ಬಾಲ ಕಾರ್ಮಿಕರ ಪತ್ತೆಗೆ ಕ್ರಮವಹಿಸಲು ನ್ಯಾಯಾಧೀಶರ ಸೂಚನೆ

KannadaprabhaNewsNetwork |  
Published : May 14, 2026, 12:30 AM IST
13ಎಚ್ಎಸ್ಎನ್13 :  | Kannada Prabha

ಸಾರಾಂಶ

ಶಿಕ್ಷಕರಿಗೆ ತರಬೇತಿ ಆಯೋಜಿಸಿದ ಸಂದರ್ಭದಲ್ಲಿ ನ್ಯಾಯಾಧೀಶರು, ಪೊಲೀಸ್ ಅಧಿಕಾರಿಗಳಿಂದ ಕಾಯ್ದೆ ಕುರಿತು ಉಪನ್ಯಾಸ ನೀಡಲು ಆಹ್ವಾನಿಸುವಂತೆ ಸೂಚಿಸಿದರು. ಮಕ್ಕಳನ್ನು ಯಾವುದೇ ಕಾರ್ಯಕ್ರಮದ ಮೆರವಣಿಗೆಗೆ ಬಳಸಿಕೊಳ್ಳುವಂತಿಲ್ಲ, ಈ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಎಚ್ಚರವಹಿಸುವಂತೆ ಹೇಳಿದರು, ಪೋಕ್ಸೋ ಪ್ರಕರಣದಲ್ಲಿ ಸಾಕ್ಷಿ ಹಾಳಾಗದಂತೆ ವಿಳಂಬ ಮಾಡದೆ ಘಟನೆಯಾದ ತಕ್ಷಣ ತಪಾಸಣೆ ನಡೆಸಿ ಮೆಡಿಕಲ್ ರಿಪೋರ್ಟ್ ಪಡೆದುಕೊಳ್ಳಲು ಅಧಿಕಾರಿಗಳು ಸಮನ್ವಯತೆ ಯಿಂದ ಕರ್ತವ್ಯ ನಿರ್ವಹಿಸು ವಂತೆ ತಿಳಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ಜಿಲ್ಲೆಯಲ್ಲಿ ಬಾಲ್ಯವಿವಾಹ, ಪೋಕ್ಸೋ ಪ್ರಕರಣಗಳ ತಡೆಗೆ ಮತ್ತು ಬಾಲಕಾರ್ಮಿಕರ ಪತ್ತೆಗಾಗಿ ಕ್ರಮ ಕೈಗೊಳ್ಳುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಹೇಮಾವತಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಸಭೆ ನಡೆಸಿ ಮಾತನಾಡಿದ ಅವರು, ಬಾಲ್ಯವಿವಾಹ ತಡೆಗೆ ಸಹಾಯವಾಣಿ ಸಂಖ್ಯೆ ಕುರಿತು ವ್ಯಾಪಕ ಪ್ರಚಾರ ಆಗಬೇಕು ಎಂದು ತಿಳಿಸಿದರು. ಬಾಲ್ಯವಿವಾಹ ತಡೆದ ನಂತರ ಮುಂದೆ ಅದನ್ನು ಫಾಲೋ ಅಪ್ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲೆಯಲ್ಲಿ ಯಾವುದೇ ಮಗುವು ಶಿಕ್ಷಣದಿಂದ ವಂಚಿತರಾಗದಂತೆ ನಿಗಾವಹಿಸಬೇಕು, ಈ ನಿಟ್ಟಿನಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ ಶಾಲೆಗೆ ಮರುಸೇರ್ಪಡೆಗೆ ಕ್ರಮಕೈಗೊಳ್ಳುವಂತೆ ತಿಳಿಸಿದರು. ಶಾಲೆಗಳಲ್ಲಿ ಪೋಷಕರ ಸಭೆ ನಡೆಸುವ ಸಂದರ್ಭದಲ್ಲಿ ಫೋಕ್ಸೋ, ಬಾಲ್ಯವಿವಾಹ, ಬಾಲಕಾರ್ಮಿಕ ಪದ್ದತಿ ಕುರಿತು ತಿಳುವಳಿಕೆ ಮೂಡಿಸುವ ಮೂಲಕ ಮನಃಪರಿವರ್ತನೆಗೆ ಕ್ರಮಕೈಗೊಳ್ಳಿ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರಲ್ಲದೆ, ಶಿಕ್ಷಕರಿಗೆ ತರಬೇತಿ ಆಯೋಜಿಸಿದ ಸಂದರ್ಭದಲ್ಲಿ ನ್ಯಾಯಾಧೀಶರು, ಪೊಲೀಸ್ ಅಧಿಕಾರಿಗಳಿಂದ ಕಾಯ್ದೆ ಕುರಿತು ಉಪನ್ಯಾಸ ನೀಡಲು ಆಹ್ವಾನಿಸುವಂತೆ ಸೂಚಿಸಿದರು. ಮಕ್ಕಳನ್ನು ಯಾವುದೇ ಕಾರ್ಯಕ್ರಮದ ಮೆರವಣಿಗೆಗೆ ಬಳಸಿಕೊಳ್ಳುವಂತಿಲ್ಲ, ಈ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಎಚ್ಚರವಹಿಸುವಂತೆ ಹೇಳಿದರು, ಪೋಕ್ಸೋ ಪ್ರಕರಣದಲ್ಲಿ ಸಾಕ್ಷಿ ಹಾಳಾಗದಂತೆ ವಿಳಂಬ ಮಾಡದೆ ಘಟನೆಯಾದ ತಕ್ಷಣ ತಪಾಸಣೆ ನಡೆಸಿ ಮೆಡಿಕಲ್ ರಿಪೋರ್ಟ್ ಪಡೆದುಕೊಳ್ಳಲು ಅಧಿಕಾರಿಗಳು ಸಮನ್ವಯತೆ ಯಿಂದ ಕರ್ತವ್ಯ ನಿರ್ವಹಿಸು ವಂತೆ ತಿಳಿಸಿದರು.ಬಸ್ ನಿಲ್ದಾಣ, ರಸ್ತೆ ಪಕ್ಕದಲ್ಲಿ, ಅಂಗಡಿಗಳ ಮುಂದೆ ನಿರಾಶ್ರಿತರು ರಾತ್ರಿ ವೇಳೆಯಲ್ಲಿ ಮಲಗುತ್ತಾರೆ ಅವರ ರಕ್ಷಣೆ ಹಿತದೃಷ್ಟಿಯಿಂದ ತಂಗಲು ವ್ಯವಸ್ಥೆಗೆ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಾರ್ವಜನಿಕರ ಯಾವುದೇ ಸಮಸ್ಯೆಯಾಗಲಿ ಅದು ತಮ್ಮ ಮನೆಯ ಸಮಸ್ಯೆ ಎಂದು ಭಾವಿಸಿ ಪರಿಹಾರ ಒದಗಿಸಲು ಸ್ಪಂದಿಸಿ ಜವಾಬ್ದಾರಿಯಿಂದ ನೊಂದವರಿಗೆ ಪರಿಹಾರ ಕಲ್ಪಿಸಲು ನಿಗಾವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲೆಯಲ್ಲಿ ಕೆರೆಗಳ ಒತ್ತುವರಿ ಯನ್ನು ತೆರವುಗೊಳಿಸಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರಲ್ಲದೆ, ಕೆರೆಗಳಲ್ಲಿ ಹೂಳು ತುಂಬಿರುವುದನ್ನು ತೆಗೆಯುವುದರಿಂದ ಮಳೆಗಾಲದಲ್ಲಿ ನೀರು ಶೇಖರಣೆಯಾಗಿ ಕೃಷಿ ಚಟುವಟಿಕೆಗಳಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿಗೆ ಸಹಾಯವಾಗುತ್ತದೆ ಎಂದರು.ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಾಕ್ಷಾಯಿಣಿ, ಹಿರಿಯ ಸಿವಿಲ್ ನ್ಯಾಯಾಧೀಶರಾದ ಪುಟ್ಟ ಸ್ವಾಮಿ, ಅಪರ ಜಿಲ್ಲಾಧಿಕಾರಿ ಜಗದೀಶ್ ಗಂಗಣ್ಣನವರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ತಮ್ಮಯ್ಯ, ಶ್ರೀನಿಧಿ ಹಾಗೂ ಮತ್ತಿತರು ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಾರತ್ ಸ್ಕೌಟ್ಸ್ ಗೈಡ್ಸ್ ಜಿಲ್ಲಾ ಸಂಸ್ಥೆ ವತಿಯಿಂದ ವಿಶ್ವ ಅಮ್ಮಂದಿರ ದಿನ
ಸಂಗೀತ ಗ್ರಾಮ ರುದ್ರಪಟ್ಟಣದಲ್ಲಿ ಸಂಗೀತೋತ್ಸವ