ಜಂಕ್‌ಫುಡ್‌ನಿಂದ ಮಕ್ಕಳಲ್ಲಿ ಪೌಷ್ಠಿಕಾಂಶ ಕೊರತೆ

KannadaprabhaNewsNetwork |  
Published : May 07, 2025, 12:53 AM IST
ಅಕ್ಷೆರ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಮಕ್ಕಳಲ್ಲಿ ಪೌಷ್ಠಿಕಾಂಶ ಹೆಚ್ಚಿಸಲು ಸರ್ಕಾರ ಮಧ್ಯಾಹ್ನದ ಬಿಸಿಯೂಟದಂತ ಯೋಜನೆ ಕೈಗೊಂಡಿದೆ. ಇದರಿಂದ ಮಕ್ಕಳಲ್ಲಿ ಕಲಿಕಾ ಗುಣಮಟ್ಟ ಸುಧಾರಣೆ ಜತೆಗೆ ಸಮಾನತೆ ಸಂದೇಶ ಸಾರುವ ಯೋಜನೆ ಇದಾಗಿದೆ ಎಂದು ಅಕ್ಷರ ದಾಸೋಹ ಯೋಜನೆ ಸಹಾಯಕ ನಿರ್ದೇಶಕ ಡಾ.ಎಂ.ಎಂ.ಬೆಳಗಲ್ಲ ಹೇಳಿದರು.

ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ

ಮಕ್ಕಳಲ್ಲಿ ಪೌಷ್ಠಿಕಾಂಶ ಹೆಚ್ಚಿಸಲು ಸರ್ಕಾರ ಮಧ್ಯಾಹ್ನದ ಬಿಸಿಯೂಟದಂತ ಯೋಜನೆ ಕೈಗೊಂಡಿದೆ. ಇದರಿಂದ ಮಕ್ಕಳಲ್ಲಿ ಕಲಿಕಾ ಗುಣಮಟ್ಟ ಸುಧಾರಣೆ ಜತೆಗೆ ಸಮಾನತೆ ಸಂದೇಶ ಸಾರುವ ಯೋಜನೆ ಇದಾಗಿದೆ ಎಂದು ಅಕ್ಷರ ದಾಸೋಹ ಯೋಜನೆ ಸಹಾಯಕ ನಿರ್ದೇಶಕ ಡಾ.ಎಂ.ಎಂ.ಬೆಳಗಲ್ಲ ಹೇಳಿದರು.

ಪಟ್ಟಣದ ಸರ್ಕಾರಿ ಕನ್ನಡ ಗಂಡು ಮಕ್ಕಳ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಬ್ಲಾಕ್ ಹಂತದ ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇಂದು ಮಕ್ಕಳು ಜಂಕ್‌ ಫುಡ್‌ಗೆ ಅಂಟಿಕೊಂಡಿದ್ದು, ಮಕ್ಕಳಲ್ಲಿ ಪೌಷ್ಠಿಕಾಂಶದ ಕೊರೆತೆ ಮಾತ್ರವಲ್ಲದೇ ಶಿಕ್ಷಣದಲ್ಲಿ ಆಸಕ್ತಿ ಇಲ್ಲದಂತಾಗಿದೆ. ಪಾಲಕರು ತಮ್ಮ ಮಕ್ಕಳಿಗೆ ಗುಣಮಟ್ಟ ಆಹಾರ ನೀಡಲು ಮುಂದಾಗಬೇಕು. ದೈಹಿಕ ಸಾಮರ್ಥ್ಯ ಹೆಚ್ಚಿಸುವ ದೇಶಿ ಕ್ರೀಡೆಗಳಲ್ಲಿ ಭಾಗವಹಿಸುವಂತೆ ಪ್ರೇರೆಪಿಸಬೇಕು ಎಂದರು.ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ನೀಡುವ ಜೊತೆಗೆ ಉಚಿತ ಸಮವಸ್ತ್ರ, ಪಠ್ಯಪುಸ್ತಕ, ಸ್ಕಾಲರ್ಶಿಪ್, ಶೂ ಮತ್ತು ಸಾಕ್ಸ್ ಮುಂತಾದ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಪಾಲಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಕಳುಹಿಸದೆ, ಸರ್ಕಾರಿ ಶಾಲೆಗಳಿಗೆ ಕಳುಹಿಸುವ ಮೂಲಕ ಸರ್ಕಾರಿ ಶಾಲೆಗಳ ಉನ್ನತಿಗಾಗಿ ಶ್ರಸಹಕಾರ ನೀಡಬೇಕೆಂದರು. ಹೆಚ್ಚು ಮಕ್ಕಳಿರುವ ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಯೋಜನೆಯನ್ನು ಸಹ ಹಮ್ಮಿಕೊಳ್ಳಲಾಗಿದ್ದು, ಅವುಗಳ ಮೂಲಕ ಮಕ್ಕಳಲ್ಲಿ ತಂತ್ರಜ್ಞಾನ ಆಧಾರಿತವಾದ ಶಿಕ್ಷಣವನ್ನು ಉಚಿತವಾಗಿ ನೀಡಲಾಗುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಓದುವ ವಿದ್ಯಾರ್ಥಿಗಳಿಗಾಗಿ ಆಂಗ್ಲ ಮಾಧ್ಯಮ ವಿಭಾಗವನ್ನು ಸಹ ತೆರೆಯಲಾಗಿದ್ದು, ಪೋಷಕರು ಅದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿ ಯು.ಬಿ.ಧರಿಕಾರ್, ಪ್ರಾಚಾರ್ಯ ಎಸ್.ಎಸ್.ಅಂಗಡಿ, ಮುಖ್ಯಶಿಕ್ಷಕ ಎನ್.ಎ.ತೊಂದಿಹಾಳ್, ಇಸಿಒ ಡಿ.ವೈ.ಗುರಿಕಾರ್, ಬಿ ಆರ್‌ಪಿಎಲ್‌ಜಿ ಮುದ್ದಾಪೂರ್, ಕೆ.ಎಸ್.ಸಜ್ಜನ್, ಶಂಕರಾಗೌಡ ಬಿ.ಐ, ಈ ಆರ್ ಟಿ ಎಸ್ ಎಸ್ ರಾಮತಾಳ್, ಆರ್.ಹೆಚ್.ಧವಳಗಿ, ಸಿಆರ್‌ಪಿ ಗಣೇಶ್ ಬಶೆಟ್ಟಿ, ಎಂ.ಎಸ್.ಮಾಕೊಂಡ್, ಎಸ್.ಎಸ್.ಭಾವಿಕಟ್ಟಿ, ಎಸ್‌ಡಿಎಂಸಿ ಅಧ್ಯಕ್ಷ ಪಿ.ಎಂ.ನದಾಫ್, ಅಜೀಂ ಪ್ರೇಮ್ ಜಿ ಫೌಂಡೇಶನ್‌ನಿಂದ ಮಾರ್ಗದರ್ಶಕರು ಹಾಗೂ ಪಾಲಕ ಬಂಧುಗಳು, ಹಳೆಯ ವಿದ್ಯಾರ್ಥಿಗಳು, ಗ್ರಾಪಂ ಸದಸ್ಯರು, ಎಸ್‌ಡಿಎಂಸಿಯ ಸದಸ್ಯರು ಮತ್ತು ವಿವಿಧ ಶಾಲೆಗಳ ಮುಖ್ಯಗುರುಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು,

PREV

Recommended Stories

ವೈದ್ಯರ ಕೊರತೆಗೆ ನಲುಗಿದ ಸಾರ್ವಜನಿಕ ಆಸ್ಪತ್ರೆ
ಸತ್ಯಕಾಮರ ಸುಮ್ಮನೆಯಲ್ಲಿ ಕಸಾಪ ವಾರ್ಷಿಕ ಸಭೆ: ಡಾ.ಮಹೇಶ ಜೋಷಿ