ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನಿರ್ದೇಶನದಂತೆ ಪಕ್ಷದ ಬೀದರ್ ಜಿಲ್ಲಾ ವಕ್ತಾರರನ್ನಾಗಿ ಹಿರಿಯ ಪತ್ರಕರ್ತ ಸದಾನಂದ ಜೋಶಿ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.
ಬೀದರ್: ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನಿರ್ದೇಶನದಂತೆ ಪಕ್ಷದ ಬೀದರ್ ಜಿಲ್ಲಾ ವಕ್ತಾರರನ್ನಾಗಿ ಹಿರಿಯ ಪತ್ರಕರ್ತ ಸದಾನಂದ ಜೋಶಿ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.
ಕಳೆದ 30 ವರ್ಷಗಳಿಂದ ಸದಾನಂದ ಜೋಶಿ ಅವರು ಪತ್ರಿಕಾ ರಂಗದ ಮುಖಾಂತರ ಜಿಲ್ಲೆಯ ಅಭಿವೃದ್ಧಿಗಾಗಿ ಹಾಗೂ ಉತ್ತಮ ಸಮಾಜ ನಿರ್ಮಾಣಕ್ಕೆ ಸಾಕಷ್ಟು ಶ್ರಮಿಸಿದ್ದಾರೆ. ಸಾಮಾಜಿಕ ಚಿಂತಕರಾಗಿದ್ದು, ಜೊತೆಗೆ ಪ್ರಖರ ಲೇಖಕ, ಬರಹಗಾರರಾಗಿದ್ದಾರೆ. ಸುದ್ದಿಗಳು, ವರದಿಗಳು, ಲೇಖನ ಮೂಲಕ ಸಮಾಜಕ್ಕೆ ಸಾಕಷ್ಟು ಕೊಡುಗೆ ಕೊಟ್ಟಿದ್ದಾರೆ. ಪತ್ರಿಕಾ ರಂಗದಿಂದ ಸ್ವಯಂನಿವೃತ್ತಿ ಪಡೆದುಕೊಂಡು, ಬಿಜೆಪಿ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿಕೊಂಡು ಬಿಜೆಪಿಗೆ ಸೇರಿದ್ದಾರೆ. ಇವರಿಗೆ ಬಿಜೆಪಿ ಜಿಲ್ಲಾ ವಕ್ತಾರರ ಹೊಣೆವಹಿಸಲಾಗಿದೆ. ಕೂಡಲೇ ಜವಾಬ್ದಾರಿ ವಹಿಸಿಕೊಂಡು ಪಕ್ಷದ ಸಂಘಟನೆಯಲ್ಲಿ ತೊಡಗುವಂತೆ ಸೂಚಿಸಲಾಗಿದೆ.
ಇದೇ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಸಹ ವಕ್ತಾರರಾಗಿ ಬಸವರಾಜ ಪವಾರ್ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ. ಬಿಜೆಪಿ ಜಿಲ್ಲಾ ಮಾಧ್ಯಮ ಸಂಚಾಲಕರಾಗಿ ಶ್ರೀನಿವಾಸ ಚೌಧರಿ ಹಾಗೂ ಸಹ ಸಂಚಾಲಕರನ್ನಾಗಿ ಸಂಗಮೇಶ ನಾಸಿಗಾರ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್ ಹುಡಗಿ ತಿಳಿಸಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.