Join hands to save lives through blood donation: DC Pandve
ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ-2026 ಕಾರ್ಯಕ್ರಮ ಉದ್ಘಾಟನೆ
----
ಕನ್ನಡಪ್ರಭ ವಾರ್ತೆ ಯಾದಗಿರಿ
ದಾನಗಳಲ್ಲೇ ರಕ್ತದಾನ ಶ್ರೇಷ್ಠದಾನವಾಗಿದೆ, ರಕ್ತದಾನದಿಂದ ಒಬ್ಬರ ಜೀವ ಉಳಿಸಬಹುದು.
ಪ್ರತಿಯೊಬ್ಬ ಆರೋಗ್ಯವಂತರು ಸ್ವಯಂಪ್ರೇರಣೆಯಿಂದ ರಕ್ತದಾನಕ್ಕೆ ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ರಾಹುಲ್ ತುಕಾರಾಮ ಪಾಂಡ್ವೆ ಕರೆ ನೀಡಿದರು.
ಜಿಲ್ಲಾಡಳಿತ, ಜಿ.ಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಸಂಯುಕ್ತ ಆಶ್ರಯದಲ್ಲಿ ನ. 25ರಂದು ಆಯೋಜಿಸಲಾಗಿದ್ದ ''ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ-2026'' ಕಾರ್ಯಕ್ರಮದ ಕುರಿತು ಅವರು ಮಾತನಾಡಿದರು.
ರಕ್ತದಾನದ ಕುರಿತು ಇರುವ ತಪ್ಪು ಕಲ್ಪನೆಗಳನ್ನು ಕೈಬಿಟ್ಟು ರಕ್ತದಾನ ಮಾಡಬೇಕು. ಇದರಿಂದ ದೇಹದಲ್ಲಿನ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ ಹಾಗೂ ಹೊಸ ರಕ್ತ ಉತ್ಪತ್ತಿಯಾಗುತ್ತದೆ ಎಂದು ಅವರು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸಂಜೀವಕುಮಾರ ರಾಯಚೂರಕರ್, ರಕ್ತಕ್ಕೆ ಯಾವುದೇ ಪರ್ಯಾಯವಿಲ್ಲ. ನಮ್ಮ ಒಂದು ಹನಿ ರಕ್ತವು ಮತ್ತೊಬ್ಬರ ಬದುಕಿನಲ್ಲಿ ಹೊಸ ಭರವಸೆಯನ್ನು ಮೂಡಿಸಬಲ್ಲದು. ಆದ್ದರಿಂದ, ಅರ್ಹರೆಲ್ಲರೂ ಸ್ವಯಂ ಪ್ರೇರಿತ ರಕ್ತದಾನಕ್ಕೆ ಮುಂದಾಗಿ, ಜೀವ ಉಳಿಸುವ ಮಹತ್ಕಾರ್ಯದಲ್ಲಿ ಕೈಜೋಡಿಸಬೇಕು " ಎಂದರು.
ರಕ್ತದಾನವು ಅತ್ಯಂತ ಶ್ರೇಷ್ಠವಾದ ಮಾನವೀಯ ಸೇವೆ. ಮಾನವೀಯತೆಯ ಒಂದು ಹನಿ ರಕ್ತ ನೀಡಿ ಜೀವ ಉಳಿಸಿ ಎಂಬ ಘೋಷವಾಕ್ಯದೊಂದಿಗೆ ಈ ದಿನವನ್ನು ಆಚರಿಸಲಾಗುತ್ತಿದೆ. ರಕ್ತದಾನ ಮತ್ತೊಬ್ಬರಿಗೆ ಜೀವದಾನವಾಗಲಿದೆ ಎಂದು ಹೇಳಿದ ಅವರು, ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಕ್ತದಾನದ ಮಹತ್ವವನ್ನು ಸಾರುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಆತ್ಮೀಯವಾಗಿ ಆಹ್ವಾನಿಸಿದರು.
ಯಾದಗಿರಿ, ಗುರುಮಠಕಲ್ ಸೇರಿದಂತೆ ಒಟ್ಟು 44 ಜನರು ರಕ್ತದಾನ ಮಾಡಿದರು. ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ಹಣಮಂತರೆಡ್ಡಿ, ಡಾ. ಸಿದ್ದಲಿಂಗರೆಡ್ಡಿ, ಲಕ್ಷ್ಮೀ ಮುಂಡಾಸ್, ತುಲಸಿರಾಮ ಚವ್ಹಾಣ , ಚೇತನಕುಮಾರ ಮಿಲ್ಟಿರಿ, ಅಭಿಲಾಶ, ರಾಜೇಂದ್ರ, ಮಲ್ಲಪ್ಪ, ಸುಭಾಷ ಇದ್ದರು.
ಫೋಟೊ
25ವೈಡಿಆರ್8 : ಯಾದಗಿರಿಯಲ್ಲಿ ''''''''''''''''ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ-2026'''''''''''''''' ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ ಉದ್ಘಾಟಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.