಕ್ತಿ ಜಿ.ವಿ. ವಿಶ್ವನಾಥ್ ತಿಳಿಸಿದರು.

ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಗುಡಿಬಂಡೆ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಬಾಲ್ಯ ವಿವಾಹ ಮುಕ್ತ ಭಾರತ ಅಭಿಯಾನದ ಅಂಗವಾಗಿ ನಡೆದ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾರ್ಯಕ್ರಮವನ್ನು ಪ್ರಧಾನ ಸಿವಿಲ್ ನ್ಯಾಯಾಧೀಶೆ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಸವಿತಾ ರುದ್ರಗೌಡ ಚಿಕ್ಕನಗೌಡರ್ ಮತ್ತು ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ವರುಣ್ ರಾಜ್ ರವರುಗಳು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು. ವಕೀಲರ ಸಂಘದ ಅಧ್ಯಕ್ಷ ಅಶ್ವತ್ಥ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಪ್ಯಾನಲ್ ವಕೀಲರಾದ ನರೇಂದ್ರ ಜೆ.ವಿ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಶಾರದಾ, ನ್ಯಾಯಾಲಯದ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

21ಜಿಯುಡಿ2: ಪಟ್ಟಣದ ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ಬಾಲ್ಯ ವಿವಾಹ ಮುಕ್ತ ಭಾರತ ಅಭಿಯಾನದ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಂತಾರಾಷ್ಟ್ರೀಯ ಸಮ್ಮೇಳನ ಯಶಸ್ವಿ
ಸರ್ಕಾರದ ಅನುದಾನದ ಜೊತೆಗೆ ದಾನಿಗಳ ನೆರವು ಪಡೆಯಿರಿ: ವಿಜಯ ಮಾನೆ