ಸಂಚಾರಿ ಪೀಠದ ಹೋರಾಟಕ್ಕೆ ಪತ್ರಕರ್ತರ ಸಂಘ ಬೆಂಬಲ

KannadaprabhaNewsNetwork |  
Published : Nov 04, 2026, 12:15 AM IST
ವಕೀಲರ ಧರಣಿಗೆ ಬೆಂಬಲ | Kannada Prabha

ಸಾರಾಂಶ

ಶಿವಮೊಗ್ಗದಲ್ಲಿಯೇ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಯಾಗಬೇಕು ಎಂದು ಒತ್ತಾಯಿಸಿ ವಕೀಲರ ಭವನದ ಎದುರು ಸಾಗರ ವಕೀಲರ ಸಂಘ ಹಮ್ಮಿಕೊಂಡಿರುವ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮಂಗಳವಾರ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಸಾಗರ ಶಾಖೆ ಭಾಗವಹಿಸಿ ಬೆಂಬಲ ಸೂಚಿಸಿದೆ.

ಕನ್ನಡಪ್ರಭ ವಾರ್ತೆ ಸಾಗರ

ಶಿವಮೊಗ್ಗದಲ್ಲಿಯೇ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಯಾಗಬೇಕು ಎಂದು ಒತ್ತಾಯಿಸಿ ವಕೀಲರ ಭವನದ ಎದುರು ಸಾಗರ ವಕೀಲರ ಸಂಘ ಹಮ್ಮಿಕೊಂಡಿರುವ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮಂಗಳವಾರ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಸಾಗರ ಶಾಖೆ ಭಾಗವಹಿಸಿ ಬೆಂಬಲ ಸೂಚಿಸಿದೆ.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಮಹೇಶ್ ಹೆಗಡೆ ಮಾತನಾಡಿ, ಹೈಕೋರ್ಟ್ ಸಂಚಾರಿ ಪೀಠವು ಶಿವಮೊಗ್ಗದಲ್ಲಿ ಸ್ಥಾಪನೆಯಾಗುವುದು ಅತ್ಯಗತ್ಯ. ಭೌಗೋಳಿಕವಾಗಿ, ಕಕ್ಷಿದಾರರು, ವಕೀಲರು, ಪ್ರಕರಣಗಳ ಸಂಖ್ಯೆಯನ್ನು ಗಮನಿಸಿದರೆ ಮಂಗಳೂರಿಗಿಂತ ಶಿವಮೊಗ್ಗ ಮೊದಲ ಸ್ಥಾನದಲ್ಲಿದೆ. ಮಧ್ಯ ಕರ್ನಾಟಕ ಭಾಗದಲ್ಲಿರುವ ಶಿವಮೊಗ್ಗಕ್ಕೆ ಅಕ್ಕಪಕ್ಕದ ಜಿಲ್ಲೆಗಳಿಂದ ಸಾರಿಗೆ, ರೈಲ್ವೆ, ವಿಮಾನಯಾನ ಇದ್ದು, ಕಕ್ಷಿದಾರರು ಅತಿಕಡಿಮೆ ಖರ್ಚಿನಲ್ಲಿಪ್ರಯಾಣ ಬೆಳೆಸಿ ನ್ಯಾಯಾಲಯದ ಕಲಾಪದಲ್ಲಿ ಭಾಗವಹಿಸಲು ಅವಕಾಶವಾಗುತ್ತದೆ. ಈ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ವಕೀಲರು ನಡೆಸುತ್ತಿರುವ ಹೋರಾಟ ನ್ಯಾಯಸಮ್ಮತವಾಗಿದೆ. ಮಾನ್ಯ ನ್ಯಾಯಮೂರ್ತಿಗಳು, ಸರ್ಕಾರ ಇದನ್ನು ಗಮನಿಸಬೇಕು. ಶಿವಮೊಗ್ಗದಲ್ಲಿ ಪೀಠ ಸ್ಥಾಪನೆಗೆ ಗಮನ ಹರಿಸಬೇಕು. ಪತ್ರಕರ್ತರ ಸಂಘವು ಹಿಂದಿನಿಂದಲೂ ಇಂತಹ ಜನಪರ ಕಾರ್ಯಗಳ ಮಂಚೂಣಿಯಲ್ಲಿ ನಿಂತು ಸಹಕಾರ ನೀಡುತ್ತಾ ಬರುತ್ತಿದೆ ಎಂದು ಹೇಳಿದರು.

ಹಿರಿಯ ಪತ್ರಕರ್ತ ಎಂ.ರಾಘವೇಂದ್ರ ಮಾತನಾಡಿ, ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಒತ್ತಾಯಿಸಿ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಹೋರಾಟಕ್ಕೆ ಉತ್ತಮ ಪ್ರತಿಕ್ರಿಯೆ ದೊರೆತಿದ್ದು, ಜನಪ್ರತಿನಿಧಿಗಳು ಇದನ್ನು ಗಂಭೀರವಾಗಿ ಪರಿಗಣಿಸಿ ಹೋರಾಟದ ಜೊತೆಗೆ ಮುಖ್ಯಮಂತ್ರಿಗಳ ಮೇಲೆ ಒತ್ತಡ ತರಬೇಕಾಗಿದೆ. ಇದು ಕೇವಲ ವಕೀಲರ ಒಳಿತಿಗಾಗಿ ನಡೆಯುತ್ತಿರುವ ಹೋರಾಟವಲ್ಲ. ಶಿವಮೊಗ್ಗದಲ್ಲಿಯೆ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಯಾದರೆ ಎಲ್ಲರಿಗೂ ಅನುಕೂಲವಾಗಲಿದೆ ಎಂದು ಹೇಳಿದರು.

ಪತ್ರಕರ್ತರ ಸಂಘದ ಎಂ.ಜಿ.ರಾಘವನ್, ದೀಪಕ್ ಸಾಗರ್, ಜಿ.ನಾಗೇಶ್, ಲೋಕೇಶ್ ಕುಮಾರ್, ಕೆ.ಬಿ.ಸತ್ಯನಾರಾಯಣ ಇನ್ನಿತರರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಾವೇರಿ ನೀರಾವರಿ ನಿಗಮದ ಕಚೇರಿಗೆ ರೈತರಿಂದ ಮುತ್ತಿಗೆ, ಪ್ರತಿಭಟನೆ
ಮಹಾಕಾವ್ಯಗಳ ಮೌಲ್ಯ ಮಕ್ಕಳಿಗೆ ತಿಳಿಸಿ