ನ್ಯಾಯಾಂಗ ವ್ಯವಸ್ಥೆ ಎಲ್ಲರಿಗೂ ಅಗತ್ಯ

KannadaprabhaNewsNetwork |  
Published : Aug 14, 2025, 01:00 AM IST
13ುಲು3 | Kannada Prabha

ಸಾರಾಂಶ

ನ್ಯಾಯಾಂಗ ವ್ಯವಸ್ಥೆ ಎಲ್ಲರಿಗೂ ಅಗತ್ಯವಾಗಿದೆ. ಇಂದು ಪ್ರತಿ ವಿಚಾರಕ್ಕೂ ಸಾರ್ವಜನಿಕರು ನ್ಯಾಯಾಲಯಕ್ಕೆ ಬರುತ್ತಾರೆ. ಜನರ ಕ್ಲಿಷ್ಟಕರ ಸಮಸ್ಯೆ ಇತ್ಯರ್ಥಪಡಿಸುವುದು, ಸುಲಭ ಪ್ರಕ್ರಿಯೆ ಮೂಲಕ ದಾವೆಗಳನ್ನು ಇತ್ಯರ್ಥಪಡಿಸುವುದು ನ್ಯಾಯಾಂಗದ ಉದ್ದೇಶವಾಗಿದೆ.

ಗಂಗಾವತಿ:

ಸರಳ ನ್ಯಾಯದಾನದ ಮೂಲಕ ವ್ಯಾಜ್ಯಗಳನ್ನು ಇತ್ಯರ್ಥ ಮಾಡಿಕೊಳ್ಳುವ ವ್ಯವಸ್ಥೆ ಕಾಯಂ ಜನತಾ ಅದಾಲತ್‌ ಆಗಿದೆ ಎಂದು 1ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯ್ಕ್ ಹೇಳಿದರು.

ತಾಲೂಕಿನ ವಡ್ಡರಹಟ್ಟಿ ಗ್ರಾಮ ಪಂಚಾಯಿತಿ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಕಂದಾಯ ಇಲಾಖೆ, ತಾಲೂಕು ಪಂಚಾಯಿತಿ, ಪೊಲೀಸ್ ಇಲಾಖೆ, ಸಿಡಿಪಿಒ, ಗ್ರಾಪಂ ವಡ್ಡರಹಟ್ಟಿ ಹಾಗೂ ವಿವಿಧ ಇಲಾಖೆಗಳ ಆಶ್ರಯದಲ್ಲಿ ಬುಧವಾರ ಆಯೋಜಿಸಿದ್ದ ಕಾಯಂ ಜನತಾ ನ್ಯಾಯಾಲಯ ಕುರಿತು ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ನ್ಯಾಯಾಂಗ ವ್ಯವಸ್ಥೆ ಎಲ್ಲರಿಗೂ ಅಗತ್ಯವಾಗಿದೆ. ಇಂದು ಪ್ರತಿ ವಿಚಾರಕ್ಕೂ ಸಾರ್ವಜನಿಕರು ನ್ಯಾಯಾಲಯಕ್ಕೆ ಬರುತ್ತಾರೆ. ಜನರ ಕ್ಲಿಷ್ಟಕರ ಸಮಸ್ಯೆ ಇತ್ಯರ್ಥಪಡಿಸುವುದು, ಸುಲಭ ಪ್ರಕ್ರಿಯೆ ಮೂಲಕ ದಾವೆಗಳನ್ನು ಇತ್ಯರ್ಥಪಡಿಸುವುದು ನ್ಯಾಯಾಂಗದ ಉದ್ದೇಶವಾಗಿದೆ. ಈ ಹಿನ್ನೆಲೆ ಗ್ರಾಮೀಣ ಜನರಿಗೂ ಈ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ವಕೀಲರ ಸಂಘದ ತಾಲೂಕು ಕಾರ್ಯದರ್ಶಿ ಎಚ್.ಎಂ. ಮಂಜುನಾಥ ಉಪನ್ಯಾಸ ನೀಡಿ, 1987ರ ಕಾನೂನು ಸೇವೆ ಪ್ರಾಧಿಕಾರ ಕಾಯ್ದೆ ಪ್ರಕಾರ ವ್ಯಾಜ್ಯಗಳನ್ನು ನ್ಯಾಯಾಲಯದ ಹೊರಗಡೆ ಇತ್ಯರ್ಥ ಪಡಿಸಿಕೊಳ್ಳುತ್ತಿದ್ದರು. ಅದರ ಮುಂದುವರಿದ ಭಾಗವಾಗಿ 2007ರಲ್ಲಿ ರಾಜ್ಯ ಸರ್ಕಾರ ಕಾಯ್ದೆ ತಿದ್ದುಪಡಿ ತಂದು ಕಾಯಂ ಜನತಾ ನ್ಯಾಯಾಲಯ ಸ್ಥಾಪಿಸಿದೆ. ಸಾರ್ವಜನಿಕ ಉಪಯುಕ್ತ ಸೇವೆಗಳ ವ್ಯಾಜ್ಯ ಬಂದಲ್ಲಿ ನ್ಯಾಯಾಲಯಕ್ಕೆ ಹೋಗದೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಲ್ಲಿ ಅರ್ಜಿ ಸಲ್ಲಿಸಿದರೆ ಮೂರು ತಿಂಗಳಲ್ಲಿ ವ್ಯಾಜ್ಯ ಇತ್ಯರ್ಥ ಪಡಿಸುತ್ತಾರೆ. ಸಾರ್ವಜನಿಕರು ಇದರ ಉಪಯೋಗ ಪಡೆದುಕೊಳ್ಳಬೇಕು ಎಂದರು.

ಗ್ರಾಪಂ ಅಧ್ಯಕ್ಷೆ ಮಂಜುಳಾ ಶಿವಪ್ಪ ಹತ್ತಿಮರದ ಅಧ್ಯಕ್ಷತೆ ವಹಿಸಿದ್ದರು. ಈ ವೇಳೆ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ತಾಲೂಕಾಧ್ಯಕ್ಷ ಗುಡ್ಡಪ್ಪ ಬಸವಣ್ಣೆಪ್ಪ ಹಳ್ಳಾಕಾಯಿ, ಪ್ರಧಾನ ಸಿವಿಲ್ ನ್ಯಾಯಾಧೀಶ ನಾಗೇಶ ಪಾಟೀಲ್, ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಮೇಘಾ ಸೋಮಣ್ಣನವರ, ತಹಸೀಲ್ದಾರ್ ರವಿ ಅಂಗಡಿ, ತಾಪಂ ಇಒ ರಾಮರೆಡ್ಡಿ ಪಾಟೀಲ್, ಸಿಡಿಪಿಒ ಜಯಶ್ರೀ, ಪಿಡಿಒ ಸುರೇಶ ಚಲವಾದಿ, ವಕೀಲರ ಸಂಘದ ತಾಲೂಕಾಧ್ಯಕ್ಷ ಶರಣಬಸಪ್ಪ ನಾಯಕ, ಉಪಾಧ್ಯಕ್ಷ ಪ್ರಕಾಶ ಕುಸಬಿ, ಗ್ರಾಪಂ ಸದಸ್ಯರು, ಗ್ರಾಪಂ ಸಿಬ್ಬಂದಿ ಇದ್ದರು.

PREV

Recommended Stories

ಲೋಕಾ ಎಸ್ಪಿ ಬದ್ರಿನಾಥ್‌ ಸೇರಿ 19 ಪೊಲೀಸರಿಗೆ ರಾಷ್ಟ್ರ ಪದಕ
ಕೊಲೆ ಆರೋಪಿ ದರ್ಶನ್‌ಗೆ ತಪ್ಪದ ದಯಾನಂದ್ ಕಂಟಕ