ಪತ್ರಕರ್ತರೇ ಸತ್ಯದ ಕಡೆಗೆ ಬೆಳಕು ಚೆಲ್ಲಿ: ಶಾಸಕ ಪಿ.ಎಂ.ನರೇಂದ್ರಸ್ವಾಮಿ

KannadaprabhaNewsNetwork |  
Published : Jul 27, 2025, 12:00 AM IST
26ಕೆಎಂಎನ್ ಡಿ25 | Kannada Prabha

ಸಾರಾಂಶ

ಪ್ರಸ್ತುತ ಸುದ್ದಿಗಳಲ್ಲಿ ಸತ್ಯ-ಸುಳ್ಳುಗಳ ಬಗ್ಗೆ ಪರಮರ್ಶೆ ಮಾಡಿಕೊಳ್ಳುವ ಅನಿವಾರ್ಯತೆ ಇದೆ. ಸಂವಿಧಾನದ ನಾಲ್ಕನೇ ಅಂಗವಾಗಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರು ಸತ್ಯ ಸಂಶೋಧನೆ ಕಡೆಗೆ ಮುಖ ಮಾಡಬೇಕು. ಪತ್ರಕರ್ತರು ವಸ್ತು ನಿಷ್ಠೆ ಜೊತೆಗೆ ಶೈಕ್ಷಣಿಕ, ಸಾಮಾಜಿಕ ಹಾಗೂ ವಿಷಯಧಾರಿತವಾಗಿ ತನಿಖಾ ವರದಿಗಳ ಬಗ್ಗೆ ಗಮನ ನೀಡಬೇಕು.

ಕನ್ನಡಪ್ರಭ ವಾರ್ತೆ ಮಳವಳ್ಳಿ

ತಂತ್ರಜ್ಞಾನ ಯುಗದಲ್ಲಿ ಪತ್ರಕರ್ತರು ಸತ್ಯದ ಕಡೆಗೆ ಬೆಳಕು ಚೆಲ್ಲುವ ಸುದ್ದಿಗಳ ಕಡೆಗೆ ಗಮನ ಹರಿಸಬೇಕು ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.

ಪಟ್ಟಣದ ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದಿಂದ ನಡೆದ ಪತ್ರಿಕಾ ದಿನಾಚರಣೆ ಉದ್ಘಾಟಿಸಿ ಮಾತನಾಡಿ, ಪ್ರಸ್ತುತ ಸುದ್ದಿಗಳಲ್ಲಿ ಸತ್ಯ-ಸುಳ್ಳುಗಳ ಬಗ್ಗೆ ಪರಮರ್ಶೆ ಮಾಡಿಕೊಳ್ಳುವ ಅನಿವಾರ್ಯತೆ ಇದೆ. ಸಂವಿಧಾನದ ನಾಲ್ಕನೇ ಅಂಗವಾಗಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರು ಸತ್ಯ ಸಂಶೋಧನೆ ಕಡೆಗೆ ಮುಖ ಮಾಡಬೇಕೆಂದು ಹೇಳಿದರು.

ಪತ್ರಕರ್ತರು ವಸ್ತು ನಿಷ್ಠೆ ಜೊತೆಗೆ ಶೈಕ್ಷಣಿಕ, ಸಾಮಾಜಿಕ ಹಾಗೂ ವಿಷಯಧಾರಿತವಾಗಿ ತನಿಖಾ ವರದಿಗಳ ಬಗ್ಗೆ ಗಮನ ನೀಡಬೇಕು. ಸಮಾಜದ ಒಳಿತಿಗಾಗಿ ದುಡಿಯುವ ಮಾಧ್ಯಮ ಸಿಬ್ಬಂದಿ ಆರೋಗ್ಯದ ಕಡೆಗೆ ಗಮನ ಹರಿಸಬೇಕು ಎಂದರು.

ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯದರ್ಶಿ ಮತ್ತಿಕೆರೆ ಜಯರಾಮ್ ಮಾತನಾಡಿ, ಪತ್ರಕರ್ತರ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ರಾಜ್ಯ ಸಂಘ ನಿರಂತರವಾಗಿ ಶ್ರಮಿಸುತ್ತಿದೆ. ಸರ್ಕಾರಗಳು ಕೂಡ ಸಂಘದ ಮನವಿಗೆ ಸ್ಪಂದಿಸಿ ಹಲವು ಕೊಡುಗೆಗಳನ್ನು ನೀಡಿದೆ ಎಂದರು.

ರಾಜ್ಯದಲ್ಲಿಯೇ ತಾಲೂಕು ಸಂಘದಲ್ಲಿ ನಿವೇಶನ ಪಡೆದಿರುವುದು ಬೆರಳೆಣಿಕೆಯನಷ್ಟು ಮಾತ್ರ. ಅದರಲ್ಲಿ ಮಳವಳ್ಳಿಯೂ ಸೇರಿರುವುದು ಖುಷಿಯ ವಿಚಾರ. ನಿವೇಶನದಲ್ಲಿದ್ದ ಸಮಸ್ಯೆಗಳನ್ನು ಬಗೆಹರಿಸಿ ಬದಲಿ ನಿವೇಶನ ನೀಡುವಲ್ಲಿ ಶಾಸಕರು ಶ್ರಮವಹಿಸಿದ್ದಾರೆ. ಅವರಿಗೆ ಸಂಘದಿಂದ ಕೃತಜ್ಞತೆ ಸಲ್ಲಿಸುತ್ತೇವೆ. ತಾಲೂಕು ಸಂಘದಲ್ಲಿ ಪತ್ರಕರ್ತರ ಕ್ಷೇಮಾ ನಿಧಿ ಸ್ಥಾಪಿಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದರು.

ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಪತ್ರಿಕಾ ವಿತರಕರನ್ನು ಅಭಿನಂದಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ತಾಲೂಕು ಅಧ್ಯಕ್ಷ ಸಿ.ಸಿದ್ದರಾಜು ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮಕ್ಕೂ ಮುನ್ನಾ ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಗಿಡಗಳನ್ನು ನೆಟ್ಟರು.

ವೇದಿಕೆಯಲ್ಲಿ ತಹಸೀಲ್ದಾರ್ ಲೊಕೇಶ್, ಮನ್ಮುಲ್‌ ನಿರ್ದೇಶಕ ಡಿ.ಕೃಷ್ಣೇಗೌಡ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯದರ್ಶಿ ಸೋಮಶೇಖರ್ ಕೆರೆಗೋಡು, ಮಂಡ್ಯ ಜಿಲ್ಲಾಧ್ಯಕ್ಷ ಕೆ.ಎನ್.ನವೀನ್‌ಕುಮಾರ್, ರಾಜ್ಯ ಸಮಿತಿ ಸದಸ್ಯ ಸಿ.ಎನ್ ಮಂಜುನಾಥ್, ರಾಷ್ಟ್ರೀಯ ಸಮಿತಿ ಸದಸ್ಯ ಜೆ.ಎಂ.ಬಾಲಕೃಷ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆನಂದ್, ಮಾಜಿ ಅಧ್ಯಕ್ಷರಾದ ಕೆ.ಸಿ.ಮಂಜುನಾಥ್, ಬಿ.ಪಿ.ಪ್ರಕಾಶ್, ಜಿಲ್ಲಾ ನಿರ್ದೇಶಕರಾದ ಉಮೇಶ್ ಮಾಳಿಗೆ, ತಾಲೂಕು ಕಾರ್ಯದರ್ಶಿ ಎ.ಬಿ.ಚೇತನ್ ಕುಮಾರ್, ಕೊಳ್ಳೇಗಾಲ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಎಚ್.ಚಿಕ್ಕಮಾಳಿಗೆ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಸಂಘಗಳ ಪದಾಧಿಕಾರಿಗಳು, ನಿರ್ದೇಶಕರು ಇದ್ದರು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ