ಮಾದಕ ವ್ಯಸನ ತಡೆಗೆ ಪೊಲೀಸರೊಂದಿಗೆ ಕೈಜೋಡಿಸಿ: ಹಳಿಯಾಳ ಸಿಪಿಐ ಜಯಪಾಲ ಪಾಟೀಲ

KannadaprabhaNewsNetwork |  
Published : Jun 27, 2025, 12:48 AM IST
26ಎಚ್.ಎಲ್.ವೈ-1: ಹಳಿಯಾಳದ ಪುರಭವನದಲ್ಲಿ ಹಳಿಯಾಳ ಪೋಲಿಸ ಠಾಣೆ ಮತ್ತು ತಾಲೂಕಾಡಳಿತ ಜಂಟೀ ಆಶ್ರಯದಲ್ಲಿ ಆಯೋಜಿಸಿದ ಅಂತರರಾಷ್ಟ್ರೀಯ ಮಾದಕ ವಸ್ತುಗಳ ಬಳಕೆ ಮತ್ತು ಅಕ್ರಮ ಸಾಗಾಟ ವಿರೋಧಿ ದಿನಾಚರಣೆಯನ್ನು ಉದ್ದೇಶಿಸಿ ಹಳಿಯಾಳ ಸಿಪಿಐ ಜಯಪಾಲ ಪಾಟೀಲ  ಮಾತನಾಡಿದರು. | Kannada Prabha

ಸಾರಾಂಶ

ಸಮಾಜ ಮತ್ತು ಕುಟುಂಬದ ಹಿತವನ್ನು ಬಲಿಕೊಡುವ ಮಾದಕ ವ್ಯಸನದಿಂದ ಯುವಜನತೆ ದೂರವಿರಬೇಕು.

ಹಳಿಯಾಳ: ಸಮಾಜ ಮತ್ತು ಕುಟುಂಬದ ಹಿತವನ್ನು ಬಲಿಕೊಡುವ ಮಾದಕ ವ್ಯಸನದಿಂದ ಯುವಜನತೆ ದೂರವಿರಬೇಕು. ಮಾದಕ ವಸ್ತುಗಳ ಬಳಕೆ ಮತ್ತು ಅಕ್ರಮ ಸಾಗಾಟವನ್ನು ಬುಡಸಮೇತ ತಡೆಯಲು ಸಮಾಜವು ಪೊಲೀಸ್ ಇಲಾಖೆಯ ಜೊತೆ ಕೈಜೋಡಿಸಬೇಕು ಎಂದು ಹಳಿಯಾಳ ಸಿಪಿಐ ಜಯಪಾಲ ಪಾಟೀಲ ಹೇಳಿದರು.

ಗುರುವಾರ ಪಟ್ಟಣದ ಪುರಭವನದಲ್ಲಿ ಹಳಿಯಾಳ ಪೊಲೀಸ್‌ ಠಾಣೆ ಮತ್ತು ತಾಲೂಕಾಡಳಿತ ಜಂಟಿ ಆಶ್ರಯದಲ್ಲಿ ಆಯೋಜಿಸಿದ ಅಂತರರಾಷ್ಟ್ರೀಯ ಮಾದಕ ವಸ್ತುಗಳ ಬಳಕೆ ಮತ್ತು ಅಕ್ರಮ ಸಾಗಾಟ ವಿರೋಧಿ ದಿನಾಚರಣೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಮಾದಕ ವಸ್ತುಗಳ ಬಳಕೆ ಮತ್ತು ಅಕ್ರಮ ಕಳ್ಳಸಾಗಾಣೆ ವಿರುದ್ಧ ಜನಜಾಗೃತೆಯನ್ನು ಮೂಡಿಸಲು ಪ್ರತಿ ವರ್ಷ ಜೂ.26ರಂದು ಅಂತರರಾಷ್ಟ್ರೀಯ ಮಾದಕ ವಸ್ತುಗಳ ಬಳಕೆ ಮತ್ತು ಅಕ್ರಮ ಸಾಗಾಟ ವಿರೋಧಿ ದಿನವನ್ನು ಆಚರಿಸಿ ಜಾಗೃತೆಯನ್ನು ಮೂಡಿಸಲಾಗುತ್ತಿದೆ. ಸಮಾಜದ ಜವಾಬ್ದಾರಿಯುತ ಪ್ರಜೆಯಾಗಿ ಮಾದಕ ವಸ್ತುಗಳ ಮಾರಾಟ ಮತ್ತು ಅಕ್ರಮ ಸಾಗಾಟದಂತಹ ಪ್ರಕರಣಗಳು ಕಂಡು ಬಂದರೇ ತಕ್ಷಣ ಪೊಲೀಸ್ ಇಲಾಖೆಯ ಗಮನಕ್ಕೆ ತರಬೇಕು. ಮಾದಕ ದ್ರವ್ಯ ಮತ್ತು ಮಾದಕ ವಸ್ತುಗಳ ಮಾರಾಟ ಮತ್ತು ಬಳಸುವಿಕೆಯನ್ನು ತಡೆಗಟ್ಟಲು ಯುವಜನತೆಯು ಪ್ರಮುಖ ಪಾತ್ರ ವಹಿಸಿ ಮಾದಕ ವಸ್ತುಗಳ ಮುಕ್ತ ಸಮಾಜ ನಿರ್ಮಿಸಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ತಹಸೀಲ್ದಾರ ಪ್ರವೀಣ ಹುಚ್ಚಣ್ಣನವರ ಮಾತನಾಡಿ,

ಯುವಾವಸ್ಥೆಯಲ್ಲಿ ಬರುವ ಟಿನ್ ಯೆಜ್ ಇದೊಂದು ಪ್ರಮುಖ ಘಟ್ಟ ಗಳಿಗೆಯಾಗಿದೆ. ಈ ಯುವಪ್ರಾಯದಲ್ಲಿ ಯಾವತ್ತೂ ತಪ್ಪು ಹೆಜ್ಜೆಯಿಡಬಾರದು, ಯಾವುದೇ ಕಾರಣಕ್ಕೂ ಮಾದಕ ವಸ್ತುಗಳ ವ್ಯಸನಿಗಳಾಗಬಾರದು, ಕುಟುಂಬದ ಮೇಲೆ ಗಂಭೀರ ಪರಿಣಾಮ ಬೀರುವ ಈ ವ್ಯಸನಗಳಿಂದ ಯುವಕರು ದೂರವಿರಬೇಕು. ಭವಿಷ್ಯದ ಉತ್ತಮ ಪ್ರಜೆಗಳಾಗಲು ಹಾಗೂ ಉತ್ತಮ ಸಮಾಜ ನಿರ್ಮಿಸಲು ವಿದ್ಯಾಭ್ಯಾಸದ ಕಡೆಗೆ ಹೆಚ್ಚು ಗಮನ ವಹಿಸಬೇಕು ಎಂದರು.

ಪುರಸಭಾ ಮುಖ್ಯಾಧಿಕಾರಿ ಅಶೋಕ ಸಾಳೆಣ್ಣನವರ ಮಾತನಾಡಿ ಇತ್ತೀಚಿನ ವರ್ಷಗಳಲ್ಲಿ ವಿಶ್ವದಾದ್ಯಂತ ಮಾದಕ ವಸ್ತುಗಳ ದುಶ್ಚಟಗಳಿಗೆ ಮಕ್ಕಳು ಮತ್ತು ಯುವಜನಾಂಗ ಹೆಚ್ಚು ಬಲಿಯಾಗುತ್ತಿದ್ದಾರೆ. ಮಾದಕ ವಸ್ತುಗಳ ಬಳಕೆ ಮತ್ತು ಮಾರಾಟ ಕಾನೂನು ಬಾಹಿರ ಹಾಗೂ ಆರೋಗ್ಯಕ್ಕೂ ಮಾರಕವಾಗಿದೆ. ಮಾದಕ ವಸ್ತುಗಳು ಡ್ರಗ್ ಮಾಪಿಯಾ ಹತೋಟಿಗೆ ಇಂದು ವಿಶ್ವದೆಲ್ಲೆಡೆ ಕಾನೂನು ಪ್ರಯತ್ನಗಳು ನಡೆಯುತ್ತಿವೆ ಎಂದರು. ಇದೇ ಸಂದರ್ಭದಲ್ಲಿ ಮಾದಕ ವಸ್ತುಗಳ ಬಳಕೆಯನ್ನು ಮಾಡುವುದಿಲ್ಲವೆಂದೂ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಲಾಯಿತು. ಅಂತರರಾಷ್ಟ್ರೀಯ ಮಾದಕ ವಸ್ತುಗಳ ಬಳಕೆ ಮತ್ತು ಅಕ್ರಮ ಸಾಗಾಟ ವಿರೋಧಿ ದಿನದ ನಿಮಿತ್ತ್ಯ ಆಯೋಜಿಸಿದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಲಾಯಿತು. ಅಪರಾದ ವಿಭಾಗದ ಪಿಎಸ್ಐ ಕೃಷಣ ಅರಕೇರಿ ಹಾಗೂ ಸರ್ಕಾರಿ ಪದವಿ ಪೂರ್ವ ಹಾಗೂ ವಿ.ಡಿ.ಹೆಗಡೆ ಕಾಲೇಜಿನ ಉಪನ್ಯಾಸಕರು ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮಕ್ಕೂ ಮೊದಲು ಪಟ್ಟಣದಲ್ಲಿ ಮಾದಕ ವಸ್ತುಗಳ ಬಳಕೆ ಮತ್ತು ಅಕ್ರಮ ಸಾಗಾಟ ವಿರೋಧಿಸಿ ಜನಜಾಗೃತೆ ಮರವಣಿಗೆಯನ್ನು ನಡೆಸಲಾಯಿತು. ತಹಸೀಲ್ದಾರ ಪ್ರವೀಣ ಹುಚ್ಚಣ್ಣನವರ, ಸಿಪಿಐ ಜಯಪಾಲ ಪಾಟೀಲ, ಅಪರಾದ ವಿಭಾಗದ ಪಿಎಸ್ಐ ಕೃಷ್ಣ ಅರಕೇರಿ ಹಾಗೂ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದರು.

PREV

Recommended Stories

ಸಂಜೆ ಕೋರ್ಟ್‌ಗೆ ವಕೀಲರ ಸಂಘಗಳ ವಿರೋಧ
ಕಾರ್ಯಕ್ರಮಕ್ಕೆ ಸಾರಿಗೆ ಬಸ್ಸಲ್ಲಿ ಬಂದ ಹೈಕೋರ್ಟ್‌ ನ್ಯಾಯಾಧೀಶರು!