ಕನ್ನಡಪ್ರಭ ವಾರ್ತೆ ತುಮಕೂರು
ನಗರದ ಪತ್ರಿಕಾಭವನದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಡೆದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಸಂತಾಪ ಸೂಚಿಸಿ ಮಾತನಾಡಿದರು. ಮೆದುಳು ರಕ್ತಸ್ರಾವದಿಂದ ಶಸ್ತ್ರಚಿಕಿತ್ಸೆಗೆ ಒಳಗಾಗಿ ನಿಧನರಾದ ಮಮತಾ ಪ್ರತಿಯೊಬ್ಬರೊಂದಿಗೆ ಪ್ರೀತಿ ಹಾಗೂ ಆತ್ಮೀಯತೆಯಿಂದ ವರ್ತಿಸುತ್ತಿದ್ದರು. ಅವರು ಇತ್ತೀಚೆಗೆ ತಮ್ಮ ಅನಾರೋಗ್ಯದ ಬಗ್ಗೆ ಪತ್ರಕರ್ತ ಸ್ನೇಹಿತರೊಂದಿಗೆ ಹಂಚಿಕೊಂಡಿದ್ದರು. ಆದರೆ ಇಷ್ಟು ಬೇಗ ಸಾವು ಅವರನ್ನು ಅಪ್ಪಿಕೊಳ್ಳುತ್ತದೆ ಎಂಬುದನ್ನು ಊಹಿಸಿರಲಿಲ್ಲ. ಈ ಹಿಂದಿನ ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ್ ರವರೂ ಸಹ ಅಕಾಲಿಕ ಮರಣಕ್ಕೆ ತುತ್ತಾಗಿದ್ದು, ವಾರ್ತಾ ಇಲಾಖೆಗೆ ಗ್ರಹಣ ಹಿಡಿದಂತಾಗಿದೆ ಎಂದರು.ಹಿರಿಯ ಪತ್ರಕರ್ತ ಎಸ್.ನಾಗಣ್ಣ ಮಾತನಾಡಿ, ವಾರ್ತಾ ಇಲಾಖೆ ಅಧಿಕಾರಿಗಳು ಜಿಲ್ಲಾಡಳಿತ ಮಾಧ್ಯಮದ ನಡುವಿನ ಸಂಪರ್ಕ ಕೊಂಡಿ. ಇತ್ತೀಚೆಗೆ ಸರ್ಕಾರಿ ಅಧಿಕಾರಿಗಳು ಅತ್ಯಂತ ಹೆಚ್ಚಿನ ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಅಗತ್ಯ ಸಿಬ್ಬಂದಿ ಕೊರತೆಯು ಇದಕ್ಕೆ ಕಾರಣವಾಗಿದೆ. ಪರಿಸ್ಥಿತಿಯನ್ನು ಅರ್ಥೈಸಿಕೊಂಡು ಮಾಧ್ಯಮದವರು ಸಲಹೆ ರೂಪದಲ್ಲಿ ಅಧಿಕಾರಿಗಳೊಡನೆ ಸಂವಹನ ಸಾಧಿಸಬೇಕು. ಮಮತಾ ಹಾಗೂ ಮಂಜುನಾಥ್ ನಿಧನ ತುಂಬಲಾರದ ನಷ್ಟ ಎಂದರು.
ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕ ಮೋಹನ್ ಕುಮಾರ್ ಮಾತನಾಡಿ, ಮಮತಾ ಚುರುಕಿನಿಂದ ಕಾರ್ಯನಿರ್ವಹಿಸುತ್ತಿದ್ದರು. ಆದರೆ ಅವರ ಅನಾರೋಗ್ಯ ಅವರನ್ನು ಕರ್ತವ್ಯ ನಿರ್ವಹಿಸಲು ಅನುಮತಿಸುತ್ತಿರಲಿಲ್ಲ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದರು.ಗೃಹ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಡಾ. ನಾಗಣ್ಣ ಮಾತನಾಡಿ, ಸರ್ಕಾರ ಮತ್ತು ಮಾಧ್ಯಮಗಳ ನಡುವಿನ ಸಂವಹನಕಾರರಾಗಿದ್ದ ಮಮತಾ ನಿಧನ ತುಂಬಲಾರದ ನಷ್ಟವಾಗಿದೆ ಎಂದರು.