ಪತ್ರಕರ್ತರು ವಿಶ್ವಾಸಾರ್ಹತೆ ಕಾಪಾಡಿಕೊಳ್ಳಿ: ಕೆ.ವಿ.ಪ್ರಭಾಕರ್

KannadaprabhaNewsNetwork |  
Published : Feb 05, 2024, 01:46 AM IST
ಕ್ಯಾಪ್ಷನಃ4ಕೆಡಿವಿಜಿ33ಃಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ದಾವಣಗೆರೆಯಲ್ಲಿ ನಡೆದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್‌ರವರನ್ನು ಸನ್ಮಾನಿಸಲಾಯಿತು. | Kannada Prabha

ಸಾರಾಂಶ

ಬಾಲಿವುಡ್ ನಟಿ ಪೂನಂಪಾಂಡೆ ನಿಧನರಾಗಿದ್ದಾರೆ ಎಂದು ಮಾಧ್ಯಮಗಳು ದೊಡ್ಡ ಸುದ್ದಿ ಮಾಡಿ ಸಾವಿನ ಬಗ್ಗೆ ವಿಶ್ಲೇಷಣೆಯನ್ನೂ ಮಾಡಿಬಿಟ್ಟರು. ಆದರೆ, ಪೂನಂ ಪಾಂಡೆ ಬದುಕೇ ಇದ್ದಾರೆ. ಸಾವಿನ ಸುದ್ದಿಯನ್ನಾದರೂ ಪ್ರಕಟಿಸುವ ಮೊದಲು ಪರಿಶೀಲಿಸಿಕೊಳ್ಳದಿದ್ದರೆ ಹೇಗೆ ಎಂದು ಪ್ರಶ್ನಿಸಿದ ಅವರು ಇಂಥಾ ಪ್ರಕರಣಗಳಿಂದ ಪತ್ರಕರ್ತರು ಮತ್ತು ಪತ್ರಿಕೋದ್ಯಮದ ವಿಶ್ವಾಸಾರ್ಹತೆ ಉಳಿಯಲು ಸಾಧ್ಯವಿಲ್ಲ.

ಕನ್ನಡಪ್ರಭ ವಾರ್ತೆ ದಾವಣಗೆರೆ

ಪತ್ರಕರ್ತರು ವಿಶ್ವಾಸಾರ್ಹತೆ ಬೆಳೆಸಿಕೊಳ್ಳದಿದ್ದರೆ ವೃತ್ತಿಯ ವಿಶ್ವಾಸಾರ್ಹತೆ ಉಳಿಯುವುದಿಲ್ಲ ಎಂದು ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಆತಂಕ ವ್ಯಕ್ತಪಡಿಸಿದರು.

ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ 38ನೇ ರಾಜ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ಬಾಲಿವುಡ್ ನಟಿ ಪೂನಂಪಾಂಡೆ ನಿಧನರಾಗಿದ್ದಾರೆ ಎಂದು ಮಾಧ್ಯಮಗಳು ದೊಡ್ಡ ಸುದ್ದಿ ಮಾಡಿ ಸಾವಿನ ಬಗ್ಗೆ ವಿಶ್ಲೇಷಣೆಯನ್ನೂ ಮಾಡಿಬಿಟ್ಟರು. ಆದರೆ, ಪೂನಂ ಪಾಂಡೆ ಬದುಕೇ ಇದ್ದಾರೆ. ಸಾವಿನ ಸುದ್ದಿಯನ್ನಾದರೂ ಪ್ರಕಟಿಸುವ ಮೊದಲು ಪರಿಶೀಲಿಸಿಕೊಳ್ಳದಿದ್ದರೆ ಹೇಗೆ ಎಂದು ಪ್ರಶ್ನಿಸಿದ ಅವರು ಇಂಥಾ ಪ್ರಕರಣಗಳಿಂದ ಪತ್ರಕರ್ತರು ಮತ್ತು ಪತ್ರಿಕೋದ್ಯಮದ ವಿಶ್ವಾಸಾರ್ಹತೆ ಉಳಿಯಲು ಸಾಧ್ಯವಿಲ್ಲ. ಅಭಿವೃದ್ಧಿ ಪತ್ರಿಕೋದ್ಯಮ ಹಿಂದೆ ಸರಿದು ಊಹ-ಪೋಹ ಪತ್ರಿಕೋದ್ಯಮಕ್ಕೆ ಆದ್ಯತೆ ನೀಡಿದ್ದರಿಂದಲೇ ಪೂನಂ ಪಾಂಡೆ ಥರದ ಘಟನೆಗಳು ಘಟಿಸಿ ಬಿಡುತ್ತವೆ ಎಂದರು.

ಪ್ರತೀ ಪತ್ರಕರ್ತರ ಸಮ್ಮೇಳನಗಳಲ್ಲೂ ನಿರ್ಣಯಗಳ ತೆಗೆದುಕೊಳ್ಳಲಾಗುತ್ತದೆ. ಆ ನಿರ್ಣಯಗಳಲ್ಲಿ ಎಲ್ಲವೂ ಜಾರಿ ಆಗುವುದೇ ಇಲ್ಲ. 38 ನೇ ರಾಜ್ಯ ಸಮ್ಮೇಳನದಲ್ಲಿ ತೆಗೆದುಕೊಂಡ ನಿರ್ಣಯಗಳ ಈಡೇರಿಸುವ ದಿಕ್ಕಿನಲ್ಲಿ ಸರ್ಕಾರಎಲ್ಲಾ ನೆರವನ್ನು ಒದಗಿಸಲು ಸಹಕರಿಸುವುದಾಗಿ ಭರವಸೆ ನೀಡಿದರು.

ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಂಸದ ಡಾ.ಜಿ.ಎಂ.ಸಿದ್ದೇಶ್ವರ್, ಶಾಸಕರಾದ ಮಾಯಕೊಂಡದ ಕೆ.ಎಸ್.ಬಸವಂತಪ್ಪ, ಹರಿಹರ ಶಾಸಕ ಬಿ.ಪಿ.ಹರೀಶ್, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸೇರಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೇಲ್ಮನೆಗೆ ಪತ್ರಕರ್ತರ ಕರೆತರಲು ಎಂಎಲ್‌ಸಿ ಆಫರ್‌!
ಬಂಗಾಳಕ್ಕೆ ದೀದಿ, ತಮಿಳ್ನಾಡಿಗೆ ಅಣ್ಣಾ, ಅಸ್ಸಾಂಗೆ ಮಾಮಾ, ಕೇರಳಕ್ಕೆ ದಾದಾ!