ಕನ್ನಡಪ್ರಭ ವಾರ್ತೆ ಮೈಸೂರು
ನಗರದ ಊಟಿ ರಸ್ತೆಯಲ್ಲಿರುವ ಜೆಎಸ್‌ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನಲ್ಲಿ ಶುಕ್ರವಾರ ನಡೆದ ಸ್ನಾತಕ ವಿಭಾಗಗಳ 2025- 26ನೇ ಸಾಲಿನ ಸಾಂಸ್ಕೃತಿಕ ಮತ್ತು ಕ್ರೀಡಾ ವೇದಿಕೆಗಳ ಸಮಾರೋಪ ಸಮಾರಂಭದಲ್ಲಿ ಅವರು ಸಮಾರೋಪ ಭಾಷಣ ಮಾಡಿದರು.
ವಿದ್ಯಾರ್ಥಿಗಳಿಗೆ ಸಾಂಸ್ಕೃತಿಕ ಆಯಾಮದ ವ್ಯಕ್ತಿತ್ವವನ್ನು ರೂಪಿಸುವ ಕ್ಷೇತ್ರಗಳ ಕಡೆ ಹೆಚ್ಚಿನ ಗಮನ ನೀಡಬೇಕು. ಅವು ವಿದ್ಯಾರ್ಥಿಗಳಲ್ಲಿ ಹೊಸ ಹುರುಪನ್ನು ಮೂಡಿಸಿ ಔದ್ಯೋಗಿಕ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಗಟ್ಟಿಯಾಗಲು ಸಹಾಯ ಮಾಡುತ್ತವೆ. ಜಾಗತಿಕ ಮಟ್ಟದಲ್ಲಿ ಸೃಷ್ಟಿಯಗುತ್ತಿರುವ ಭಯವನ್ನು ಹೋಗಲಾಡಿಸಲು ಸಾಂಸ್ಕೃತಿಕ ವೇದಿಕೆಗಳು ಕಾರಣವಾಗುತ್ತವೆ ಎಂದರು.ಇಂದಿನ ಯುವಜನತೆ ಅಭಿಮನ್ಯುವಿನ ಪರಾಕ್ರಮವನ್ನು ಅನುಕರಿಸಿದರೂ ಜೀವನದ ಚಕ್ರವ್ಯೂಹವನ್ನು ಭೇದಿಸುವುದಷ್ಟೇ ಅಲ್ಲದೆ ಅದನ್ನು ಜಯಿಸಿ, ಹೊರಬರುವ ಸಾಮರ್ಥ್ಯವನ್ನು ರೂಢಿಸಿಕೊಳ್ಳಬೇಕು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಮುಖ್ಯ ಕಾರ್ಯನಿರ್ವಾಹಕ ಪ್ರೊ.ಬಿ.ವಿ. ಸಾಂಬಶಿವಯ್ಯ ಮಾತನಾಡಿ, ಕಾಲೇಜುಗಳು ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಮೂಲಕ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರಗಳಾಗಬೇಕು, ಆಗ ಮಾತ್ರ ವ್ಯಕ್ತಿತ್ವ ವಿಕಸನ ಸಾಧ್ಯ. ಕ್ರೀಡಾ ಚಟುವಟಿಕೆಗಳಿಂದ ಸದೃಢ ದೇಹ ಮತ್ತು ಮನಸ್ಸಿನ ಜೊತೆಗೆ ಸ್ನೇಹ ಹಾಗೂ ಪರಸ್ಪರ ಗೌರವ ಸಾಧ್ಯವಾಗುತ್ತದೆ. ಸಾಂಸ್ಕೃತಿಕ ಪ್ರತಿಭೆ ಮತ್ತು ಕ್ರೀಡೆಯ ಜೊತೆಗೆ ಎಐ ತಾಂತ್ರಿಕ ಜ್ಞಾನ ವಿದ್ಯಾರ್ಥಿಗಳಿಗೆ ಬಹುಮುಖ್ಯ. ಉದ್ಯೋಗದ ಭರವಸೆಯನ್ನು ಈ ತಂತ್ರಜ್ಞಾನ ಮೂಡಿಸುತ್ತದೆ ಎಂದು ತಿಳಿಸಿದರು.
ಇದೇ ವೇಳೆ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಸಾಂಸ್ಕೃತಿಕ ಹಾಗೂ ಕ್ರೀಡಾ ವಿಭಾಗದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಗೌರವಿಸಲಾಯಿತು.