ದಲಿತ ಸಾಹಿತ್ಯ ಪರಿಷತ್‌ ಅಧ್ಯಕ್ಷರಾಗಿ ಪತ್ರಕರ್ತ ವಸಂತಯ್ಯ ಅವಿರೋಧ ಆಯ್ಕೆ

KannadaprabhaNewsNetwork |  
Published : Nov 18, 2025, 12:30 AM IST
17ಎಚ್ಎಸ್ಎನ್19: | Kannada Prabha

ಸಾರಾಂಶ

ಹೊಳೆನರಸೀಪುರ ಪಟ್ಟಣದ ಹೇಮಾವತಿ ನದಿ ದಡದಲ್ಲಿರುವ ಪ್ರವಾಸಿ ಮಂದಿರದಲ್ಲಿ, ಹಾಸನ ಜಿಲ್ಲಾ ಸಹ ಕಾರ್ಯದರ್ಶಿ ಹಾನಗಲ್ ದೇವರಾಜ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ಜರುಗಿತು. ಸಭೆಯಲ್ಲಿ ತಾಲೂಕು ಘಟಕದ ಇತರೆ ಪದಾಧಿಕಾರಿಗಳನ್ನೂ ಆಯ್ಕೆ ಮಾಡಲಾಗಿದ್ದು, ಉಪಾಧ್ಯಕ್ಷರಾಗಿ ಕಡುವಿನ ಹೊಸಹಳ್ಳಿಯ ಕೆ.ಎಂ. ನಾಗರಾಜ್, ಖಜಾಂಚಿಯಾಗಿ ಎಚ್. ಗಿರೀಶ್, ಗೌರವಾಧ್ಯಕ್ಷ ಬಿ.ಕೆ. ವೆಂಕಟೇಶ್ ಇವರೊಂದಿಗೆ ಹಲವಾರು ಕಾರ್ಯಕರ್ತರು ಹೊಸ ಕಾರ್ಯಕಾರಿ ಸಮಿತಿಗೆ ಸೇರ್ಪಡೆಯಾಗಿದ್ದಾರೆ. ಕಾರ್ಯಕ್ರಮವು ಸಾಂಸ್ಕೃತಿಕ ಮತ್ತು ಸಾಮಾಜಿಕ ಸಂದೇಶಗಳಿಂದ ಕೂಡಿದ್ದು, ಸಭೆ ಆರಂಭದಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ್‌ ಹಾಗೂ ಶತಾಯುಷಿ ಸಾಲುಮರದ ತಿಮ್ಮಕ್ಕ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಲಾಯಿತು.

ಕನ್ನಡಪ್ರಭ ವಾರ್ತೆ ಹಾಸನ

ಹೊಳೆನರಸೀಪುರ ತಾಲೂಕು ದಲಿತ ಸಾಹಿತ್ಯ ಪರಿಷತ್ ಘಟಕದ ಅಧ್ಯಕ್ಷರಾಗಿ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯರಾಗಿರುವ ಪತ್ರಕರ್ತ ಡಿ.ಕೆ. ವಸಂತಯ್ಯ ಅವರು ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.

ಹೊಳೆನರಸೀಪುರ ಪಟ್ಟಣದ ಹೇಮಾವತಿ ನದಿ ದಡದಲ್ಲಿರುವ ಪ್ರವಾಸಿ ಮಂದಿರದಲ್ಲಿ, ಹಾಸನ ಜಿಲ್ಲಾ ಸಹ ಕಾರ್ಯದರ್ಶಿ ಹಾನಗಲ್ ದೇವರಾಜ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ಜರುಗಿತು. ಸಭೆಯಲ್ಲಿ ತಾಲೂಕು ಘಟಕದ ಇತರೆ ಪದಾಧಿಕಾರಿಗಳನ್ನೂ ಆಯ್ಕೆ ಮಾಡಲಾಗಿದ್ದು, ಉಪಾಧ್ಯಕ್ಷರಾಗಿ ಕಡುವಿನ ಹೊಸಹಳ್ಳಿಯ ಕೆ.ಎಂ. ನಾಗರಾಜ್, ಖಜಾಂಚಿಯಾಗಿ ಎಚ್. ಗಿರೀಶ್, ಗೌರವಾಧ್ಯಕ್ಷ ಬಿ.ಕೆ. ವೆಂಕಟೇಶ್ ಇವರೊಂದಿಗೆ ಹಲವಾರು ಕಾರ್ಯಕರ್ತರು ಹೊಸ ಕಾರ್ಯಕಾರಿ ಸಮಿತಿಗೆ ಸೇರ್ಪಡೆಯಾಗಿದ್ದಾರೆ. ಕಾರ್ಯಕ್ರಮವು ಸಾಂಸ್ಕೃತಿಕ ಮತ್ತು ಸಾಮಾಜಿಕ ಸಂದೇಶಗಳಿಂದ ಕೂಡಿದ್ದು, ಸಭೆ ಆರಂಭದಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ್‌ ಹಾಗೂ ಶತಾಯುಷಿ ಸಾಲುಮರದ ತಿಮ್ಮಕ್ಕ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಲಾಯಿತು.

ಸಭೆಯ ಪ್ರಾಸ್ತಾವಿಕ ನುಡಿಯಲ್ಲಿ ಮಧು ಕೆ. ದೇವರಾಜ್ ಮಾತನಾಡಿ, ತಾಲೂಕು ಘಟಕದ ಅಧಿಕೃತ ಉದ್ಘಾಟನೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ನವೆಂಬರ್ ೩೦ರಂದು ಜಿಲ್ಲಾ ಮಟ್ಟದ ಭವ್ಯ ಕವಿಗೋಷ್ಠಿಯೊಂದಿಗೆ ಆಚರಿಸಲಾಗುವುದೆಂದು ಘೋಷಿಸಿದರು. ಈ ಕಾರ್ಯಕ್ರಮದ ಮೂಲಕ ದಲಿತ ಸಾಹಿತ್ಯ, ಸಂಸ್ಕೃತಿ, ಸಮಾಜ ಪರಿವರ್ತನೆಗಳ ಬಗ್ಗೆ ಚಿಂತನೆಗೆ ವೇದಿಕೆ ಸಿದ್ಧವಾಗಲಿದೆ ಎಂದರು.ಅಧ್ಯಕ್ಷರಾಗಿ ಆಯ್ಕೆಗೊಂಡ ಪತ್ರಕರ್ತ ಡಿ.ಕೆ. ವಸಂತಯ್ಯರವರನ್ನು ಇದೇ ವೇಳೆ ಸನ್ಮಾನಿಸಿ ಗೌರವಿಸಿದರು.

ಈ ಮಹತ್ವದ ಸಭೆಯಲ್ಲಿ ಸಂಘಟನಾ ಕಾರ್ಯದರ್ಶಿ ಕೃಷ್ಣಯ್ಯ, ಕೃಷ್ಣದಾಸ್, ಸೋಮಶೇಖರ್ ಎಂ., ಮಹಿಳಾ ಸರ್ಕಾರಿ ಡಿಪ್ಲೋಮೋ ಕಾಲೇಜಿನ ಉಪನ್ಯಾಸಕ ಎನ್.ಆರ್‌. ಶಿವರಾಮ್, ಡಿ.ಆರ್‌. ರಂಗಸ್ವಾಮಿ, ಪರಿಷತ್ತಿನ ನಿಕಟ ಪೂರ್ವ ಅಧ್ಯಕ್ಷ ಎಚ್.ಟಿ. ಲಕ್ಷ್ಮಣ್ ಸೇರಿದಂತೆ ಅನೇಕ ದಲಿತ ಮುಖಂಡರು ಹಾಜರಿದ್ದರು.

PREV

Recommended Stories

ಬದುಕನ್ನು ಸಾರ್ಥಕವಾಗಿಸಲು ಸಹಕಾರಿ ಕ್ಷೇತ್ರ ಅತ್ಯುತ್ತಮ: ಆಶಯ್ ಜಿ.ಮಧು
ಆಂಜನೇಯಸ್ವಾಮಿ ದೇವಸ್ಥಾನದ ಕಾಂಪೌಂಡ್ ನಿರ್ಮಾಣಕ್ಕೆ ಸಿಎಸ್ಪಿ ಸೂಚನೆ