ಧಾರವಾಡ ಹೈಕೋರ್ಟ್‌ನಲ್ಲಿ ಮಧ್ಯಂತರ ತಡೆನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಆಗಿದ್ದ ಎಫ್‌ಐಆರ್
2023ನೇ ಕರ್ನಾಟಕ ವಿಧಾನಸಭಾ ಚುನಾವಣೆ ಸಮಯದಲ್ಲಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಹೈಕೋರ್ಟ್‌ನಿಂದ ತಾತ್ಕಾಲಿಕ್ ರಿಲೀಫ್ ದೊರೆತಿದೆ.
ನಡ್ಡಾ ಅವರ ಮೇಲೆ ದಾಖಲಾಗಿದ್ದ ಚುನಾವಣಾ ನೀತಿ ಸಂಹಿತೆ ಉಲ್ಲಂಘಣೆ ಪ್ರಕರಣದ ಎಫ್‌ಐಆರ್‌ಗೆ ಗುರುವಾರ ಧಾರವಾಡ ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿ ವಿಚಾರಣೆಯನ್ನು ನ. 3ಕ್ಕೆ ಮುಂದೂಡಿದೆ. ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರ ಜೆ.ಪಿ. ನಡ್ಡಾ ಚುನಾವಣಾ ಪ್ರಚಾರ ಭಾಷಣ ಮಾಡಿದ್ದರು. ಈಗ ಮೋದಿ ಸರ್ಕಾರ ಇದೆ. ಕರ್ನಾಟಕಕ್ಕೆ ಒಳ್ಳೆಯ ಅನುದಾನ ಬರುತ್ತದೆ. ಆ ಅನುದಾನದಿಂದ ವಂಚಿತರಾಗಬೇಡಿ. ಬಿಜೆಪಿಗೆ ಮತ ನೀಡಿ ಎಂದಿದ್ದರು. ಇದು ಮತದಾರರಿಗೆ ಆಮಿಷವೊಡ್ಡಿದ್ದು ಎಂದು ಶಿಗ್ಗಾವಿ ಠಾಣೆಯಲ್ಲಿ ಚುನಾವಣಾಧಿಕಾರಿಗಳು ಸ್ವಯಂ ಪ್ರೇರಣೆಯಿಂದ ಎಫ್‌ಐಆರ್ ದಾಖಲು ಮಾಡಿದ್ದರು. ಅದನ್ನು ರದ್ದುಪಡಿಸಲು ನಡ್ಡಾ ಪರ ವಕೀಲ ವಿನೋದ ಕುಮಾರ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಗುರುವಾರ ಏಕ ಸದಸ್ಯ ಪೀಠದಲ್ಲಿ ವಿಚಾರಣೆ ನಡೆದು ಪ್ರಕರಣಕ್ಕೆ ಮಧ್ಯಂತರ ತಡೆ ನೀಡಲಾಗಿದೆ. ಜೊತೆಗೆ ನ. 3ಕ್ಕೆ ಅಂತಿಮ ವಿಚಾರಣೆಗಾಗಿ ಪ್ರಕರಣ ಮುಂದೂಡಿದ್ದಾರೆ.