ಪತ್ರಕರ್ತರು ಆರೋಗ್ಯದ ಕಡೆ ಗಮನಹರಿಸಿ

KannadaprabhaNewsNetwork |  
Published : Nov 07, 2026, 03:00 AM IST
ಬೆಳಗಾವಿ  | Kannada Prabha

ಸಾರಾಂಶ

ಪತ್ರಕರ್ತರು ಪ್ರತಿನಿತ್ಯ ಕಾರ್ಯದ ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇದರ ನಡುವೆಯೂ ತಮ್ಮ ಆರೋಗ್ಯದ ಕಡೆಗೆ ಗಮನಹರಿಸಬೇಕು ಎಂದು ಮೇಯರ್ ಪ್ರೀತಿ ಕಾಮಕರ್ ಹೇಳಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಪತ್ರಕರ್ತರು ಪ್ರತಿನಿತ್ಯ ಕಾರ್ಯದ ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇದರ ನಡುವೆಯೂ ತಮ್ಮ ಆರೋಗ್ಯದ ಕಡೆಗೆ ಗಮನಹರಿಸಬೇಕು ಎಂದು ಮೇಯರ್ ಪ್ರೀತಿ ಕಾಮಕರ್ ಹೇಳಿದರು.

ಬೆಳಗಾವಿ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮದ ಪತ್ರಕರ್ತರು ಹಾಗೂ ಅವರ ಕುಟುಂಬದ ಸದಸ್ಯರಿಗೆ ಪಾಲಿಕೆಯ ಕಲ್ಯಾಣ ನಿಧಿಯಡಿ ಒಂದು ವರ್ಷದ ಅವಧಿಗೆ ₹5 ಲಕ್ಷದ ಆರೋಗ್ಯ ವಿಮಾ ಸೌಲಭ್ಯ ಕಲ್ಪಿಸಲಾಗಿದೆ. ಸ್ಟಾರ್ ಗ್ರೂಪ್ ಹೆಲ್ತ್ ಇನ್ಶೂರೆನ್ಸ್ ಯೋಜನೆಯ ವಿಮಾ ಕಾರ್ಡ್‌ಗಳನ್ನು ವಿತರಿಸಿ ಅವರು ಮಾತನಾಡಿದರು.

ಉಪಮೇಯರ್ ಹನುಮಂತ ಕೊಂಗಾಲಿ, ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ, ಉತ್ತರ ಕ್ಷೇತ್ರದ ಶಾಸಕ ಆಸೀಫ್ ಸೇಠ್ ಹಾಗೂ ಪಾಲಿಕೆ ಆಯುಕ್ತ ಕಾರ್ತಿಕ್ ಎಂ. ಮಾತನಾಡಿ, ಪತ್ರಕರ್ತರು ಸದಾ ಆರೋಗ್ಯದಿಂದ ಇರಲಿ. ತುರ್ತು ಆರೋಗ್ಯ ಸಮಸ್ಯೆಗಳು ಎದುರಾದಾಗ ವಿಮಾ ಸೌಲಭ್ಯ ಬಳಕೆಯಾಗಲಿ. ಪಾಲಿಕೆ ಕಲ್ಪಿಸಿರುವ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಆಶಿಸಿದರು.

ಮುದ್ರಣ ಮಾಧ್ಯಮ ಪತ್ರಕರ್ತರ ಸಂಘದ ಅಧ್ಯಕ್ಷ ವಿಲಾಸ ಜೋಶಿ, ವಿದ್ಯುನ್ಮಾನ ಪತ್ರಕರ್ತರ ಸಂಘದ ಅಧ್ಯಕ್ಷ ಚಂದ್ರಕಾಂತ ಸುಗಂಧಿ ಹಾಗೂ ಹಿರಿಯ ಪತ್ರಕರ್ತ ಮೆಹಬೂಬ್ ಮಕಾನದಾರ ಅವರು ಪಾಲಿಕೆಯ ಕಾರ್ಯವನ್ನು ಶ್ಲಾಘಿಸಿ, ಹೂಗುಚ್ಛ ನೀಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಸಾಂಕೇತಿಕವಾಗಿ ಕೆಲ ಪತ್ರಕರ್ತರಿಗೆ ವಿಮಾ ಕಾರ್ಡ್‌ಗಳನ್ನು ವಿತರಿಸಲಾಯಿತು.

ಆಡಳಿತ ಪಕ್ಷದ ನಾಯಕ ಸಂತೋಷ ಪೇಡ್ನೇಕರ್, ವಿರೋಧ ಪಕ್ಷದ ನಾಯಕ ಸೊಹೈಲ್ ಸಂಗೊಳ್ಳಿ, ಸ್ಥಾಯಿ ಸಮಿತಿ ಅಧ್ಯಕ್ಷರು, ನಗರಸೇವಕರು, ಪತ್ರಕರ್ತರ ಸಂಘದ ಪ್ರತಿನಿಧಿಗಳು, ಪಾಲಿಕೆ ಪರಿಸರ ವಿಭಾಗದ ಅಭಿಯಂತರ ಹನುಮಂತ ಕಲಾದಗಿ, ವಿಮಾ ಕಂಪನಿಯ ಪ್ರತಿನಿಧಿ ಶ್ರೀಕಾಂತ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಬ್ಬಿಗೆ ಸ್ಥಳೀಯ ರಿಕವರಿ ಆಧಾರದಲ್ಲಿ ನ್ಯಾಯಯುತ ಬೆಲೆ ನೀಡಲು ಆಗ್ರಹ
ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ವಹಿಸಿದ್ದರೆ ಸೂಕ್ತ ಕ್ರಮ