ಶಿರಾದಲ್ಲಿ ಸಂಭ್ರಮದ ಈದ್ ಮಿಲಾದ್ ಮೆರವಣಿಗೆ

KannadaprabhaNewsNetwork |  
Published : Aug 27, 2026, 01:15 AM IST
೨೬ಶಿರಾ೧: ಶಿರಾ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸುವ ಮೂಲಕ ಜಷ್ನೇ ಈದ್ ಮಿಲಾದ್ ಉನ್ನಬಿ ಹಬ್ಬವನ್ನು ಬುಧವಾರ ಅದ್ಧೂರಿಯಾಗಿ ಆಚರಿಸಲಾಯಿತು. ನಗರದ ಜಾಮಿಯಾ ಮಸೀದಿಯಿಂದ ಆರಂಭವಾದ ಮೆರವಣಿಗೆಯಲ್ಲಿ ಸಾವಿರಾರು ಮುಸ್ಲಿಂ ಬಾಂಧವರು ಭಾಗವಹಿಸಿದ್ದರು. | Kannada Prabha

ಸಾರಾಂಶ

ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸುವ ಮೂಲಕ ಈದ್ ಮಿಲಾದ್ ಹಬ್ಬವನ್ನು ಬುಧವಾರ ಅದ್ಧೂರಿಯಾಗಿ ಆಚರಿಸಲಾಯಿತು. ನಗರದ ಜಾಮಿಯಾ ಮಸೀದಿಯಿಂದ ಆರಂಭವಾದ ಮೆರವಣಿಗೆಯಲ್ಲಿ ಸಾವಿರಾರು ಮುಸ್ಲಿಂರು ಭಾಗವಹಿಸಿದ್ದರು.

ಕನ್ನಡಪ್ರಭ ವಾರ್ತೆ ಶಿರಾ

ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸುವ ಮೂಲಕ ಈದ್ ಮಿಲಾದ್ ಹಬ್ಬವನ್ನು ಬುಧವಾರ ಅದ್ಧೂರಿಯಾಗಿ ಆಚರಿಸಲಾಯಿತು. ನಗರದ ಜಾಮಿಯಾ ಮಸೀದಿಯಿಂದ ಆರಂಭವಾದ ಮೆರವಣಿಗೆಯಲ್ಲಿ ಸಾವಿರಾರು ಮುಸ್ಲಿಂರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಜಾಮಿಯಾ ಮಸೀದಿ ಅಧ್ಯಕ್ಷ ಮೊಹಮ್ಮದ್ ಜಾಫರ್ ಪ್ರವಾದಿ ಮುಹಮ್ಮದ್ ಅವರ ಜನ್ಮದಿನದ ಸ್ಮರಣಾರ್ಥ ಈದ್ ಮಿಲಾದ್ಆ ಚರಿಸಲಾಗುತ್ತಿದೆ. ಪ್ರವಾದಿಯವರು ಶಾಂತಿಯಿಂದ ಬಾಳಬೇಕು ಹಾಗೂ ಸಮಾಜದಲ್ಲಿ ಶಾಂತಿ ನೆಲೆಸುವಂತೆ ನಡೆದುಕೊಳ್ಳಬೇಕು ಎಂಬ ಸಂದೇಶವನ್ನು ನೀಡಿದ್ದಾರೆ. ಅವರ ಸಂದೇಶದಂತೆ ಎಲ್ಲರೂ ಶಾಂತಿಯುತವಾಗಿ ಹಬ್ಬವನ್ನು ಆಚರಿಸುತ್ತಿದ್ದು, ಯುವಕರೂ ಸಹ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ ಶಾಂತಿಯುತವಾಗಿ ಹಬ್ಬ ಆಚರಿಸಿರುವುದು ಸಂತೋಷದ ವಿಷಯವಾಗಿದೆ ಎಂದು ಹೇಳಿದರು.

ಪೊಲೀಸ್ ಇಲಾಖೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿ. ಗೋಪಾಲ್, ಯಾವುದೇ ವದಂತಿಗಳಿಗೆ ಕಿವಿಗೊಡ ಬಾರದು. ಸಾಮಾಜಿಕ ಜಾಲತಾಣಗಳಲ್ಲಿ ಧರ್ಮಕ್ಕೆ ಸಂಬಂಧಿಸಿದ ಅನಗತ್ಯ ಅಥವಾ ಪ್ರಚೋದನಕಾರಿ ಸಂದೇಶಗಳನ್ನು ಹಂಚಿಕೊಳ್ಳಬಾರದು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಡಿವೈಎಸ್ಪಿ ಬಿ.ಕೆ. ಶೇಖರ್, ಸಿಪಿಐ ಪ್ರವೀಣ್ ಕುಮಾರ್, ಶ್ರೀನಿವಾಸ್, ಶಿರಾ ನಗರಸಭೆ ಅಧ್ಯಕ್ಷ ಜೀಷನ್ ಮೊಹಮೂದ್, ಮಾಜಿ ನಗರಸಭೆ ಅಧ್ಯಕ್ಷ ಅಮಾನುಲ್ಲಾ ಖಾನ್, ಉಪ್ಕಾರ್ ಗ್ರೂಪ್ ಮಾಲೀಕ ಅಬ್ದುಲ್ಲಾ ಖಾನ್, ಖಾದರ್ ಖಾನ್, ಸಲ್ಮಾನ್ ಮೊಹಮದ್, ಆಶ್ರಯ ಸಮಿತಿ ಸದಸ್ಯ ನೂರುದ್ದೀನ್, ಸಮಾಜಸೇವಕ ಸಾದಿಕ್ ಪಾಷಾ, ಅಜ್ಮತ್ ಖಾನ್ ಸೇರಿದಂತೆ ಹಲವು ಮುಖಂಡರು, ಪೊಲೀಸ್ ಅಧಿಕಾರಿಗಳು, ಗೃಹರಕ್ಷಕ ದಳದ ಸಿಬ್ಬಂದಿ ಹಾಗೂ ಸಾರ್ವಜನಿಕರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಸಹಾಯ ಹಸ್ತ
ಸಂಭ್ರಮದ ಈದ್ ಮಿಲಾದ್ ಆಚರಣೆ