ಐಗೂರು ಪ್ರೌಢಶಾಲೆ: ಕಿಚನ್‌ ಗಾರ್ಡನ್‌ಗೆ ಚಾಲನೆ

KannadaprabhaNewsNetwork |  
Published : Jun 09, 2026, 02:45 AM IST
ಐಗೂರು ಪ್ರೌಢಶಾಲೆಯಲ್ಲಿ ಪರಿಸರ ದಿನಾಚರಣೆ ಅಂಗವಾಗಿ ಕಿಚನ್‌ ಗಾರ್ಡನ್‌ಗೆ ಚಾಲನೆ | Kannada Prabha

ಸಾರಾಂಶ

ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಹಕ್ಕು. ನಮ್ಮ ಪರಿಸರವನ್ನು ನಾವು ಉಳಿಸಿಕೊಳ್ಳಬೇಕಿದೆ ಎಂದು ಕೋವರ್‌ಕೊಲ್ಲಿ ಟಾಟಾ ಕಾಫಿ ಸಂಸ್ಥೆಯ ಸಹಾಯಕ ವ್ಯವಸ್ಥಾಪಕ ಪಾಲೇಕಂಡ ಉತ್ತಮ್ ಮುತ್ತಣ್ಣ ಹೇಳಿದರು.

ಕನ್ನಡಪ್ರಭವಾರ್ತೆ ಸೋಮವಾರಪೇಟೆ

ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಹಕ್ಕು. ನಮ್ಮ ಪರಿಸರವನ್ನು ನಾವು ಉಳಿಸಿಕೊಳ್ಳಬೇಕಿದೆ ಎಂದು ಕೋವರ್‌ಕೊಲ್ಲಿ ಟಾಟಾ ಕಾಫಿ ಸಂಸ್ಥೆಯ ಸಹಾಯಕ ವ್ಯವಸ್ಥಾಪಕ ಪಾಲೇಕಂಡ ಉತ್ತಮ್ ಮುತ್ತಣ್ಣ ಹೇಳಿದರು. ಇಲ್ಲಿಗೆ ಸಮೀಪದ ಐಗೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಭುವನಕ್ಕೊಂದು ಸದನ ಇಕೋ ಕ್ಲಬ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶಾಲಾ ಆವರಣದಲ್ಲಿ ನೂತನವಾಗಿ ನಿರ್ಮಿಸಲಾದ ಕಿಚನ್‌ಗಾರ್ಡನ್ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು. ಪ್ರಕೃತಿ ಉಳಿಯಬೇಕಾದರೆ ಮಕ್ಕಳ ಮನಸ್ಸಿನಲ್ಲಿ ಪ್ರಕೃತಿಯ ಬೀಜ ಬಿತ್ತಬೇಕು ಎಂದರು.ಗಿಡ ನೆಟ್ಟು ನೀರೆರೆಯುವ ಮೂಲಕ ಕೈತೋಟಕ್ಕೆ ಚಾಲನೆ ನೀಡಿದ ಲಯನ್ಸ್ ಸಂಸ್ಥೆ ಮಾಜಿ ಅಧ್ಯಕ್ಷ ಹಾಗೂ ದಾನಿಗಳಾದ ಮಣವಟ್ಟೀರ ಹರೀಶ್ ಅಯ್ಯಣ್ಣ ಮಾತನಾಡಿ, ಹೊಸ ಚಿಂತನೆಯ,ಹೊಸ ಮನೋಭಾವದ ಪ್ರಕೃತಿಯನ್ನು ಪ್ರೀತಿಸುವ ಮಕ್ಕಳು ಇಂದು ಬರಬೇಕಾಗಿದೆ. ಮೊಬೈಲ್ ಸಂಸ್ಕೃತಿಯನ್ನು ಬಿಟ್ಟು ಮಕ್ಕಳಿಗೆ ಪರಿಸರ ರಕ್ಷಣೆ ಕುರಿತು ಜಾಗೃತಿ ಮೂಡಿಸಬೇಕಾದ ಅಗತ್ಯತೆ ಇದೆ ಎಂದರು. ಪ್ರೌಢಶಾಲಾ ಮುಖ್ಯ ಶಿಕ್ಷಕ ಎಂ.ಎಂ.ಯಶ್ವಂತ್ ಕುಮಾರ್ ಮಾತನಾಡಿ,ಇಂದು ರಾಸಾಯನಿಕ ಮುಕ್ತ ತರಕಾರಿ ಬೆಳೆಯ ಅವಶ್ಯಕತೆ ಇದೆ.ಶಾಲಾ ವಿದ್ಯಾರ್ಥಿಗಳಿಗೆ ತಾಜಾ ತರಕಾರಿಗಳು, ಸೊಪ್ಪುಗಳು ಮತ್ತು ಗಿಡಮೂಲಿಕೆಗಳನ್ನು ಬೆಳೆಯಲು ಶಾಲಾ ಆವರಣದಲ್ಲಿ ಕೈತೋಟದ ಅಗತ್ಯವಿದೆ ಎಂದರು. ವಿಜ್ಞಾನ ಶಿಕ್ಷಕಿ ಎಸ್.ಎಸ್.ರಂಜಿನಿ ಇಕೋ ಕ್ಲಬ್ ಕಾರ್ಯ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು.ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಕಾಲೇಜು ಪ್ರಾಂಶುಪಾಲ ಎಚ್.ಕೆ.ಉಮೇಶ್ ಕುಮಾರ್‌ಸಹ ಶಿಕ್ಷಕರು,ಸಿಬ್ಬಂದಿಗಳು.ಶಾಲಾ ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ೬ಎಸ್‌ಪಿಟಿ೩: ಸೋಮವಾರಪೇಟೆ ಸಮೀಪ ಐಗೂರು ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಇಕೋ ಕ್ಲಬ್‌ನ ಭುವನಕ್ಕೊಂದು ಸದನದ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶಾಲಾ ಆವರಣದಲ್ಲಿ ನೂತನವಾಗಿ ನಿರ್ಮಿಸಲಾದ ಅಡುಗೆ ಮನೆ ತೋಟದ ಉದ್ಘಾಟನೆಯನ್ನು ಕೋವರ್‌ಕೊಲ್ಲಿ ಟಾಟಾ ಕಾಫಿ ಸಂಸ್ಥೆಯ ಸಹಾಯಕ ವ್ಯವಸ್ಥಾಪಕರಾದ ಪಾಲೇಕಂಡ ಉತ್ತಮ್ ಮುತ್ತಣ್ಣ ನೆರವೇರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ. ರಾಜೇಂದ್ರ ಕುಮಾರ್‌ಗೆ ಸನ್ಮಾನ
ಡಾ. ಮಂತರ್ ಗೌಡಗೆ ಸಚಿವ ಸ್ಥಾನ ನೀಡಲು ಕಾಂಗ್ರೆಸ್ ಮುಖಂಡರ ಒತ್ತಾಯ