ಕನ್ನಡಪ್ರಭ ವಾರ್ತೆ ಸಾಗರ
ಪಟ್ಟಣದ ನ್ಯೂ ಬಿ.ಎಚ್.ರಸ್ತೆಯ ಸ್ವಾತಿ ವೆಜ್ ಹೋಟೆಲ್‌ಗೆ ಶನಿವಾರ ಮಹೇಶ್ ಹೆಗಡೆ ಅವರು ತಮ್ಮ ಸ್ನೇಹಿತರ ಜೊತೆ ಹೋಗಿದ್ದಾಗ ರವೀಂದ್ರ ಕಾಮತ್, ಪ್ರದೀಪ್ ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆ ಹಾಕಿದ್ದಾರೆ. ನಮ್ಮ ವಿರುದ್ದ ಸುದ್ದಿ ಬರೆಯುತ್ತೀಯಾ, ನಿನ್ನನ್ನು ಮುಗಿಸಿ ಬಿಡುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ ಎಂದು ಮನವಿಯಲ್ಲಿ ಹೇಳಲಾಗಿದೆ.
ವಸ್ತುನಿಷ್ಟವಾಗಿ ವರದಿ ಮಾಡುವುದು ಪತ್ರಕರ್ತರ ಆದ್ಯ ಕರ್ತವ್ಯ. ಆದರೆ ತಮ್ಮ ವಿರುದ್ದವೇ ಸುದ್ದಿ ಮಾಡುತ್ತಿದ್ದಾರೆ ಎಂದು ಭಾವಿಸಿ ಹಲ್ಲೆ ಮಾಡುವುದು, ಜೀವ ಬೆದರಿಕೆ ಹಾಕುವುದನ್ನು ಸಂಘವು ತೀವ್ರವಾಗಿ ಖಂಡಿಸುತ್ತದೆ. ಇದರಿಂದ ಪ್ರಾಮಾಣಿಕವಾಗಿ ವರದಿ ಮಾಡಲು ಹಿಂದೇಟು ಹಾಕುವ ಸ್ಥಿತಿ ನಿರ್ಮಾಣವಾಗುತ್ತದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.ಮಹೇಶ್ ಹೆಗಡೆ ಮೇಲೆ ಹಲ್ಲೆಗೆ ಯತ್ನಿಸಿ ಕೊಲೆ ಬೆದರಿಕೆ ಹಾಕಿರುವ ರವೀಂದ್ರ ಕಾಮತ್ ಮತ್ತು ಪ್ರದೀಪ್ ಅವರನ್ನು ತಕ್ಷಣ ಬಂಧಿಸಿ, ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಮಹೇಶ್ ಹೆಗಡೆ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಸಂಘದ ಅಧ್ಯಕ್ಷ ಜಿ. ನಾಗೇಶ್, ಉಪಾಧ್ಯಕ್ಷ ಲೋಕೇಶಕುಮಾರ್, ಪ್ರಧಾನ ಕಾರ್ಯದರ್ಶಿ ಮಹೇಶ್ ಹೆಗಡೆ, ಖಜಾಂಚಿ ಎಂ.ಜಿ.ರಾಘವನ್, ಸಂಘದ ಸದಸ್ಯರು ಹಾಜರಿದ್ದರು.