ಕನ್ನಡಪ್ರಭ ವಾರ್ತೆ ಬೆಳಗಾವಿ
ಹಿರಿಯ ಪತ್ರಕರ್ತ, ಸಾಹಿತಿ ಸರಜೂ ಕಾಟ್ಕರ್ ಮಾತನಾಡಿ, 1843 ರಲ್ಲಿ ಕರ್ನಾಟಕದಲ್ಲಿ ಮೊಟ್ಟ ಮೊದಲಬಾರಿಗೆ ಜರ್ಮನ್ ದೇಶದ ಫಾದರ್ ಹರ್ಮನ್ ಮೊಗ್ಲಿಂಗ್ ಅವರು ಕನ್ನಡ ಕಲಿತು ಜನರಿಗೆ ಸಂದೇಶ, ಮಾಹಿತಿ ತಿಳಿಸಲು ಬಳ್ಳಾರಿಯಲ್ಲಿ ಕೈಬರಹದಲ್ಲಿ ಕನ್ನಡ ಸಮಾಚಾರ ಎಂಬ ಪತ್ರಿಕೆ ಪ್ರಾರಂಭಿಸಿದರು. ಬಳಿಕ ಮಂಗಳೂರಿನಲ್ಲಿ ಅವರು 1843ರ ಜುಲೈ 1 ರಂದು ಮಂಗಳೂರು ಸಮಾಚಾರ ಎಂಬ ಮುದ್ರಿತ ದಿನಪತ್ರಿಕೆ ಪ್ರಾರಂಭಿಸಿದರು. ಹಾಗಾಗಿ ದಾಖಲೆಗಳ ಪ್ರಕಾರ ಮಂಗಳೂರು ಸಮಾಚಾರ ಪತ್ರಿಕೆಯನ್ನು ಕನ್ನಡದ ಮೊಟ್ಟ ಮೊದಲು ಪತ್ರಿಕೆ ಎಂದು ಕರೆಯಲಾಗುತ್ತದೆ. ಮೊಗ್ಲಿಂಗ್ ಅವರು ಭಾಷೆ ಪ್ರಬುದ್ಧತೆಗೆ ಬರದ ಕಾಲದಲ್ಲಿ ಪತ್ರಿಕೆ ಆರಂಭಿಸಿದರು. ಈ ದಿನವನ್ನು ಪತ್ರಿಕಾ ದಿನಾಚರಣೆ ಎಂದು ಆಚರಿಸಲಾಗುತ್ತದೆ ಎಂದು ಕರ್ನಾಟಕದಲ್ಲಿ ಪತ್ರಿಕೋದ್ಯಮ ಉಗಮದ ಬಗ್ಗೆ ಮಾಹಿತಿ ನೀಡಿದರು.
ಗೋಕಾಕ ಕಾರ್ಯನಿರತ ಪತ್ರಕರ್ತರ ಸಂಘದ ಗೌರವಾಧ್ಯಕ್ಷ ಸರ್ವೋತ್ತಮ ಜಾರಕಿಹೊಳಿ ಮಾತನಾಡಿ, ಯಾವುದೇ ವರದಿ ಇದ್ದರೂ ಹಿಂಜರಿಯದೆ ನೇರವಾಗಿ ವರದಿಗಳನ್ನು ಮಾಡಬೇಕು. ಸಮಾಜದಲ್ಲಿ ಪತ್ರಕರ್ತರಿಗೆ ನಿಂದನೆ ಸಹಜ. ಎಲ್ಲವನ್ನೂ ನಿಭಾಯಿಸಿಕೊಂಡು ಹೋಗಬೇಕು. ಪತ್ರಕರ್ತರ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗದಂತೆ ಸಂಘಟನೆ ಸದಾ ಬೆಂಬಲವಾಗಿ ನಿಂತಿದೆ ಎಂದು ಬೆಂಬಲ ಸೂಚಿಸಿದರು.ಡಿಸಿಪಿ ರೋಹನ್ ಜಗದೀಶ್ ಅವರು ಮಾತನಾಡಿ, ಸಮಾಜದ ಬೆಳವಣಿಗೆಗೆ ಪೊಲೀಸ್ ಇಲಾಖೆ ಹಾಗೂ ಪತ್ರಕರ್ತರ ಸಹಭಾಗಿತ್ವ ಮುಖ್ಯ. ಪತ್ರಿಕೋದ್ಯಮ ದೇಶದ ನಾಲ್ಕನೇ ಸ್ತಂಭವಾಗಿ ಕಾರ್ಯನಿರ್ವಹಿಸುತ್ತಿದೆ. ಉತ್ತಮ ಸಮಾಜ ನಿರ್ಮಾಣಕ್ಕೆ ನಿಮ್ಮೆಲ್ಲರ ಸಹಕಾರ ತುಂಬ ಅಗತ್ಯ ಎಂದು ಪ್ರಶಂಸಿಸಿದರು.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪ ನಿರ್ದೇಶಕ ಗುರುನಾಥ ಕಡಬೂರ ಮಾತನಾಡಿ, ಪತ್ರಿಕೋದ್ಯಮ ಸ್ವರೂಪ ಬದಲಾಗುತ್ತಿರುವುದನ್ನು ಗಮನಿಸಿ ನಮ್ಮ ವಿಚಾರಗಳನ್ನು, ಕಾರ್ಯಕ್ಷಮತೆಯನ್ನು ಬದಲಾಯಿಸಿಕೊಂಡು ತಂತ್ರಜ್ಞಾನದ ಬಳಕೆಯೊಂದಿಗೆ ಎಲ್ಲರೂ ಯಶಸ್ವಿ ಪತ್ರಕರ್ತರಾಗಿ ಮುನ್ನಡೆಯೋಣ ಎಂದು ಹೇಳಿದರು.ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಳಗಾವಿ ಜಿಲ್ಲಾ ಘಟಕದ ಅಧ್ಯಕ್ಷ ದಿಲೀಪ್ ಕುರಂದವಾಡಿ ಅವರು ಆಶಯನುಡಿಗಳನ್ನಾಡಿ ಪತ್ರಕರ್ತರಿಗೆ ತಂತ್ರಜ್ಞಾನ ಅಳವಡಿಕೆ, ತರಬೇತಿ ನೀಡುವುದು. ಪತ್ರಕರ್ತರಿಗೆ ನಗರಾಭಿವೃದ್ಧಿ ಪ್ರಾಧಿಕಾರದ ಹಾಗೂ ಖಾಸಗಿ ಬಡಾವಣೆ ನಿರ್ಮಿಸಿ ನಿವೇಶನ ಹಂಚಿಕೆ ಕುರಿತು ಹಾಗೂ ಕಾಲಕ್ಕೆ ತಕ್ಕಂತೆ ಪತ್ರಕರ್ತರು ಇಂದಿನ ಡಿಜಿಟಲ್ ಮಾಧ್ಯಮದಲ್ಲಿ ಹೇಗೆ ಸಕ್ರಿಯವಾಗಿ ತೊಡಗಿಕೊಳ್ಳಬೇಕು ಎಂಬುದರ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಎಸ್ಎಸ್ಎಲ್ಸಿ, ಪಿಯುಸಿ ಮತ್ತು ಪದವಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ಪತ್ರಕರ್ತರ ಪ್ರತಿಭಾವಂತ ಮಕ್ಕಳಿಗೆ ಸನ್ಮಾನಿಸಿ ಗೌರವಿಸಲಾಯಿತು.
ಹಿರಿಯ ಪತ್ರಕರ್ತರಾದ ಮನೀಷಾ ಸುಬೇದಾರ್, ಸುಭಾಸ್ ಕುಲಕರ್ಣಿ, ಸುರೇಶ್ ಶ್ಯಾನಭೋಗ ಅವರನ್ನು ಸನ್ಮಾನಿಸಲಾಯಿತು. ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ ಸಂಘದ ಪದಾಧಿಕಾರಿಗಳು, ಸದಸ್ಯರು, ಬೆಳಗಾವಿ ಪತ್ರಕರ್ತರು ಹಾಗೂ ಕುಟುಂಬ ವರ್ಗದವರು, ಭಾಗವಹಿಸಿದ್ದರು.
ಕೋಟ್
ಸರಜೂ ಕಾಟ್ಕರ್, ಸಾಹಿತಿ