ಸ್ಕಾಲರ್ಸ್ ಶಾಲೆಯಲ್ಲಿ ಸಂಭ್ರಮದ ಗಣೇಶ ವಿಸರ್ಜನೆ

KannadaprabhaNewsNetwork |  
Published : Sep 18, 2026, 01:45 AM IST
 ಶ್ರೀ ಗಣೇಶ ಮೂರ್ತಿಯ ವಿಸರ್ಜನಾ  | Kannada Prabha

ಸಾರಾಂಶ

ಶಾಲೆಯ ಆಡಳಿತಾಧಿಕಾರಿ ಡಾ. ಎಚ್.ಎನ್. ಚಂದ್ರಶೇಖರ್‌ ಹಾಗೂ ಕಾರ್ಯದರ್ಶಿ ಮಮತಾ ಚಂದ್ರಶೇಖರ್‌ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಗಣೇಶನಿಗೆ ವಿಶೇಷ ಪೂಜೆ ಹಾಗೂ ಆರತಿ ಸಲ್ಲಿಸಿದರು. ಬಳಿಕ ಗಣೇಶ ಮೂರ್ತಿಯನ್ನು ಮೆರವಣಿಗೆಯ ಮೂಲಕ ವಿಸರ್ಜನಾ ಸ್ಥಳಕ್ಕೆ ಕೊಂಡೊಯ್ಯಲಾಯಿತು. ಮೆರವಣಿಗೆಯಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು, ಸಂಗೀತದ ತಾಳಕ್ಕೆ ಹೆಜ್ಜೆ ಹಾಕುತ್ತಾ ಸಂಭ್ರಮಿಸಿದರು. ಮಕ್ಕಳ ಸಂತಸವನ್ನು ಹೆಚ್ಚಿಸುವಂತೆ ಸಿಹಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಪರಿಸರ ಸಂರಕ್ಷಣೆ, ಸ್ವಚ್ಛತೆ ಹಾಗೂ ಪರಿಸರಸ್ನೇಹಿ ಗಣೇಶೋತ್ಸವದ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು.

ಕನ್ನಡಪ್ರಭ ವಾರ್ತೆ ಹಾಸನ

ನಗರದ ಸ್ಕಾಲರ್ಸ್‌ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ಗಣೇಶ ಚತುರ್ಥಿ ಅಂಗವಾಗಿ ಪ್ರತಿಷ್ಠಾಪಿಸಲಾಗಿದ್ದ ಶ್ರೀ ಗಣೇಶ ಮೂರ್ತಿಯ ವಿಸರ್ಜನಾ ಕಾರ್ಯಕ್ರಮವನ್ನು ಭಕ್ತಿ, ಶ್ರದ್ಧೆ ಹಾಗೂ ಸಂಭ್ರಮದಿಂದ ನೆರವೇರಿಸಲಾಯಿತು. ಶಾಲೆಯ ಆಡಳಿತಾಧಿಕಾರಿ ಡಾ. ಎಚ್.ಎನ್. ಚಂದ್ರಶೇಖರ್‌ ಹಾಗೂ ಕಾರ್ಯದರ್ಶಿ ಮಮತಾ ಚಂದ್ರಶೇಖರ್‌ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಗಣೇಶನಿಗೆ ವಿಶೇಷ ಪೂಜೆ ಹಾಗೂ ಆರತಿ ಸಲ್ಲಿಸಿದರು. ಬಳಿಕ ಗಣೇಶ ಮೂರ್ತಿಯನ್ನು ಮೆರವಣಿಗೆಯ ಮೂಲಕ ವಿಸರ್ಜನಾ ಸ್ಥಳಕ್ಕೆ ಕೊಂಡೊಯ್ಯಲಾಯಿತು. ಮೆರವಣಿಗೆಯಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು, ಸಂಗೀತದ ತಾಳಕ್ಕೆ ಹೆಜ್ಜೆ ಹಾಕುತ್ತಾ ಸಂಭ್ರಮಿಸಿದರು. ಮಕ್ಕಳ ಸಂತಸವನ್ನು ಹೆಚ್ಚಿಸುವಂತೆ ಸಿಹಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಪರಿಸರ ಸಂರಕ್ಷಣೆ, ಸ್ವಚ್ಛತೆ ಹಾಗೂ ಪರಿಸರಸ್ನೇಹಿ ಗಣೇಶೋತ್ಸವದ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು.ಶಿಕ್ಷಕರು ಹಾಗೂ ಸಿಬ್ಬಂದಿಯ ಸಹಕಾರದಿಂದ ಕಾರ್ಯಕ್ರಮವು ಶಿಸ್ತುಬದ್ಧವಾಗಿ ಹಾಗೂ ಯಶಸ್ವಿಯಾಗಿ ನಡೆಯಿತು. ಭಕ್ತಿ, ಸಂಭ್ರಮ, ಸೌಹಾರ್ದತೆ ಮತ್ತು ಪರಿಸರ ಕಾಳಜಿಯೊಂದಿಗೆ ನಡೆದ ಗಣೇಶ ವಿಸರ್ಜನಾ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಸಂತಸದ ನೆನಪು ಮೂಡಿಸಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಹಿಳೆಯರು ಉದ್ಯೋಗ ನೀಡುವ ಶಕ್ತಿಯಾಗಲಿ: ಜೋಶಿ
40 ವರ್ಷ, 3 ಜ್ಯೋತಿರ್ಲಿಂಗ, 10 ಸಾವಿರ ಭಕ್ತರು!