ಪತ್ರಕರ್ತರು ಜನಸಾಮಾನ್ಯರ ಧ್ವನಿ

KannadaprabhaNewsNetwork |  
Published : Aug 06, 2026, 03:00 AM IST
ಕೆಲಸ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಇಂಡಿ ಸಮಾಜದ ಮುನ್ನಡೆ ಹಾಗೂ ಅಭಿವೃದ್ಧಿಯಲ್ಲಿ ಪತ್ರಿಕೋದ್ಯಮದ ಪಾತ್ರ ದೊಡ್ಡದಾಗಿದೆ. ಗ್ರಾಮೀಣ ಭಾಗದ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತರುವಲ್ಲಿ ಪತ್ರಕರ್ತರು ಸೇತುವೆಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ತಾಪಂ ಇಒ ಮಹಾದೇವಪ್ಪ ಏವೂರ ಹೇಳಿದರು.

ಕನ್ನಡಪ್ರಭ ವಾರ್ತೆ ಇಂಡಿ

ಸಮಾಜದ ಮುನ್ನಡೆ ಹಾಗೂ ಅಭಿವೃದ್ಧಿಯಲ್ಲಿ ಪತ್ರಿಕೋದ್ಯಮದ ಪಾತ್ರ ದೊಡ್ಡದಾಗಿದೆ. ಗ್ರಾಮೀಣ ಭಾಗದ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತರುವಲ್ಲಿ ಪತ್ರಕರ್ತರು ಸೇತುವೆಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ತಾಪಂ ಇಒ ಮಹಾದೇವಪ್ಪ ಏವೂರ ಹೇಳಿದರು.

ನಗರದ ಗುರುಭವನದಲ್ಲಿ ಭಾಗ್ಯವಂತಿ ವಿದ್ಯಾವರ್ಧಕ ಸಂಘ ಆಯೋಜಿಸಿದ್ದ ಪತ್ರಿಕಾ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ತಹಸೀಲ್ದಾರ್ ನಾಗೇಂದ್ರ ಕೋಳಶೆಟ್ಟಿ ಮಾತನಾಡಿ, ಆಡಳಿತ ವ್ಯವಸ್ಥೆ ಮತ್ತು ಸಾರ್ವಜನಿಕರ ನಡುವೆ ಪತ್ರಿಕೆಗಳು ಪ್ರಮುಖ ಕೊಂಡಿಯಾಗಿವೆ. ಪತ್ರಕರ್ತರು ಸದಾ ಜನಪರ ಕಾಳಜಿಯೊಂದಿಗೆ ನಿಷ್ಪಕ್ಷಪಾತ ವರದಿಗಾರಿಕೆಗೆ ಆದ್ಯತೆ ನೀಡಬೇಕು ಎಂದು ಕರೆ ನೀಡಿದರು.

ಹಿರಿಯ ಪತ್ರಕರ್ತ ಉಮೇಶ ಕೊಳೇಕರ, ಸರಕಾರಿ ನೌಕರರ ಸಂಘದ ಅಧ್ಯಕ್ಷ ಬಸವರಾಜ ರಾವುರ ಮಾತನಾಡಿದರು. ನಾದ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಚಿದಂಬರ ಬಂಡಗರ ಉಪನ್ಯಾಸ ನೀಡಿದರು.

ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ಶಿರಶ್ಯಾಡ ಸಂಸ್ಥಾನ ಹಿರೇಮಠದ ಅಭಿನವ ಮುರುಘೇಂದ್ರ ಶಿವಾಚಾರ್ಯರು ಆಶೀರ್ವಚನ ನೀಡಿ, ಪತ್ರಿಕೆಗಳು ಸತ್ಯದ ಹಾದಿಯಲ್ಲಿ ಸಾಗಬೇಕು ಮತ್ತು ಸಮಾಜದ ತಪ್ಪು ಒಪ್ಪುಗಳನ್ನು ತಿದ್ದುವ ಕೆಲಸ ಮಾಡಬೇಕು. ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಅವರ ಪಾತ್ರ ಅತ್ಯಂತ ದೊಡ್ಡದಾಗಿದೆ ಎಂದು ಪತ್ರಕರ್ತರ ಕಠಿಣ ಶ್ರಮವನ್ನು ಕೊಂಡಾಡಿದರು.ಚವಡಿಹಾಳದ ಭಾಗ್ಯವಂತಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಚಂದ್ರಕಾಂತ ದಶವಂತ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಮುಖಂಡ ಅನೀಲ ಜಮಾದಾರ, ಜೆಡಿಎಸ್‌ನ ಅಯುಬ ನಾಟಿಕಾರ, ಶಿಕ್ಷಕರಾದ ಬಿ.ವೈ.ಗೊರನಾಳ, ವೈ.ಜಿ.ಬಿರಾದಾರ, ಹೆಸ್ಕಾಂ ಎಇಇ ಸಂಗಮೇಶ ಮೇಡೇದಾರ, ಕ್ಷೇತ್ರಶಿಕ್ಷಣಾಧಿಕಾರಿ ಮೋಹನ್‌ಕುಮಾರ್ ಪಿ, ಪತ್ರಕರ್ತರಾದ ಎ.ಸಿ.ಪಾಟೀಲ, ಆರ್.ಬಿ.ಸಿಂಪಿ, ನಿಜಣ್ಣ ಕಾಳೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಯೋಗೆಪ್ಪ ಚನಗೊಂಡ, ಯಮನಾಜಿ ಸಾಳುಂಕೆ, ಪ್ರಕಾಶ ಐರೊಡಗಿ ಇದ್ದರು.ಕಾರ್ಯಕ್ರಮದಲ್ಲಿ ಪತ್ರಕರ್ತರಾದ ಉಮೇಶ ಬಳಬಟ್ಟಿ, ಯಲಗೊಂಡ ಬೇನೂರ, ನಿಂಗನಗೌಡ ಬಿರಾದಾರ, ಖಾಜು ಸಿಂಗೆಗೋಳ, ಶಂಕರ ಜಮಾದಾರ, ಶರಣು ಕಾಂಬಳೆ, ಆನಂದ ಗಣಾಚಾರಿ, ಸಚಿನ್ ಇಂಡಿ, ಮಲ್ಲಿಕಾರ್ಜುನ ಹಾವಿನಾಳಮಠ, ರಾಮಚಂದ್ರ ಯಂಕಂಚಿ, ಫಯಾಜ ಬಾಗವಾನ, ಸಿದ್ದು ಕೋಷ್ಠಿ, ಸಿದ್ದು ಹತ್ತಳ್ಳಿ, ಅಲ್ಲಾಭಕ್ಷ ಗೋರೆ, ಸಂಜು ಕೋಳಿ, ಕಾಶೀನಾಥ ಕ್ಷತ್ರಿ, ಅರವಿಂದ ಕಾಂಬಳೆ, ತುಕಾರಾಮ ಪವಾರ, ಲಾಲಸಿಂಗ್‌ ರಾಠೋಡ, ಆನಂದ ಅಗರಖೇಡ, ಸೇರಿದಂತೆ ಭಾಗ್ಯವಂತಿ ವಿದ್ಯಾವರ್ಧಕ ಸಂಘದ ಪದಾಧಿಕಾರಿಗಳು, ತಾಲೂಕಿನ ಪತ್ರಕರ್ತರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.-------

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿಡಿಪಿಒ ಹುದ್ದೆಗೆ ಇಬ್ಬರ ಕಾದಾಟ!
ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ