ಪ್ರಜಾಪ್ರಭುತ್ವದ ಬಲವರ್ಧನೆಗೆ ಕೈಜೋಡಿಸಿ

KannadaprabhaNewsNetwork |  
Published : Jul 01, 2026, 03:15 AM IST
ಫೊಟೊ 30 ಎಚ್,ಎನ್,ಎಮ್ 01: ಹನುಮಸಾಗರದ  ಸಮೀಪದ ಜಹಗೀರಗುಡದೂರ ಗ್ರಾಮದಲ್ಲಿ ಪಿಡಿಒ ನಿಂಗಪ್ಪ ಮೂಲಿಮನಿ ಎಸ್‌ಐಆರ್‌ ಜಾಗೃತಿಗೆ ಚಾಲನೆಯನ್ನು ನೀಡಿದರು. | Kannada Prabha

ಸಾರಾಂಶ

18 ವರ್ಷ ಪೂರ್ಣಗೊಂಡ ಯುವಕ-ಯುವತಿಯರು ಕಡ್ಡಾಯವಾಗಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿಸಿಕೊಳ್ಳಬೇಕು.

ಹನುಮಸಾಗರ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)-2026ರ ಅಂಗವಾಗಿ ಸಮೀಪದ ಜಹಗೀರ ಗುಡದೂರ ಗ್ರಾಮದಲ್ಲಿ ಸೋಮವಾರ ಬೃಹತ್ ಮತದಾರರ ಜಾಗೃತಿ ಜಾಥಾ ನಡೆಸಲಾಯಿತು.

ಶ್ರೀಶರಣ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಗ್ರಾಪಂ ಪಿಡಿಒ ನಿಂಗಪ್ಪ ಮೂಲಿಮನಿ ಚಾಲನೆ ನೀಡಿ ಮಾತನಾಡಿ, ಸುಭದ್ರ ದೇಶ ನಿರ್ಮಾಣದಲ್ಲಿ ಮತದಾರರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಪ್ರತಿಯೊಬ್ಬ ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವ ಮೂಲಕ ಪ್ರಜಾಪ್ರಭುತ್ವದ ಬಲವರ್ಧನೆಗೆ ಕೈಜೋಡಿಸಬೇಕು. 18 ವರ್ಷ ಪೂರ್ಣಗೊಂಡ ಯುವಕ-ಯುವತಿಯರು ಕಡ್ಡಾಯವಾಗಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿಸಿಕೊಳ್ಳಬೇಕು. ನಿಧನ ಹೊಂದಿದ ಮತದಾರರ ಹೆಸರು ತೆಗೆದುಹಾಕುವುದು, ಒಂದಕ್ಕಿಂತ ಹೆಚ್ಚು ಸ್ಥಳಗಳಲ್ಲಿ ಹೆಸರು ಹೊಂದಿರುವವರ ವಿವರಗಳನ್ನು ಸರಿಪಡಿಸುವುದು ಹಾಗೂ ಹೊರ ರಾಜ್ಯದ ಮತದಾರರ ಮಾಹಿತಿ ಪರಿಷ್ಕರಿಸುವುದು ಎಸ್‌ಐಆರ್-2026ರ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.

ಬಳಿಕ ಗ್ರಾಪಂ ಕಚೇರಿಯಿಂದ ಆರಂಭವಾದ ಜಾಗೃತಿ ಜಾಥಾವು ಮಹಾತ್ಮ ಗಾಂಧೀಜಿ ವೃತ್ತದ ಮೂಲಕ ಗ್ರಾಮದ ವಿವಿಧ ವಾರ್ಡ್‌ಗಳಲ್ಲಿ ಸಂಚರಿಸಿ ಮತದಾನದ ಮಹತ್ವ ಹಾಗೂ ಮತದಾರರ ಪಟ್ಟಿಯ ಪರಿಷ್ಕರಣೆಯ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಿತು. ನಂತರ ಶರಣ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಜಾಥಾ ಸಮಾಪ್ತಿಯಾಯಿತು.

ಕಾರ್ಯಕ್ರಮದಲ್ಲಿ ಮುಖ್ಯಶಿಕ್ಷಕ ಸತ್ಯಪ್ಪ, ಕಂದಾಯ ಇಲಾಖೆಯ ಆಡಳಿತಾಧಿಕಾರಿ ರವಿ ಮದನ, ವಿವಿಧ ಇಲಾಖೆಗಳ ಅಧಿಕಾರಿ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು, ಶಿಕ್ಷಕರು, ಸಿಬ್ಬಂದಿ, ಶಾಲಾ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕರಾವಳಿ ರಂಗಾಯಣಕ್ಕೆ ಪೂರ್ಣಗೊಳ್ಳಲು ಬೇಕು ಇನ್ನೂ ₹ 4 ಕೋಟಿ
ರಂಗ ಸಮಾಜ ಶಿಫಾರಸಿನಂತೆ ‘ರಂಗಾಯಣ ಕಾರ್ಕಳ’ ಹೆಸರು ಬದಲಾವಣೆ: ಸ್ಪಷ್ಟನೆ