ಹನೂರು: ಅಪರಾಧಗಳನ್ನು ತಡೆಗಟ್ಟುವಲ್ಲಿ ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಪಾತ್ರ ಬಹುಮುಖ್ಯವಾಗಿದೆ ಎಂದು ಎಎಸ್‌ಐ ಗುರುಸ್ವಾಮಿ ಹೇಳಿದರು.
ಮೋಸದ ಮೊಬೈಲ್ ಕರೆಗಳಿಗೆ ಮಾರುಹೋಗದೆ ಎಚ್ಚರಿಕೆಯಿಂದ ಇರಬೇಕು. ಅಪರಾಧ ಮಾಡುವವರ ಬಗ್ಗೆ ಪೊಲೀಸರಿಗೆ ಸಕಾಲದಲ್ಲಿ ತಿಳಿಸಬೇಕು ಎಂದು ತಿಳಿಸಿದರು.
ದ್ವಿಚಕ್ರ ವಾಹನದಲ್ಲಿ ಸಂಚರಿಸುವ ವೇಳೆ ಕಡ್ಡಾಯವಾಗಿ ಹೆಲ್ಮೆಟ್ ಬಳಸಬೇಕು. ಬಾರಿ ವಾಹನಗಳ ಚಾಲನೆ ಮಾಡುವ ವೇಳೆ ಸೀಟ್ ಬೆಲ್ಟ್ ಧರಿಸಬೇಕು. ಕುಡಿದು ಚಾಲನೆ ಮಾಡುವವರ ವಿರುದ್ಧ ಪೊಲೀಸ ಇಲಾಖೆ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಿದೆ ಎಂದರು.ಮಲೆ ಮಹದೇಶ್ವರ ಬೆಟ್ಟದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಭುಸ್ವಾಮಿ, ಉಪನ್ಯಾಸಕರಾದ ಜಗದೀಶ್ ಮತ್ತು ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು .