ಸಾಮಾಜಿಕ ಬೆಳವಣಿಗೆಯತ್ತ ಬೆಳಕು ಚೆಲ್ಲುವ ಪತ್ರಕರ್ತರು: ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ

KannadaprabhaNewsNetwork |  
Published : Nov 17, 2024, 01:17 AM IST
16ಕೆಪಿಎಲ್10:ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ  ಮೀಡಿಯಾ ಕ್ಲಬ್ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ನಿಮಿತ್ಯ ಜರುಗಿದ ಸಬ್ ಎಡಿಟರ್ ಸುಬ್ಬರಾಯ ಸತ್ತ ಮೇಲೆ ಎಂಬ ನಾಟಕ ಪ್ರದರ್ಶನ ಕಾರ್ಯಕ್ರಮದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅಲ್ಲಮಪ್ರಭು ಬೆಟ್ಟದೂರು, ಎ.ಜಿ.ಕಾರಟಗಿ, ರುಕ್ಮಿಣಿ ಬಾಯಿ ಅವರನ್ನು ಸನ್ಮಾನಿಸಲಾಯಿತು.  | Kannada Prabha

ಸಾರಾಂಶ

ಜಿಲ್ಲೆಯ ಪತ್ರಕರ್ತರು ಚುರುಕು ಬುದ್ಧಿವಂತರು. ಸದಾ ಜಿಲ್ಲೆಯ, ರಾಜ್ಯದ ರಾಜಕೀಯ, ಸಾಮಾಜಿಕ ಬೆಳವಣಿಗೆ ಅರಿಯುತ್ತ ರಾಜಕಾರಣಿಗಳನ್ನು ಪ್ರಶ್ನಿಸಿ ಬೆಳಕು ಚೆಲ್ಲುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ರಾಷ್ಟ್ರೀಯ ಪತ್ರಿಕಾ ದಿನಾಚರಣೆ ನಿಮಿತ್ಯ ಹಮ್ಮಿಕೊಂಡಿದ್ದ ನಾಟಕ ಪ್ರದರ್ಶನ ಉದ್ಘಾಟನೆ

ಕನ್ನಡಪ್ರಭ ವಾರ್ತೆ ಕೊಪ್ಪಳ

ಜಿಲ್ಲೆಯ ಪತ್ರಕರ್ತರು ಚುರುಕು ಬುದ್ಧಿವಂತರು. ಸದಾ ಜಿಲ್ಲೆಯ, ರಾಜ್ಯದ ರಾಜಕೀಯ, ಸಾಮಾಜಿಕ ಬೆಳವಣಿಗೆ ಅರಿಯುತ್ತ ರಾಜಕಾರಣಿಗಳನ್ನು ಪ್ರಶ್ನಿಸಿ ಬೆಳಕು ಚೆಲ್ಲುವ ಕಾರ್ಯದಲ್ಲಿ ನಿರತರಾಗಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು.

ನಗರದ ಸಾಹಿತ್ಯ ಭವನದಲ್ಲಿ ಮೀಡಿಯಾ ಕ್ಲಬ್ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ನಿಮಿತ್ತ ಮೀಡಿಯಾ ಕ್ಲಬ್ ಹಮ್ಮಿಕೊಂಡಿದ್ದ ಸಬ್ ಎಡಿಟರ್ ಸುಬ್ಬರಾಯ ಸತ್ತ ಮೇಲೆ ಎಂಬ ನಾಟಕ ಪ್ರದರ್ಶನ ಉದ್ಘಾಟಿಸಿ ಮಾತನಾಡಿದರು.ಮೂರು ಬಾರಿ ಮಂತ್ರಿಯಾಗಿರುವ ನನಗೆ ಇಲ್ಲಿನ ಪತ್ರಕರ್ತರ ಬೌದ್ಧಿಕತೆ ಬಗ್ಗೆ ಹೆಮ್ಮೆ ಇದೆ. ಜಿಲ್ಲೆಯ ಪತ್ರಕರ್ತರ ಕುರಿತು ನಾನು ಬೇರೆ ಜಿಲ್ಲೆಯಲ್ಲಿ ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ. ಪತ್ರಕರ್ತರು ಸದಾ ಸಮಾಜದ ಬಗ್ಗೆ ಚೆಲ್ಲುವ ಕಾರ್ಯ ಮಾಡುತ್ತಾರೆ ಎಂದರು.

ಸಂಸದ ರಾಜಶೇಖರ ಹಿಟ್ನಾಳ ಮಾತನಾಡಿ, ಮಾನವ ಬದುಕಿಗೆ ಮನರಂಜನೆ ಬಹುಮುಖ್ಯ. ಪತ್ರಕರ್ತರು ತಮ್ಮ ವೃತ್ತಿಯ ಕಷ್ಟ, ನೋವುಗಳ ಕುರಿತ ನಾಟಕ ಪ್ರದರ್ಶನ ಮಾಡುತ್ತಿರುವುದು ಹೆಮ್ಮೆ ಸಂಗತಿ ಎಂದರು.ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಮರೇಗೌಡ ಬಯ್ಯಾಪುರ ಮಾತನಾಡಿ, ನಿಜ ಜೀವನದ ಘಟನೆಗಳೆ ಪಾತ್ರಗಳ ರೂಪದಲ್ಲಿ ನಾಟಕದಲ್ಲಿ ತೋರಿಸಲಾಗುತ್ತದೆ. ನಮ್ಮ ಜೀವನವೇ ನಾಟಕ. ನಾವು ಕೇವಲ ಪಾತ್ರಧಾರಿಗಳು. ನಮ್ಮ ಜವಾಬ್ದಾರಿ ಸರಿಯಾಗಿ ನಿಭಾಯಿಸಿದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ನವೀನಕುಮಾರ ಗುಳಗಣ್ಣವರ ಮಾತನಾಡಿ, ಕಲೆ, ಸಂಸ್ಕೃತಿ ಅವಿಭಾಜ್ಯ ಅಂಗವಾದ ನಾಟಕ ಪ್ರದರ್ಶನ ಮಾಡುತ್ತಿರುವ ಪತ್ರಕರ್ತರ ಪ್ರಯತ್ನಕ್ಕೆ ಪ್ರೋತ್ಸಾಹ ಸಿಗಬೇಕು. ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿರುವ ನಾಟಕ, ನಗರದಲ್ಲೂ ಪ್ರದರ್ಶನ ಆಗುತ್ತಿರುವುದು ಶ್ಲಾಘನೀಯ ಎಂದರು.

ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ವೀರೇಶ ಮಹಾಂತಯ್ಯನಮಠ , ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ. ಬಸವರಾಜ ಕ್ಯಾವಟರ್ , ವಾರ್ತಾ ಇಲಾಖೆ ಜಂಟಿ ನಿರ್ದೆಶಕರ ಮಂಜುನಾಥ ಡೊಳ್ಳಿನ ಮಾತನಾಡಿದರು.

ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀನಿವಾಸ ಗುಪ್ತಾ ,

ಹೆಚ್ಚುವರಿ ಎಸ್.ಪಿ. ಹೇಮಂತಕುಮಾರ, ಮೀಡಿಯಾ ಕ್ಲಬ್ ಅಧ್ಯಕ್ಷ ರವೀಂದ್ರ ವಿ.ಕೆ., ವಕೀಲರ ಸಂಘದ ಜಿಲ್ಲಾಧ್ಯಕ್ಷ ಎ.ವಿ. ಕಣವಿ, ಹವ್ಯಾಸಿ ಪತ್ರಕರ್ತ ಆನಂದತೀರ್ಥ ಪ್ಯಾಟಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅಲ್ಲಮಪ್ರಭು ಬೆಟ್ಟದೂರು, ಎ.ಜಿ. ಕಾರಟಗಿ, ರುಕ್ಮಿಣಿ ಬಾಯಿ, ಬಿಜೆಪಿ ಮುಖಂಡ ತಿಪ್ಪೇರುದ್ರಸ್ವಾಮಿ, ವಿ.ಎಂ. ಭೂಸನೂರಮಠ, ಕೃಷ್ಣಾ ಇಟ್ಟಂಗಿ, ಗ್ಯಾರಂಡಿ ಯೋಜನೆ ಸಮಿತಿ ಜಿಲ್ಲಾಧ್ಯಕ್ಷ ರಡ್ಡಿ ಶ್ರೀನಿವಾಸ, ತಹಸೀಲ್ದಾರ ವಿಠಲ ಚೌಗಲಾ, ಭರಮಪ್ಪ ನಗರ, ವಾರ್ತಾಧಿಕಾರಿ ಡಾ. ಜಿ. ಸುರೇಶ ಇತರರಿದ್ದರು. ಕೊಪ್ಪಳ ಮೀಡಿಯಾ ಕ್ಲಬ್ ಅಧ್ಯಕ್ಷ ರವೀಂದ್ರ ವಿ.ಕೆ ಪ್ರಾಸ್ತಾವಿಕ ಮಾತನಾಡಿದರು. ಶ್ರೀಕಾಂತ ಅಕ್ಕಿ ಸ್ವಾಗತಿಸಿದರು. ದತ್ತು ಕಮ್ಮಾರ ನಿರೂಪಿಸಿ, ಸಂತೋಷ ದೇಶಪಾಂಡೆ ವಂದಿಸಿದರು.

PREV

Recommended Stories

ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ