12ರಂದು ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ

KannadaprabhaNewsNetwork |  
Published : Jun 03, 2025, 12:01 AM IST
ಸಭೆಯಲ್ಲಿ ಜಿಲ್ಲಾಧಿಕಾರಿ ಸಿ.ಎನ್‌.ಶ್ರೀಧರ್‌ ಮಾತನಾಡಿದರು. | Kannada Prabha

ಸಾರಾಂಶ

ಜೂ. 12ರಂದು ಗದಗ ನಗರದ ಆಡಿಟೋರಿಯಂ ಹಾಲ್‌ದಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ ಆಚರಿಸಲಾಗುತ್ತಿದ್ದು, ಅರ್ಥಪೂರ್ಣವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸಲು ಕ್ರಮ ವಹಿಸಬೇಕು ಎಂದು ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಹೇಳಿದರು.

ಗದಗ: ಜೂ. 12ರಂದು ನಗರದ ಆಡಿಟೋರಿಯಂ ಹಾಲ್‌ದಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ ಆಚರಿಸಲಾಗುತ್ತಿದ್ದು, ಅರ್ಥಪೂರ್ಣವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕುರಿತು ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡುವುದೇ ಈ ದಿನಾಚರಣೆಯ ಪ್ರಮುಖ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಕಾರ್ಮಿಕ ಇಲಾಖೆಯೊಂದಿಗೆ ವಿವಿಧ ಇಲಾಖೆಗಳು ಸಮನ್ವಯತೆಯಿಂದ ಕೆಲಸ ನಿರ್ವಹಿಸಬೇಕು. ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳು ಪರಿಣಾಮಕಾರಿಯಾಗಬೇಕು. ನಗರಸಭೆ ಹಾಗೂ ಸ್ಥಳೀಯ ಸಂಸ್ಥೆಗಳ ಕಸ ವಿಲೇವಾರಿ ವಾಹನದಲ್ಲಿ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಮೈಕ್ ಮೂಲಕ ಪ್ರಚುರಪಡಿಸಬೇಕು ಎಂದರು.

ಗ್ರಾಪಂ ವತಿಯಿಂದ ಡಂಗುರ ಸಾರುವ ಕೆಲಸವಾಗಬೇಕು. ಎಲ್ಲ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳಲ್ಲಿ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯ ದಿನದಂದು ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ಜರುಗಿಸಿ, ಆನಂತರ ಕಾರ್ಮಿಕ ಇಲಾಖೆಗೆ ವರದಿ ಸಲ್ಲಿಸಬೇಕು. ಒಟ್ಟಾರೆಯಾಗಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಅರ್ಥಪೂರ್ಣವಾಗಿ ಆಚರಣೆಯಾಗಬೇಕು ಎಂದು ನಿರ್ದೇಶನ ನೀಡಿದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಶೈಲ ಸೋಮನಕಟ್ಟಿ ಮಾತನಾಡಿ, ಜೂ. 12ರಂದು ಬೆಳಗ್ಗೆ 11ಕ್ಕೆ ನಗರದ ಆಡಿಟೋರಿಯಂ ಹಾಲ್‌ನಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ನಡೆಯಲಿದೆ. ಪ್ರೌಢಶಾಲಾ, ಕಾಲೇಜು, ಎನ್.ಎಸ್.ಎಸ್., ಎನ್.ಸಿ.ಸಿ. ವಿದ್ಯಾರ್ಥಿಗಳಿಂದ ಜಾಥಾ ಹಮ್ಮಿಕೊಳ್ಳಲಾಗುವುದು. ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ, ಚಿತ್ರಕಲೆ, ಭಾಷಣ ಸ್ಪರ್ಧೆಗಳನ್ನು ಏರ್ಪಡಿಸಿ, ವಿಜೇತರಾದವರಿಗೆ ಕಾರ್ಯಕ್ರಮದ ದಿನ ಬಹುಮಾನ ವಿತರಿಸಲಾಗುವುದು ಎಂದು ವಿವರಿಸಿದರು.

ಪಪೂ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಬಿ. ಮಸನಾಯಕ, ಕಾರ್ಮಿಕ ನಿರೀಕ್ಷಕರು-1ನೇ ವೃತ್ತ, ಕಾರ್ಮಿಕ ನಿರೀಕ್ಷಕರು 2ನೇ ವೃತ್ತ, ಬಾಲ ಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ಸಂದೇಶ ಪಾಟೀಲ, ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

PREV

Recommended Stories

ನವದೆಹಲಿಯಲ್ಲಿ ರಾಣಿ ಚೆನ್ನಭೈರಾದೇವಿ ಸ್ಮಾರಕ ಅಂಚೆ ಚೀಟಿ ರಾಷ್ಟ್ರಪತಿ ಬಿಡುಗಡೆ
ಬಿ.ಸಿ.ರೋಡ್‌: ಬ್ಲಾಕ್ ಕಾಂಗ್ರೆಸ್‌ನಿಂದ ನುಡಿನಮನ ಕಾರ್ಯಕ್ರಮ