ವಿದ್ಯಾರ್ಥಿ ಜೀವನವನ್ನು ಶಿಕ್ಷಣಕ್ಕೆ ಮೀಸಲಿಡಲು ಕಿಶೋರಿಯರಿಗೆ ನ್ಯಾಯಾಧೀಶರ ಕಿವಿಮಾತು

KannadaprabhaNewsNetwork |  
Published : Apr 24, 2025, 12:00 AM IST
ಬೆಳವಾಡಿ ಗ್ರಾಮದಲ್ಲಿ ಆಯೋಜಿಸಿದ್ದ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ವಿ.ಹನುಮಂತಪ್ಪ ಮಾತನಾಡಿದರು. ಸಿ. ರಂಗನಾಥ್‌, ಸಿರಾಜುನ್ನೀಸಾ, ವಿಶ್ವನಾಥ್‌ ಇದ್ದರು. | Kannada Prabha

ಸಾರಾಂಶ

ಚಿಕ್ಕಮಗಳೂರು, ಕಿಶೋರಿಯರು ತಮ್ಮ ಹದಿಹರೆಯದ ವಯಸ್ಸಿನಲ್ಲಿ ಬೇರೆ ಕಡೆ ತಮ್ಮ ಗಮನಹರಿಸದೇ ತಮ್ಮ ವಿದ್ಯಾರ್ಥಿ ಜೀವನವನ್ನು ಶಿಕ್ಷಣಕ್ಕೆ ಮೀಸಲಿಡುವಂತೆ ಹಿರಿಯ ಸಿವಿಲ್ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ.ಹನುಮಂತಪ್ಪ ಕಿವಿಮಾತು ಹೇಳಿದರು.

ರಾಷ್ಟ್ರೀಯ ಪೋಷಣ್ ಅಭಿಯಾನ । ಬೆಳವಾಡಿ ಗ್ರಾಮದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಕಿಶೋರಿಯರು ತಮ್ಮ ಹದಿಹರೆಯದ ವಯಸ್ಸಿನಲ್ಲಿ ಬೇರೆ ಕಡೆ ತಮ್ಮ ಗಮನಹರಿಸದೇ ತಮ್ಮ ವಿದ್ಯಾರ್ಥಿ ಜೀವನವನ್ನು ಶಿಕ್ಷಣಕ್ಕೆ ಮೀಸಲಿಡುವಂತೆ ಹಿರಿಯ ಸಿವಿಲ್ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ.ಹನುಮಂತಪ್ಪ ಕಿವಿಮಾತು ಹೇಳಿದರು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಪ್ರಚಾರ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಹಾಗೂ ಬೆಳವಾಡಿ ಗ್ರಾಮ ಪಂಚಾಯಿತಿ ಆಶ್ರಯದಲ್ಲಿ ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೆಯಡಿ ಬೆಳವಾಡಿ ಗ್ರಾಮದಲ್ಲಿ ಆಯೋಜಿಸಿದ್ದ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು.ಉತ್ತಮ ಶಿಕ್ಷಣ ವ್ಯಕ್ತಿಯ ವ್ಯಕ್ತಿತ್ವ ಮತ್ತು ಜೀವನವನ್ನು ರೂಪಿಸುವಲ್ಲಿ ಬಹಳ ಪ್ರಾಮುಖ್ಯತೆ ವಹಿಸುತ್ತದೆ. ಅಲ್ಲದೇ ಕಾನೂನು ವ್ಯಕ್ತಿ ಹುಟ್ಟಿನಿಂದ ಸಾವಿನವರೆಗೆ ಅಗತ್ಯವಾಗಿದ್ದು, ಅದರ ಅರಿವು ಪ್ರತಿಯೊಬ್ಬರಿಗೂ ಅವಶ್ಯ. ಬಾಲ್ಯ ವಿವಾಹ ಹಾಗೂ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಗಳಂತಹ ಸನ್ನಿವೇಶಗಳಿಂದ ರಕ್ಷಣೆ ಪಡೆಯುವ ಬಗ್ಗೆ ಸಹ ಮಾಹಿತಿ ನೀಡಿದರು.ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೆಯಡಿ ಸುಮಾರು 15 ದಿನಗಳಿಂದ ಜಿಲ್ಲಾದ್ಯಂತ ವಿಶೇಷ ಕಾರ್ಯಕ್ರಮ ಆಯೋಜನೆ ಮಾಡುವ ಮೂಲಕ ಗರ್ಭಿಣಿಯರು, ಬಾಣಂತಿಯರು ಹಾಗೂ ಮಕ್ಕಳ ಆರೈಕೆ ಜೊತೆಗೆ ಪೌಷ್ಟಿಕ ಆಹಾರದ ಮಹತ್ವದ ಬಗ್ಗೆ ಜನರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಅಪೌಷ್ಟಿಕತೆ ತೊಡೆದು ಹಾಕುವ ನಿಟ್ಟಿನಲ್ಲಿ ಹಾಗೂ ಪೋಷಕಾಂಶದ ಮಹತ್ವ ತಿಳಿಸಲು ಈ ಕಾರ್ಯಕ್ರಮನಡೆಸಲಾಗಿದೆ. ಪ್ರತಿಯೊಬ್ಬರೂ ಆರೋಗ್ಯ ಕಾಪಾಡಿಕೊಳ್ಳಲು ಉತ್ತಮ ಜೀವನ ಶೈಲಿ ರೂಢಿಸಿಕೊಂಡು ಸ್ಥಳೀಯವಾಗಿ ಸಿಗುವ ಸಮತೋಲಿತ ಆಹಾರ ಸೇವನೆಗೆ ಹೆಚ್ಚು ಮಹತ್ವ ನೀಡುವುದು ಸೂಕ್ತ. ಇತ್ತೀಚಿನ ದಿನಗಳಲ್ಲಿ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯ ಕೂಡ ಬಹುಮುಖ್ಯವಾಗಿದೆ. ಪ್ರತಿಯೊಬ್ಬರೂ ದೈಹಿಕ ಮತ್ತು ಮಾನಸಿಕ ಆರೋಗ್ಯ ಸದೃಢವಾಗಿಟ್ಟುಕೊಳ್ಳಲು ಗಮನಹರಿಸಬೇಕು ಎಂದರು.ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿ.ರಂಗನಾಥ್ ಮಾತನಾಡಿ, ಏ.8 ರಿಂದ 22 ರವರೆಗೆ ದೇಶಾದ್ಯಂತ ನಡೆಸುತ್ತಿರುವಂತೆಯೇ ಪೋಷಣ್ ಪಕ್ವಾಡ ಕಾರ್ಯಕ್ರಮವನ್ನು ಇಲ್ಲೂ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಡಿ ಮಕ್ಕಳಲ್ಲಿ ಬೊಜ್ಜು ನಿವಾರಣೆ ಮತ್ತು ಆರೋಗ್ಯಕರ ಜೀವನ ಶೈಲಿ ಕುರಿತು ಸಾರ್ವಜನಿಕರಿಗೆ ಅರಿವು ಕಾರ್ಯಕ್ರಮ, ಸಮುದಾಯ ಸಂಪರ್ಕ ಮತ್ತು ಸಾರ್ವಜನಿಕ ಜಾಗೃತಿ ಮೂಲಕ ಅಪೌಷ್ಟಿಕತೆ ಕೊನೆಗಾಣಿಸಲು ಪೌಷ್ಟಿಕ ಆಹಾರದ ಪ್ರಾತ್ಯಕ್ಷಿಕೆ ಇನ್ನೂ ಹಲವಾರು ವಿಷಯಗಳ ಬಗ್ಗೆ ಅಂಗನವಾಡಿ ಕೇಂದ್ರ ಹಾಗೂ ಸಮುದಾಯದಲ್ಲಿ ಕಾರ್ಯಕ್ರಮ ಆಯೋಜಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗಿದೆ ಎಂದು ಹೇಳಿದರು.ಬೆಳವಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸಂದೀಪ್ ಮಾತನಾಡಿ, ಗರ್ಭಿಣಿಯರು, ಬಾಣಂತಿಯರು ಹಾಗೂ ಮಕ್ಕಳ ಆರೈಕೆ, ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು. ಇದೇ ವೇಳೆ ಗರ್ಭಿಣಿಯರಿಗೆ ಸೀಮಂತ ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳವಾಡಿ ಗ್ರಾಪಂ ಅಧ್ಯಕ್ಷ ಸಿರಾಜುನ್ನೀಸಾ ವಹಿಸಿದ್ದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿಶ್ವನಾಥ್, ವಲಯದ ಮೇಲ್ವಿಚಾರಕಿ ಚಂದ್ರಮ್ಮ, ಗ್ರಂಥಪಾಲಕ ಪ್ರಕಾಶ್ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.23 ಕೆಸಿಕೆಎಂ 1ಬೆಳವಾಡಿ ಗ್ರಾಮದಲ್ಲಿ ಆಯೋಜಿಸಿದ್ದ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ವಿ.ಹನುಮಂತಪ್ಪ ಮಾತನಾಡಿದರು. ಸಿ. ರಂಗನಾಥ್‌, ಸಿರಾಜುನ್ನೀಸಾ, ವಿಶ್ವನಾಥ್‌ ಇದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ