ಪತ್ರಕರ್ತರ ಸಮಾಜಮುಖಿ ಕಾರ್ಯ ಶ್ಲಾಘನೀಯ: ಹೂವಿನಶಿಗ್ಲಿ ವಿರಕ್ತಮಠದ ಚನ್ನವೀರ ಮಹಾಸ್ವಾಮಿಗಳು

KannadaprabhaNewsNetwork |  
Published : Jul 26, 2026, 02:30 AM IST
ಪೊಟೋ- ಲಕ್ಷ್ಮೇಶ್ವರ  ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಹೂವಿನಶಿಗ್ಲಿ ಶ್ರೀಗಳ ಸಾನಿಧ್ಯದಲ್ಲಿ ಪಿಎಸ್‌ಐ ನಾಗರಾಜ ಗಡದ ಉದ್ಘಾಟಿಸಿದರು.  | Kannada Prabha

ಸಾರಾಂಶ

ಮಹಂತಿನ ಮಠದ ರುದ್ರಭೂಮಿಯಲ್ಲಿ ಬೆಳೆದಿದ್ದ ಅಪಾರ ಗಿಡಗಂಟೆಗಳನ್ನು ತೆರವುಗೊಳಿಸಿ, ಸ್ಮಶಾನ ಸ್ವಚ್ಚಗೊಳಿಸಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಈ ಬಾರಿಯ ಪತ್ರಿಕಾ ದಿನಾಚರಣೆಯನ್ನು ವಿಶಿಷ್ಟವಾಗಿ ಆಚರಿಸಲಾಯಿತು.

ಲಕ್ಷ್ಮೇಶ್ವರ: ಪಟ್ಟಣದ ಮಹಂತಿನ ಮಠದ ರುದ್ರಭೂಮಿಯಲ್ಲಿ ಬೆಳೆದಿದ್ದ ಅಪಾರ ಗಿಡಗಂಟೆಗಳನ್ನು ತೆರವುಗೊಳಿಸಿ, ಸ್ಮಶಾನ ಸ್ವಚ್ಚಗೊಳಿಸಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಈ ಬಾರಿಯ ಪತ್ರಿಕಾ ದಿನಾಚರಣೆಯನ್ನು ವಿಶಿಷ್ಟವಾಗಿ ಆಚರಿಸಲಾಯಿತು.

ನಂತರ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿದ್ದ ಹೂವಿನಶಿಗ್ಲಿ ವಿರಕ್ತಮಠದ ಚನ್ನವೀರ ಮಹಾಸ್ವಾಮಿಗಳು ಆಶೀರ್ವಚನ ನೀಡಿ, ಉತ್ತಮ ಬರವಣಿಗೆಯ ಮೂಲಕ ಸಮಾಜಕ್ಕೆ ಅನೇಕ ಒಳ್ಳೆಯ ಕಾರ್ಯಗಳನ್ನು ಮಾಡಿರುವ ಅನೇಕ ಮಾಧ್ಯಮಗಳನ್ನು ನೋಡಬಹುದಾಗಿದ್ದು, ಇಂದು ಸಮಾಜದಲ್ಲಿ ಪತ್ರಕರ್ತರು ತಮ್ಮ ವೈಯಕ್ತಿಕ ಬದುಕನ್ನು ಬದಿಗಿಟ್ಟು ಸಾಮಾಜಿಕ ಕಳಕಳಿ ಮತ್ತು ಚಿಂತನೆಗಾಗಿ ತಮ್ಮನ್ನು ತೊಡಗಿಸಿಕೊಳ್ಳುತ್ತಿದ್ದಾರೆ. ಲಕ್ಷ್ಮೇಶ್ವರ ಪತ್ರಕರ್ತರ ಸಂಘದವರು ಪತ್ರಿಕಾ ದಿನಾಚರಣೆ ಅಂಗವಾಗಿ ಮನುಷ್ಯನ ಕೊನೆಯ ನಿಲ್ದಾಣವಾಗಿರುವ ಸ್ಮಶಾನದಲ್ಲಿ ಬೆಳೆದು ನಿಂತಿದ್ದ ಗಿಡಗಂಟೆಗಳು, ಕಸಕಡ್ಡಿಗಳನ್ನು ತೆಗೆದುಹಾಕಿ ಅನೇಕ ವರ್ಷಗಳ ಬೇಡಿಕೆಗೆ ಸ್ಪಂದನೆ ನೀಡುವ ಮೂಲಕ ಪತ್ರಿಕಾ ದಿನಾಚರಣೆಯನ್ನು ಮಾದರಿಯಾಗಿ ಆಚರಿಸುವ ಸ್ತುತ್ಯಾರ್ಹ ಕಾರ್ಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮ ಉದ್ಘಾಟಿಸಿದ ಪಿಎಸ್‌ಐ ನಾಗರಾಜ ಗಡದ ಮಾತನಾಡಿ, ಸಮಾಜದಲ್ಲಿ ಮೌಲ್ಯನಿಷ್ಠ, ಸ್ವಾಸ್ಥ್ಯ, ಶಾಂತಿ, ಸುವ್ಯವಸ್ಥೆ ಕಾಪಾಡುವ ಮತ್ತು ಪ್ರಸ್ತುತ ಸ್ಫರ್ಧಾತ್ಮಕ ಯುಗಕ್ಕೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕವಾಗುವ ಪತ್ರಿಕೆಗಳ ಸಂಖ್ಯೆ ಹೆಚ್ಚಬೇಕು, ಪಾಲಕರು ಮಕ್ಕಳಲ್ಲಿ ಪತ್ರಿಕೆ ಓದುವ ಹವ್ಯಾಸ ಬೆಳೆಸಬೇಕು. ವೃತ್ತಿಗೆ ಯಾವುದೇ ಭದ್ರತೆಗಳಲಿಲ್ಲದಿದ್ದರೂ ತಮ್ಮ ವೈಯಕ್ತಿಕ ಬದುಕನ್ನು ಬದಿಗಿಟ್ಟು ಸಾಮಾಜಿಕ ಕಳಕಳಿ ಮತ್ತು ಚಿಂತನೆಗಾಗಿ ತಮ್ಮನ್ನು ಪತ್ರಕರ್ತರು ತೊಡಗಿಸಿಕೊಳ್ಳುತ್ತಿದ್ದಾರೆ, ಅದರಲ್ಲೂ ಲಕ್ಷ್ಮೇಶ್ವರ ತಾಲೂಕು ಪತ್ರಕರ್ತರು ಅನೇಕ ಸಮಾಜಮುಖಿ ಕಾರ್ಯಕ್ರಮ ಮಾಡುವ ಮೂಲಕ ಸಮಾಜಕ್ಕೆ ಹೊಸ ಸಂದೇಶವನ್ನು ನೀಡುತ್ತಿದ್ದಾರೆ ಎಂದರು.

ಗ.ಜಿ. ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಆನಂದಯ್ಯ ವಿರಕ್ತಮಠ ಮಾತನಾಡಿ, ಸ್ಮಶಾನವೆಂದರೆ ಅದು ಶಿವನ ಮನೆ ಇದ್ದಂತೆ. ಅಂತಹ ಮನೆಯನ್ನು ಸ್ವಚ್ಛಗೊಳಿಸುವ ವಿಶೇಷ ಕಾರ್ಯ ಮಾಡಿದ್ದು ರಾಜ್ಯದಲ್ಲಿಯೇ ಮಾದರಿ ಎನ್ನಬಹುದಾಗಿದೆ ಎಂದರು.

ತಾಲೂಕು ಅಧ್ಯಕ್ಷ ಅಶೋಕ ಸೊರಟೂರ ಅಧ್ಯಕ್ಷತೆ ವಹಿಸಿದ್ದರು. ಗದಗ ಜಿಲ್ಲಾಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಶರಣು ದೊಡ್ಡೂರ, ಕಾರ್ಯಕಾರಿ ಸಮಿತಿ ಸದಸ್ಯ ಸುರೇಶ ಕಡ್ಲಿಮಟ್ಟಿ, ಗುರುರಾಜ ಪಾಟೀಲ ಕುಲಕರ್ಣಿ, ಮುಖ್ಯೋಪಾಧ್ಯಾಯ ಬಸವರಾಜ ಪಟ್ಟೇದ, ಮಲ್ಲಿಕಾರ್ಜುನ ಕಳಸಾಪೂರ ಮುಂತಾದವರು ಉಪಸ್ಥಿತರಿದ್ದರು.

ಪತ್ರಕರ್ತ ಶಿವಲಿಂಗಯ್ಯ ಹೊತಗಿಮಠ, ನಾಗರಾಜ ಹಣಗಿ, ರಮೇಶ ನಾಡಗೇರ, ಕರಿಯಪ್ಪ ಶಿರಹಟ್ಟಿ, ಮಂಜುನಾಥ ರಾಥೋಡ, ಸುರೇಶ ಲಮಾಣಿ, ತಾಲೂಕು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಪರಮೇಶ ಲಮಾಣಿ ನಿರೂಪಿಸಿದರು.

ದಿಗಂಬರ ಪೂಜಾರ ಸ್ವಾಗತಿಸಿದರು, ಸೋಮಣ್ಣ ಯತ್ನಳ್ಳಿ ವಂದಿಸಿದರು. ಇದೇ ಸಂದರ್ಭದಲ್ಲಿ ಅನೇಕ ಗಣ್ಯರನ್ನು ಸನ್ಮಾನಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಲಂಕಾರಿ ಸಸ್ಯ ಬೆಳೆದು ಸ್ವಾವಲಂಬಿಗಳಾಗಿ: ಸುಮಾ ನಾಗರಾಜ ಹಾಸ್ಯಗಾರ
ಪೌರ ಕಾರ್ಮಿಕರು ನಾಡಿನ ದೊಡ್ಡ ಶಕ್ತಿ: ಆರ್.ವಿ. ದೇಶಪಾಂಡೆ