ನ್ಯಾಯಸಮ್ಮತ ಚುನಾವಣೆಯಿಂದ ಪ್ರಜೆಗಳಲ್ಲಿ ನಮ್ಮೆದಿ: ನ್ಯಾಯಾಧೀಶೆ ರಾಜೇಶ್ವರಿ ಹೆಗಡೆ

KannadaprabhaNewsNetwork |  
Published : Jan 26, 2024, 01:48 AM IST
ಕ್ಯಾಪ್ಷನಃ25ಕೆಡಿವಿಜಿ33ಃದಾವಣಗೆರೆಯಲ್ಲಿ ಜಿಲ್ಲಾ ನ್ಯಾಯಾಂಗದಿಂದ ನಡೆದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ನ್ಯಾಯಾಧೀಶರಾದ ರಾಜೇಶ್ವರ ಎನ್.ಹೆಗಡೆ ಪ್ರತಿಜ್ಞಾ ವಿಧಿ ಬೋಧಿಸಿದರು. | Kannada Prabha

ಸಾರಾಂಶ

ಸುಭದ್ರ, ಸುರಕ್ಷಿತವಾಗಿ ದೇಶದ ಆಡಳಿತ ನಡೆಸುವವರ ಆಯ್ಕೆ ಮಾಡುವ ಮತದಾನದ ಹಕ್ಕನ್ನು ಪ್ರತಿಯೊಬ್ಬರೂ ಚಲಾಯಿಸಬೇಕು. ನಮ್ಮ ನಾಯಕನ ಆಯ್ಕೆ ತಪ್ಪಾದರೆ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ತನ್ನ ಅರ್ಥ ಕಳೆದುಕೊಳ್ಳುತ್ತದೆ.

ಕನ್ನಡಪ್ರಭ ವಾರ್ತೆ ದಾವಣಗೆರೆ

ನಿರ್ಭೀತಿಯಿಂದ ಮತದಾನ ಮಾಡಿ, ಪ್ರಜಾಪ್ರಭುತ್ವದ ಮೌಲ್ಯ ವೃದ್ಧಿಸಬೇಕಿದೆ. ನ್ಯಾಯಸಮ್ಮತ ಚುನಾವಣೆಗಳು ಪ್ರಜೆಗಳಲ್ಲಿ ನೆಮ್ಮದಿಯ ನಾಳೆಗಳ ತರಬಲ್ಲದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಎನ್.ಹೆಗಡೆ ಅಭಿಪ್ರಾಯಪಟ್ಟರು.

ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ವಕೀಲರ ಸಂಘ ದಾವಣಗೆರೆ ಸಂಯುಕ್ತಾಶ್ರಯದಲ್ಲಿ ಗುರುವಾರ ಆಯೋಜಿಸಿದ್ದ ಮತದಾನ ಜಾಗೃತಿ ಹಾಗೂ ಮತದಾನ ಪ್ರತಿಜ್ಞಾ ವಿಧಿ ಬೋಧನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರತಿಯೊಬ್ಬ ಭಾರತೀಯನೂ ಮತದಾನ ಮಾಡುವುದು ಕಡ್ಡಾಯ ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶ ಶಿವಪ್ಪ ಜಿ.ಸಲಗರೆ ಮಾತನಾಡಿ, ಸುಭದ್ರ, ಸುರಕ್ಷಿತವಾಗಿ ದೇಶದ ಆಡಳಿತ ನಡೆಸುವವರ ಆಯ್ಕೆ ಮಾಡುವ ಮತದಾನದ ಹಕ್ಕನ್ನು ಪ್ರತಿಯೊಬ್ಬರೂ ಚಲಾಯಿಸಬೇಕು. ನಮ್ಮ ನಾಯಕನ ಆಯ್ಕೆ ತಪ್ಪಾದರೆ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ತನ್ನ ಅರ್ಥ ಕಳೆದುಕೊಳ್ಳುತ್ತದೆ ಎಂದರು.

ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಕರೆಣ್ಣವರ್ ಮಾತನಾಡಿ, ಮತದಾನ ಪ್ರಕ್ರಿಯೆ ಕೇವಲ ಒಂದು ದಿನಕ್ಕೆ ಸೀಮಿತವಾದುದಲ್ಲ. ಭಾರತ ಸಂವಿಧಾನ, ಪ್ರತಿಯೊಬ್ಬ ಭಾರತೀಯನಿಗೂ ಜಾತಿಮತ ಧರ್ಮಗಳ ಬೇಧವಿಲ್ಲದೆ, ಬಡವ-ಬಲ್ಲಿದನೆಂಬ ಅಂತರಗಳಿಲ್ಲದೇ ಚಲಾಯಿಸಬಹುದಾದ ಅಮೂಲ್ಯ ಹಕ್ಕಾಗಿದೆ ಎಂದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಎಚ್.ಅರುಣ್‌ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಚುನಾವಣೆಗಳಲ್ಲಿ ಹೆಚ್ಚಿನ ಜನರು ತಮ್ಮ ಹಕ್ಕು ಚಲಾಯಿಸದಿರುವುದು ಕಂಡು ಬರುತ್ತಿದೆ. ಇದರ ಪರಿಣಾಮ ದೇಶದ ಪ್ರಜಾಪ್ರಭುತ್ವ ಮುಂದಿನ ದಿನಗಳಲ್ಲಿ ಅರ್ಥ ಕಳೆದುಕೊಳ್ಳಬಹುದು. ಆದ್ದರಿಂದ ನಾವು ಕಡ್ಡಾಯ ಮತದಾನ ಮಾಡಿ ಪ್ರಜಾಪ್ರಭುತ್ವ ಯಶಸ್ವಿಗೊಳಿಸಬೇಕಿದೆ ಎಂದರು.

ಜಿಲ್ಲಾ ನ್ಯಾಯಾಧೀಶರಾದ ರಾಜೇಶ್ವರ ಎನ್.ಹೆಗಡೆ, ಮತದಾನ ಜಾಗೃತಿ ಪ್ರತಿಜ್ಞಾ ವಿಧಿ ಬೋಧಿಸಿದರು.

ಕಾರ್ಯಕ್ರಮದಲ್ಲಿ ಸ್ಥಳೀಯ ವಿವಿಧ ನ್ಯಾಯಾಲಯಗಳ ನ್ಯಾಯಾಧೀಶರು, ವಕೀಲರು ಮತ್ತು ನ್ಯಾಯಾಲಯಗಳ ಮುಖ್ಯ ಆಡಳಿತಾಧಿಕಾರಿಗಳೂ ಸೇರಿ ಸಿಬ್ಬಂದಿ ಇದ್ದರು. ಹಿರಿಯ ವಕೀಲರಾದ ಎಂ.ಎನ್.ಆಂಜನೇಯ ಪ್ರಾರ್ಥಿಸಿದರು. ವಕೀಲರ ಸಂಘದ ಕಾರ್ಯದರ್ಶಿ ಎಸ್.ಬಸವರಾಜ ನಿರೂಪಿಸಿದರೆ, ಸಹಕಾರ್ಯದರ್ಶಿ ಎ.ಎಸ್.ಮಂಜುನಾಥ್ ಸ್ವಾಗತಿಸಿದರು. ಕಾರ್ಯಕಾರಿ ಸಮಿತಿ ಸದಸ್ಯ ವಾಗೀಶ್ ಕಟ್ಟಿಗೆಹಳ್ಳಿ ಮಠ ವಂದನಾರ್ಪಣೆ ಮಾಡಿದರು.

PREV

Recommended Stories

ಸಾಂಬ್ರಾ ವಿಮಾನ ನಿಲ್ದಾಣದವರೆಗೆ ಚತುಷ್ಪಥ ರಸ್ತೆ
ಮುಷ್ಕರಕ್ಕೆ ನೌಕರರಿಂದ ಮಿಶ್ರ ಪ್ರತಿಕ್ರಿಯೆ