ಸಂಕನೂರ ಪರ ಜೋಶಿ ಪ್ರಚಾರ

KannadaprabhaNewsNetwork |  
Published : Oct 04, 2026, 02:00 AM IST
ಹುಬ್ಬಳ್ಳಿಯ ಕೆಎಲ್‌ಇ ಆಡಿಟೋರಿಯಂ ಹಾಗೂ ಆದರ್ಶ ನಗರದ ರೋಟರಿ ಶಾಲೆಯಲ್ಲಿ ಶನಿವಾರ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಬಿಜೆಪಿ ಅಭ್ಯರ್ಥಿ ಎಸ್‌.ವಿ. ಸಂಕನೂರ ಪರ ಮತಯಾಚಿಸಿದರು. | Kannada Prabha

ಸಾರಾಂಶ

ಶಿಕ್ಷಣ, ಉದ್ಯೋಗ, ಯುವಜನತೆಗೆ ಉನ್ನತ ಅವಕಾಶಗಳು ಹಾಗೂ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬಿಜೆಪಿ ಸದಾ ಆದ್ಯತೆ ನೀಡುತ್ತಿದೆ.

ಹುಬ್ಬಳ್ಳಿ:

ಪಶ್ಚಿಮ ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಪರವಾಗಿ ಶನಿವಾರ ನಗರದ ಕೆಎಲ್‌ಇ ಆಡಿಟೋರಿಯಂ ಹಾಗೂ ಆದರ್ಶ ನಗರದ ರೋಟರಿ ಶಾಲೆಯಲ್ಲಿ ನಡೆದ ಪ್ರಚಾರ ಸಭೆಗಳಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ನೇತೃತ್ವದಲ್ಲಿ ಮತಯಾಚಿಸಲಾಯಿತು.

ಪ್ರಚಾರ ಸಭೆಯಲ್ಲಿ ಮಾತನಾಡಿದ ಕೇಂದ್ರ ಸಚಿವರು, ಶಿಕ್ಷಣ, ಉದ್ಯೋಗ, ಯುವಜನತೆಗೆ ಉನ್ನತ ಅವಕಾಶಗಳು ಹಾಗೂ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬಿಜೆಪಿ ಸದಾ ಆದ್ಯತೆ ನೀಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸಮರ್ಥ ನಾಯಕತ್ವದಲ್ಲಿ ದೇಶವು ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದ್ದು, ಪಶ್ಚಿಮ ಪದವೀಧರರ ಕ್ಷೇತ್ರದಲ್ಲೂ ಅಭಿವೃದ್ಧಿಯ ವೇಗವನ್ನು ಮತ್ತಷ್ಟು ಹೆಚ್ಚಿಸಲು ಸಂಕನೂರ ಅವರಿಗೆ ಮೊದಲ ಪ್ರಾಶಸ್ತ್ಯದ ಮತ ನೀಡಬೇಕು ಎಂದು ಪದವೀಧರ ಮತದಾರರಲ್ಲಿ ಮನವಿ ಮಾಡಿದರು.

ಈ ಹಿಂದೆ ಪದವೀಧರರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಸುಧೀರ ದೇಶಪಾಂಡೆ ಅವರು ಪಕ್ಷದ ಸೂಚನೆಯಂತೆ ಸಂಕನೂರ ಅವರ ಪರ ಶನಿವಾರ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವುದಾಗಿ ತಿಳಿಸಿದರು.

ಈ ವೇಳೆ ಶಾಸಕ ಮಹೇಶ ಟೆಂಗಿನಕಾಯಿ, ವಿಪ ಸದಸ್ಯ ಲಿಂಗರಾಜ ಪಾಟೀಲ, ಧಾರವಾಡ ಗ್ರಾಮಾಂತರ ಬಿಜೆಪಿ ಅಧ್ಯಕ್ಷ ನಿಂಗಪ್ಪ ಸುತಗಟ್ಟಿ, ಹಿರಿಯ ಮುಖಂಡರಾದ ಶಂಕ್ರಣ್ಣ ಮುನವಳ್ಳಿ, ಸುಧೀಂದ್ರ ದೇಶಪಾಂಡೆ, ರಾಜು ಕಾಳೆ ಸೇರಿದಂತೆ ಶಿಕ್ಷಕರು, ಕ್ಷೇತ್ರದ ಗಣ್ಯರು, ಬಿಜೆಪಿ ಪದಾಧಿಕಾರಿಗಳಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಹದಾಯಿ ಅನುಮತಿ, 5 ವಿಮಾನ ನಿಲ್ದಾಣಗಳಿಗೆ ಕನ್ನಡಿಗರ ಹೆಸರಿಡಿ
ಜೋಶಿ ವಿರುದ್ಧ ಅವಹೇಳನಕಾರಿ ಭಾಷಣ: ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ