ಕನ್ನಡಪ್ರಭ ವಾರ್ತೆ ಕೆ.ಆರ್. ನಗರ
ಪಟ್ಟಣದ ಜೆಎಸ್ಎಸ್ ಪ್ರೌಢಶಾಲೆಯಲ್ಲಿ ತಾಲೂಕು ಆರೋಗ್ಯ ಇಲಾಖೆಯಿಂದ ಹಮ್ಮಿಕೊಂಡಿದ್ದ ಡೆಂಘೀ ಮತ್ತು ಚಿಕನ್ ಗುನ್ಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಈಡಿಸ್ ಸೊಳ್ಳೆಗಳು ಹರಡುವ ಡೆಂಘೀ ಹಾಗೂ ಚಿಕೂನ್ಗುನ್ಯಾ ರೋಗವು ವೈರಾಣು ಸೊಂಕಾಗಿದ್ದು, ಇದಕ್ಕೆ ಯಾವುದೇ ನಿರ್ದಿಷ್ಟ ಚಿಕಿತ್ಸೆ ಹಾಗೂ ಲಸಿಕೆ ಇರುವುದಿಲ್ಲ. ಆದರೆ ರೋಗ ಲಕ್ಷಣಕ್ಕೆ ಅನುಗುಣವಾಗಿ ಚಿಕಿತ್ಸೆಯನ್ನು ನೀಡಲಾಗುತ್ತದೆ ಹಾಗೂ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ದೊರೆಯದ ಪಕ್ಷದಲ್ಲಿ ಡೆಂಘೀ ಜ್ವರವು ಡೆಂಘೀ ರಕ್ತಸ್ರಾವ ಜ್ವರ ಹಾಗೂ ಡೆಂಘೀ ಆಘಾತ ಜ್ವರಕ್ಕೆ ತಿರುಗಿ ಮಾರಣಾಂತಿಕವಾಗಿ ಸಾವು ಸಂಭವಿಸಬಹುದು ಎಂದು ಮಾಹಿತಿ ನೀಡಿದರು.ಡೆಂಘೀ ಹಾಗೂ ಚಿಕೂನ್ಗುನ್ಯಾ ನಿಯಂತ್ರಣದಲ್ಲಿ ರೋಗ ಹರಡುವ ಈಡಿಸ್ ಸೊಳ್ಳೆಗಳ ನಿಯಂತ್ರಣವೇ ಅತೀ ಮುಖ್ಯ ವಿಧಾನವಾಗಿದೆ. ಈ ಸೊಳ್ಳೆಗಳು ಮನೆಗಳಲ್ಲಿನ ನೀರಿನ ಶೇಖರಣೆಗಳಲ್ಲಿ ಹಾಗೂ ಮನೆಗಳ ಸುತ್ತಮುತ್ತಲಿನ ಪರಿಸರದಲ್ಲಿ ಮಳೆನೀರು ಸಂಗ್ರಹವಾಗುವ ತ್ಯಾಜ್ಯ ವಸ್ತುಗಳಲ್ಲಿ ಉತ್ಪತ್ತಿಯಾಗುವುದರಿಂದ ಇವುಗಳ ನಿಯಂತ್ರಣಕ್ಕೆ ಹೆಚ್ಚಿನ ಗಮನ ಹರಿಸಬೇಕು ಎಂದರು.
ಆರೋಗ್ಯ ಇಲಾಖೆಯ ಕೀಟಶಾಸ್ತ್ರ ತಜ್ಞೆ ರತ್ಮಕುಮಾರಿ, ಜೆಎಸ್ಎಸ್ ಪ್ರೌಢಶಾಲೆಯ ಮುಖ್ಯಶಿಕ್ಷಕಿ ಕ್ಯಾತ್ಯಾಯಿನಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಎಚ್.ಜೆ. ಮಹೇಶ್, ರವಿ, ಮಂಜು, ಆರೋಗ್ಯ ಶಿಕ್ಷಣಾಧಿಕಾರಿ ಸಿ.ಎಂ. ರೇಖಾ, ಆರೋಗ್ಯ ಸಂರಕ್ಷಣಾಧಿಕಾರಿಪಾರ್ವತಿ, ನರ್ಸ್ ಗಳಾದ ಹೇಮಲತಾ, ಸುಮಲತಾ, ವಾಣಿ ಹಾಗೂ ಶಾಲಾಶಿಕ್ಷಕರು, ಆಶಾ ಕಾರ್ಯಕರ್ತೆಯರು ಇದ್ದರು.