ಸನಾತನ ಧರ್ಮ, ಸಂಸ್ಕೃತಿ ರಕ್ಷಣೆಗೆ ಎಲ್ಲರೂ ಕೈಜೋಡಿಸಿ

KannadaprabhaNewsNetwork |  
Published : Oct 28, 2026, 02:15 AM IST
ಪೋಟೊ27ಕೆಎಸಟಿ1ಕುಷ್ಟಗಿ ಪಟ್ಟಣದ ತಾವರಗೇರಾ ರಸ್ತೆಯಲ್ಲಿರುವ ಶ್ರೀ ಮಹಾಂತ ಸಂಗಮ ಲೇಔಟ್‌ನಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಕೊಲ್ಲಾಪುರ ಕನ್ನೇರಿ ಮಠದ ಶಿವಕುಮಾರ ಸ್ವಾಮೀಜಿ ಮಾತನಾಡಿದರು. | Kannada Prabha

ಸಾರಾಂಶ

ಗಂಗಾವತಿಯಲ್ಲಿ ನಡೆಯಲಿರುವ ಸಮಾವೇಶದಲ್ಲಿ ಸುಮಾರು 30ರಿಂದ 40 ಸಾವಿರ ಜನರು ಭಾಗವಹಿಸುವ ನಿರೀಕ್ಷೆಯಿದೆ

ಕುಷ್ಟಗಿ: ಸನಾತನ ಧರ್ಮದ ಉಳಿವು, ಧರ್ಮರಕ್ಷಣೆ ಹಾಗೂ ಭಾರತೀಯ ಸಂಸ್ಕೃತಿಯ ಸಂರಕ್ಷಣೆಗಾಗಿ ಎಲ್ಲರೂ ಒಗ್ಗಟ್ಟಿನಿಂದ ಕೈಜೋಡಿಸಬೇಕು ಎಂದು ಕೊಲ್ಲಾಪುರ ಕನ್ನೇರಿ ಮಠದ ಶಿವಕುಮಾರ ಸ್ವಾಮೀಜಿ ಹೇಳಿದರು.

ಪಟ್ಟಣದ ತಾವರಗೇರಾ ರಸ್ತೆಯಲ್ಲಿರುವ ಶ್ರೀ ಮಹಾಂತ ಸಂಗಮ ಲೇಔಟ್‌ನಲ್ಲಿ ನ.3ರಂದು ಗಂಗಾವತಿ ನಗರದಲ್ಲಿ ಅದೃಶ್ಯ ಕಾಡಸಿದ್ದೇಶ್ವರ ಶ್ರೀಗಳ ನೇತೃತ್ವದಲ್ಲಿ ನಡೆಯಲಿರುವ ಬೃಹತ್‌ ಹಿಂದೂ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಗಂಗಾವತಿಯಲ್ಲಿ ನಡೆಯಲಿರುವ ಸಮಾವೇಶದಲ್ಲಿ ಸುಮಾರು 30ರಿಂದ 40 ಸಾವಿರ ಜನರು ಭಾಗವಹಿಸುವ ನಿರೀಕ್ಷೆಯಿದೆ. ಕುಷ್ಟಗಿ ತಾಲೂಕಿನಿಂದ ಕನಿಷ್ಠ 3 ಸಾವಿರ ಜನರು ಸಮಾವೇಶದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.

ಸನಾತನ ಧರ್ಮದ ಮೌಲ್ಯಗಳು, ಭಾರತೀಯ ಸಂಸ್ಕೃತಿ ಹಾಗೂ ಧಾರ್ಮಿಕ ಪರಂಪರೆಯ ಸಂರಕ್ಷಣೆಯ ಉದ್ದೇಶದಿಂದ ನಡೆಯಲಿರುವ ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹಿಂದೂ ಸಮಾಜದ ಬಾಂಧವರು ಭಾಗವಹಿಸುವಂತೆ ಕರೆ ನೀಡಿದರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖರಾದ ಜಿ ರಾಜಶೇಖರ, ಅಯ್ಯನಗೌಡ ಗಂಗಾವತಿ, ರವಿಕುಮಾರ ಹಿರೇಮಠ, ವಿರೇಶ ಬಂಗಾರಶೆಟ್ಟರ್‌ , ಉಮೇಶ ಯಾದವ್, ದೊಡ್ಡಬಸವ ಸುಂಕದ, ಬಸವರಾಜ ಪಾಟೀಲ, ಶಂಕರಗೌಡ ಪಾಟೀಲ, ಮರಸಣ್ಣ ತಾಳದ, ಸುರೇಶ ಮಂಗಳೂರು, ಶಿವಕುಮಾರ ಗಂಧದಮಠ, ಪ್ರಕಾಶ ತಳಕೇರಿ, ದೇವರಾಜ ಹಜಾಳದ್, ಹಾಗೂ ರವಿ ಕಟ್ಟಿಮನಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗಂಗಾಮತ ಸಮಾಜ ಮುಖ್ಯವಾಹಿನಿಗೆ ಬರಲು ವಿಫಲ
ಗ್ರಾಮಾಂತರ ಪ್ರದೇಶಗಳಿಗೂ ಸಂಗೀತ, ನೃತ್ಯ ಅಕಾಡೆಮಿ ಕಾರ್ಯಕ್ರಮ ವಿಸ್ತರಣೆ