ಕನ್ನಡಪ್ರಭ ವಾರ್ತೆ ಮದ್ದೂರು
ಮದ್ದೂರು ನಗರಸಭೆ ವ್ಯಾಪ್ತಿಗೆ ಗೆಜ್ಜಲಗೆರೆ ಗ್ರಾಮ ಪಂಚಾಯಿತಿ ಸೇರ್ಪಡೆ ವಿರೋಧಿಸಿ ಕಳೆದ 72 ದಿನಗಳಿಂದ ಧರಣಿ ನಡೆಸುತ್ತಿರುವ ಹೋರಾಟಗಾರರನ್ನು ಉದ್ದೇಶಿಸಿ, ಕ್ಷೇತ್ರದ ಶಾಸಕ ಕೆ.ಎಂ.ಉದಯ್ ಚಳವಳಿಗೆ ವಿಪಕ್ಷದವರು, ಸಂಘ ಸಂಸ್ಥೆಗಳು ಆರ್ಥಿಕ ನೆರವು ನೀಡುತ್ತಿದ್ದಾರೆ ಎಂಬ ಆರೋಪಕ್ಕೆ ಪ್ರತ್ಯುತ್ತರ ನೀಡಿದರು.
ನಿನ್ನೆ ಮೊನ್ನೆ ರಾಜಕೀಯಕ್ಕೆ ಬಂದ ಬಚ್ಚ ಶಾಸಕ ಉದಯ್ ಗೆ ಹೋರಾಟಗಾರರ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ. ಗೆಜ್ಜಲಗೆರೆ ಗ್ರಾಮದ ಹೋರಾಟ ಇಡೀ ಕರ್ನಾಟಕದಲ್ಲಿ ಹೆಸರುವಾಸಿಯಾಗಿದೆ. ಗ್ರಾಮದ ಹೋರಾಟಕ್ಕೆ ಮತ್ತು ಚಳವಳಿಯನ್ನು ಯಾರಿಗೂ ಹಣಕ್ಕಾಗಿ ಒತ್ತೆ ಇಟ್ಟಿಲ್ಲ. ನಾವು ಸ್ವಂತ ಬೆಳೆದ ಬೆಳೆಗಳಿಂದ ಊಟ ಮಾಡಿ ಧರಣಿ ಮಾಡುತ್ತಿದ್ದೇವೆ ಎಂದರು.ಶಾಸಕರು ರೈತರು ಮತ್ತು ಗ್ರಾಮಸ್ಥರನ್ನು ಗುಲಾಮರಾಗಿ ಮಾಡುತ್ತಿದ್ದಾರೆ. ತಮ್ಮ ಹಕ್ಕಿಗಾಗಿ ನಾವು ಹೋರಾಟ ಮಾಡುತ್ತಿದ್ದೇವೆ. ಶಾಸಕ ಉದಯ್ ಅವರಿಗೆ ನೈತಕತೆ ಇದ್ದರೆ ಗ್ರಾಮವನ್ನು ಪಂಚಾಯ್ತಿಯಾಗಿ ಉಳಿಸಿಕೊಳ್ಳಲಿ ಎಂದು ಸವಾಲು ಹಾಕಿದರು.
ಗೆಜ್ಜಲಗೆರೆ ಗ್ರಾಪಂ ಮದ್ದೂರು ನಗರಸಭೆಗೆ ಸೇರ್ಪಡೆ ಮಾಡುವುದು ಬೇಡ ಎಂದು ಒಗ್ಗಟ್ಟಿನಂದ ನಮ್ಮ ಅಭಿಪ್ರಾಯ ತಿಳಿಸಿದ್ದೇವೆ. ಜನರ ವಿರೋಧವನ್ನೂ ಲೆಕ್ಕಿಸದೆ ನಾಲ್ಕು ಗ್ರಾಪಂಗಳನ್ನು ಸೇರ್ಪಡೆ ಮಾಡಿಕೊಂಡು ನಗರಸಭೆ ಮಾಡಲು ಹೊರಟಿದ್ದೀರಿ. ಹೋರಾಟಗಾರರು ಅನ್ಯಾಯದ ವಿರುದ್ಧ ಚಳವಳಿ ಮಾಡುತ್ತಿದ್ದಾರೆ ಎಂದರು.
ಕೆಆರ್ ಎಸ್ ಜಲಾಶಯದಿಂದ ಬೆಂಗಳೂರು ನಗರದ ಹೊರವಲಯಗಳಿಗೆ ಆರನೇ ಹಂತದಲ್ಲಿ ಕಾವೇರಿ ನೀರು ಪೂರೈಕೆಗೆ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿರುವುದು ಖಂಡನೀಯ. ಶಾಸಕರು ಕೀಳು ಮಟ್ಟದ ರಾಜಕಾರಣ ಬಿಟ್ಟು ಮದ್ದೂರು ಕ್ಷೇತ್ರದ ಕೊನೆಯ ಭಾಗದ ಜಮೀನುಗಳಿಗೆ ಮೊದಲು ನೀರು ಹರಿಸುವ ಕೆಲಸ ಮಾಡಲಿ ಎಂದು ಸಲಹೆ ನೀಡಿದರು.
ಮೈಸೂರು ಮಹಾರಾಜರು ಕನ್ನಂಬಾಡಿ ಅಣೆಕಟ್ಟೆ ಕಟ್ಟಿಸಿರುವುದು ರೈತರಿಗೆ ನೀರು ಕೊಡುವುದಕ್ಕೆ. ಬೇರೆ ಉದ್ದೇಶಗಳಿಗೆ ನೀರು ಕೊಡುವುದಕ್ಕೆ ನ್ಯಾಯಾಲಯಕ್ಕೆ ಹೋಗಿ ತಡೆಯಾಜ್ಞೆ ತಂದಿದ್ದೇವೆ. ದಾಖಲೆ ಸಮೇತ ಕೊಡುತ್ತೇವೆ ಎಂದರು.