ಮಾದಕ ವಸ್ತುಗಳ ವ್ಯಸನ ತಡೆಗೆ ಕೈಜೋಡಿಸಿ: ಜಿಲ್ಲಾಧಿಕಾರಿ

KannadaprabhaNewsNetwork |  
Published : Oct 30, 2026, 02:15 AM IST
ಅಧಿಕಾರಿಗಳ ಸಭೆ ನಡೆಸಿದ ಜಿಲ್ಲಾಧಿಕಾರಿ ಸ್ನೇಹಲ್‌ ಆರ್‌. . | Kannada Prabha

ಸಾರಾಂಶ

ಮಕ್ಕಳು ದುಶ್ಚಟಗಳಿಗೆ ಬಲಿಯಾಗುತ್ತಿದ್ದರೆ, ಅದನ್ನು ನಿರ್ಲಕ್ಷಿಸುವ ಪ್ರವೃತ್ತಿ ಸಮಾಜದಲ್ಲಿ ಹೆಚ್ಚಾಗಿದೆ. ನಮ್ಮ ಮಕ್ಕಳು ಸುರಕ್ಷಿತವಾಗಿದ್ದರೆ ಸಾಕು, ಇತರರ ಮಕ್ಕಳಿಗೆ ಏನಾದರೂ ಆಗಲಿ ಎಂಬ ಮನೋಭಾವ ಬದಲಾಗಬೇಕು.

ಧಾರವಾಡ:

ಮಾದಕ ವಸ್ತುಗಳ ವ್ಯಸನ ತಡೆಗೆ ಪ್ರತಿಯೊಬ್ಬರು ಕೈಜೋಡಿಸಬೇಕೆಂದು ಜಿಲ್ಲಾಧಿಕಾರಿ ಸ್ನೇಹಲ್‌ ಆರ್‌. ಹೇಳಿದರು.

ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಆಯೋಜಿಸಿದ್ದ ರಾಷ್ಟ್ರೀಯ ತಂಬಾಕು ನಿಯಂತ್ರಣ, ರೇಬಿಸ್ ನಿಯಂತ್ರಣ, ಹಾವು ಕಡಿತ ತಡೆಗಟ್ಟುವಿಕೆ, ಕ್ಷಯ ರೋಗ ನಿರ್ಮೂಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಕ್ಕಳು ದುಶ್ಚಟಗಳಿಗೆ ಬಲಿಯಾಗುತ್ತಿದ್ದರೆ, ಅದನ್ನು ನಿರ್ಲಕ್ಷಿಸುವ ಪ್ರವೃತ್ತಿ ಸಮಾಜದಲ್ಲಿ ಹೆಚ್ಚಾಗಿದೆ. ನಮ್ಮ ಮಕ್ಕಳು ಸುರಕ್ಷಿತವಾಗಿದ್ದರೆ ಸಾಕು, ಇತರರ ಮಕ್ಕಳಿಗೆ ಏನಾದರೂ ಆಗಲಿ ಎಂಬ ಮನೋಭಾವ ಬದಲಾಗಬೇಕು. ಸಮಾಜದಲ್ಲಿ ನಡೆಯುವ ತಪ್ಪುಗಳನ್ನು ಗಮನಿಸಿ, ಅವುಗಳನ್ನು ತಡೆಯಲು ಪ್ರತಿಯೊಬ್ಬರೂ ಮುಂದಾಗಬೇಕು ಎಂದರು.

ಜನರು ತಪ್ಪು ನಡೆದರೂ ಅವುಗಳನ್ನು ತಡೆಯದೆ ಇರುವುದರಿಂದ ಸಮಾಜದಲ್ಲಿ ಅಪರಾಧ ಹೆಚ್ಚಾಗಲು ಕಾರಣವಾಗಿದೆ. ಹಿಂದೆ ಅಪರಾಧಗಳು ನಡೆದರೂ ಅವುಗಳನ್ನು ತಡೆಯಲು ಜನರು ವೈಯಕ್ತಿಕ ಮತ್ತು ಸಾಮಾಜಿಕವಾಗಿ ಪ್ರಯತ್ನಿಸುತ್ತಿದ್ದರು. ಈಗ ಅಂತಹ ಜಾಗೃತಿ ಮತ್ತು ಹೊಣೆಗಾರಿಕೆಯ ಮನೋಭಾವ ಬೆಳೆಸಿಕೊಳ್ಳುವ ಅಗತ್ಯವಿದೆ ಎಂದರು.

ನಾಯಿ ಕಚ್ಚಿದ ತಕ್ಷಣ ಕೈಗೊಳ್ಳಬೇಕಾದ ಕ್ರಮ ಹಾಗೂ ಸರಿಯಾದ ಸಮಯದಲ್ಲಿ ಚಿಕಿತ್ಸೆ ಪಡೆಯುವ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.ಕ್ಷಯರೋಗದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಆರೋಗ್ಯ ಇಲಾಖೆಯ ವತಿಯಿಂದ ಸಿದ್ಧಪಡಿಸಲಾದ ಜಾಗೃತಿ ಭಿತ್ತಿಪತ್ರವನ್ನು ಬಿಡುಗಡೆ ಮಾಡಲಾಯಿತು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಪರಶುರಾಮ ಎಫ್.ಕೆ., ಎಸಿಪಿ ಪ್ರಶಾಂತ ಸಿದ್ದನಗೌಡರ, ಜಿಲ್ಲಾ ಕ್ಷಯ ರೋಗ ನಿರ್ಮೂಲನ ಅಧಿಕಾರಿ ಡಾ. ರವೀಂದ್ರ ಆರ್. ಬೋವೇರ, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ. ಎಸ್.ಬಿ. ಕಳಸೂರಮಠ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈತರ ನಷ್ಟ ತಡೆಗೆ ಹಾಲಿನ ದರ 8 ರು. ಏರಿಕೆ - ಯಾವ ಪ್ಯಾಕೆಟ್‌ ಹಾಲಿಗೆ ಎಷ್ಟು?
ರೇ* ಮಾಡಿದ್ದಕ್ಕಾಗಿ ಅಪಹರಣ ಮೂಲಕ ಪ್ರತೀಕಾರ