ಕನ್ನಡಪ್ರಭ ವಾರ್ತೆ, ಹನೂರು
ಪಟ್ಟಣದ ಕಮ್ಮವಾರು ಸಮುದಾಯ ಭವನದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ 2025-28ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಹಾಗೂ ದಿನದರ್ಶಿಕೆ ಬಿಡುಗಡೆ ಕಾರ್ಯಕ್ರಮದ ಉದ್ಘಾಟಿಸಿ ಮಾತನಾಡಿದರು.
ಪತ್ರಕರ್ತರ ಕೆಲಸ ಕಷ್ಟಕರವಾಗಿದ್ದು, ಅಂತಹ ಪರಿಸ್ಥಿತಿಯಲ್ಲಿ ಪತ್ರಕರ್ತರು ಸುದ್ದಿಗಳನ್ನು ಜನತೆಗೆ ತಲುಪಿಸುತ್ತಿದ್ದಾರೆ. ಸರ್ಕಾರ ಉಚಿತ ಬಸ್ ಪಾಸ್ ನೀಡಿದ್ದರೂ ಕೂಡ ಕೆಲವು ಕಠಿಣ ನಿಯಮಗಳಿಂದ ಪಡೆಯಲು ಸಾಧ್ಯವಾಗದೆ ಇರುವುದರಿಂದ ಸರ್ಕಾರ ನಿಯಮ ಸಡಿಲೀಕರಣಗೊಳಿಸಬೇಕು. ಸಮುದಾಯ ಭವನ ನಿರ್ಮಾಣಕ್ಕೆ ಶಾಸಕರ ಅನುದಾನದ ಜೊತೆಗೆ ವೈಯಕ್ತಿಕವಾಗಿಯೂ ಸಹಕಾರ ನೀಡಲಿದ್ದೇನೆ. ನಿವೇಶನ ಒದಗಿಸುವ ಸಂಬಂಧ ಜಿಲ್ಲಾಧಿಕಾರಿಗಳೊಡನೆ ಗಮನಕ್ಕೆ ತಂದು ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದರು.ಮಾಜಿ ಶಾಸಕ ಆರ್.ನರೇಂದ್ರ ಮಾತನಾಡಿ, ಪತ್ರಕರ್ತರ ಸಂಘ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಿರುವುದು ಸಂತಸದ ವಿಷಯ, ವಿವಿಧ ಕ್ಷೇತ್ರಗಳಲ್ಲಿನ ಸಂಘ ಸಂಸ್ಥೆಗಳು ಚುನಾವಣೆಗಳಿಂದ ಕಲುಷಿತಗೊಂಡಿವೆ. ಅದೇ ಮಾದರಿಯಲ್ಲಿ ಪತ್ರಕರ್ತರ ಸಂಘ ಸಾಗುವ ಬದಲು ಶುದ್ಧಿಕರಣಗೊಳ್ಳಬೇಕು. 170 ಕಿ.ಮಿ.ವಿಸ್ತೀರ್ಣ ಹೊಂದಿರುವ ಕ್ಷೇತ್ರದಲ್ಲಿ ಟವರ್ ಸಮಸ್ಯೆ, ರಸ್ತೆ ಸಮಸ್ಯೆ, ಕಾಡು ಪ್ರಾಣಿಗಳ ಹಾವಳಿ ಮುಂತಾದ ಸಮಸ್ಯೆಗಳ ನಡುವೆ ಹನೂರು ಪತ್ರಕರ್ತರು ವಸ್ತುನಿಷ್ಠ ವರದಿಯನ್ನು ಮಾಡುತ್ತಿದ್ದಾರೆ ಎಂದರು.
ರಾಜ್ಯದ ಇತಿಹಾಸದಲ್ಲಿಯೇ ಪತ್ರಕರ್ತರೊರ್ವರು ವಿಧಾನ ಪರಿಷತ್ ಸದಸ್ಯರಾಗಿರಲಿಲ್ಲ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರಕರ್ತ ಕೆ. ಶಿವಕುಮಾರ್ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ನೇಮಕ ಮಾಡಿದ್ದಾರೆ. ಅವರು ಸಹ ಪತ್ರಕರ್ತರ ಧ್ವನಿಯಾಗಿ ಪತ್ರಕರ್ತರ ಸಮಸ್ಯೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ತಮ್ಮ ಸೇವೆ ಸಲ್ಲಿಸಲಿ ಎಂದರು.ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹೊರ ತಂದಿರುವ 2026ರ ದಿನದರ್ಶಿಕೆಯನ್ನು ಬಿಡುಗಡೆ ಮಾಡಲಾಯಿತು.
ನೂತನ ಪದಾಧಿಕಾರಿಗಳಿಗೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಕ್ಕೂರ್ ಪ್ರಸಾದ್ ಪ್ರಮಾಣ ವಚನ ಬೋಧಿಸಿದರು.ಜಿಲ್ಲಾ ಕಾರ್ಯದರ್ಶಿ ಪತ್ರಕರ್ತರ ಸಂಘದ ಅಧ್ಯಕ್ಷ ಸಿದ್ದಲಿಂಗ ಸ್ವಾಮಿ, ಪ್ರಧಾನ ಕಾರ್ಯದರ್ಶಿ ಲಕ್ಕೂರ್ ಪ್ರಸಾದ್, ರಾಜ್ಯಕಾರಣಿ ಸಮಿತಿ ಸದಸ್ಯ ಮಹೇಂದ್ರ, ನಿಕಟ ಪೂರ್ವ ಅಧ್ಯಕ್ಷ ದೇವರಾಜು ಕಪ್ಪಸೋಗೆ, ಹನೂರು ತಾಲೂಕು ನಿಕಟ ಪೂರ್ವ ಅಧ್ಯಕ್ಷ ಮಹಾದೇಶ್, ನಿಕಟ ಪೂರ್ವ ಪ್ರಧಾನ ಕಾರ್ಯದರ್ಶಿ ಬಸವರಾಜು, ಹಾಲಿ ಅಧ್ಯಕ್ಷ ದೇವರಾಜ ನಾಯ್ಡು ಪ್ರಧಾನ ಕಾರ್ಯದರ್ಶಿ ಪ್ರಭುಸ್ವಾಮಿ, ಬಿಜೆಪಿ ಮುಖಂಡ ನಿಶಾಂತ್, ರೈತ ಸಂಘದ ಮುಖಂಡರುಗಳಾದ ಹೊನ್ನೂರು ಪ್ರಕಾಶ್, ಗೌಡೇಗೌಡ, ಅಮ್ಜದ್ ಖಾನ್, ಶೈಲೇoದ್ರ, ಪಟ್ಟಣ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಬಸವರಾಜು, ಹರೀಶ್, ಇದ್ದರು.