ಭವಿಷ್ಯದ ಪ್ರಜೆಗಳಾಗುವ ಮಕ್ಕಳು ದೇಶದ ಸಂಪತ್ತು ಎಂದ ನ್ಯಾಯಾಧೀಶೆ ಶಿಲ್ಪಾ ಎಚ್.ಜೆ.

KannadaprabhaNewsNetwork |  
Published : Nov 15, 2024, 12:38 AM IST
ಶಿರ್ಷಿಕೆ-೧೩ಕೆ.ಎಂ.ಎಲ್‌.ಆರ್.೧- ಮಾಲೂರು ಪಟ್ಟಣದ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ವಕೀಲರ ಸಂಘ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಆರೋಗ್ಯ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಸಿವಿಲ್ ನ್ಯಾಯಾಧೀಶರು ಹಾಗೂ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಶಿಲ್ಪಾ ಎಚ್ ಜೆ ಉದ್ಘಾಟಿಸಿದರು. | Kannada Prabha

ಸಾರಾಂಶ

ಮಕ್ಕಳನ್ನು ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಶಿಕ್ಷಣ ಪಡೆಯುವ ಮಕ್ಕಳನ್ನು ದುಡಿಮೆಗೆ ದೂಡದೆ ಶೈಕ್ಷಣಿಕವಾಗಿ ಪ್ರಗತಿ ಸಾಧಿಸಲು ಪೂರಕ ವಾತಾವರಣ ಮಾಡಿಕೊಡಬೇಕು ಎಂದು ಶಿಲ್ಪಾ ಅವರು ಹೇಳಿದರು.

ಕನ್ನಡಪ್ರಭ ವಾರ್ತೆ ಮಾಲೂರು

ಇಂದಿನ ಮಕ್ಕಳು ಮುಂದಿನ ಭವಿಷ್ಯದ ಪ್ರಜೆಗಳು ಎಂಬಂತೆ ಮಕ್ಕಳು ದೇಶದ ಸಂಪತ್ತಾಗಿದ್ದು, ಪ್ರತಿಯೊಬ್ಬರೂ ತಮ್ಮ ಮಕ್ಕಳಿಗೆ ನೈತಿಕ ಹಾಗೂ ಗುಣಾತ್ಮಕ ಶಿಕ್ಷಣವನ್ನು ನೀಡುವ ಮೂಲಕ ಸಮಾಜದ ಮುಖ್ಯ ವಾಹಿನಿಗೆ ತರುವ ಕೆಲಸ ಮಾಡುವಂತೆ ಪಟ್ಟಣದ ಜೆಎಂಎಫ್‌ಸಿ ನ್ಯಾಯಾಲಯದ 1ನೇ ಅಪರ ಸಿವಿಲ್ ನ್ಯಾಯಾಧೀಶರು ಹಾಗೂ ಕಾನೂನು ಸೇವಾ ಪ್ರಾಧಿಕಾರ ಸದಸ್ಯೆ ಕಾರ್ಯದರ್ಶಿ ಶಿಲ್ಪಾ ಎಚ್.ಜೆ. ಹೇಳಿದರು.

ಪಟ್ಟಣದ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ವಕೀಲರ ಸಂಘ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಆರೋಗ್ಯ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಕ್ಕಳು ನೈತಿಕ ಹಾಗೂ ಗುಣಾತ್ಮಕ ಶಿಕ್ಷಣವನ್ನು ಪಡೆಯಲು ಸರ್ಕಾರಗಳು ಕೋಟ್ಯಾಂತರ ರೂ.ಗಳನ್ನು ಖರ್ಚು ಮಾಡಿ ಹಲವು ರೀತಿಯ ಸವಲತ್ತುಗಳನ್ನು ಒದಗಿಸಿದೆ. ಮಕ್ಕಳನ್ನು ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಶಿಕ್ಷಣ ಪಡೆಯುವ ಮಕ್ಕಳನ್ನು ದುಡಿಮೆಗೆ ದೂಡದೆ ಶೈಕ್ಷಣಿಕವಾಗಿ ಪ್ರಗತಿ ಸಾಧಿಸಲು ಪೂರಕ ವಾತಾವರಣ ಮಾಡಿಕೊಡಬೇಕು ಎಂದರು.

ಬಾಲಕಿಯರು ಶಾಲಾ ಕಾಲೇಜುಗಳಿಗೆ ಹೋಗುವ ವೇಳೆ ತಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಯಾವುದಾದರೂ ಕಿರುಕುಳ ನೀಡುವಂತಹ ಘಟನೆಗಳು ನಡೆದರೆ ತಕ್ಷಣ ಶಾಲಾ-ಕಾಲೇಜುಗಳು ಹಾಗೂ ಪೋಷಕರು ಕಾನೂನು ಸೇವಾ ಪ್ರಾಧಿಕಾರಕ್ಕೆ ಮಾಹಿತಿ ನೀಡಬೇಕು ಎಂದರು.

ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಪ್ರಸಾದ್, ವಕೀಲರ ಸಂಘದ ಕಾರ್ಯದರ್ಶಿ ಹರೀಶ್ ಕುಮಾರ್, ಜಂಟಿ ಕಾರ್ಯದರ್ಶಿ ಬಿ.ನಾರಾಯಣಸ್ವಾಮಿ, ಆರೋಗ್ಯ ಇಲಾಖೆಯ ಸರಸ್ವತಿ, ಆರ್‌ಕೆಎಸ್‌ಕೆ ಆಪ್ತ ಸಮಾಲೋಚಕಿ ಸುಮತಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಯ ಮೇಲ್ವಿಚಾರಕಿ, ಸರಿತಾಬಾಯಿ, ಯಶೋಧ, ನಿಲಯ ಪಾಲಕಿ ಅಂಬಿಕಾ ಹಾಗೂ ಸಿಬ್ಬಂದಿ ಹಾಜರಿದ್ದರು.ಫೋಟೋ: ಮೂಲೂರಿನ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ ಆವರಣದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಲಾಯಿತು.

PREV

Recommended Stories

ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ