ಜಂಕ್ ಫುಡ್‌ನಿಂದ ಮಕ್ಕಳ ಆರೋಗ್ಯಕ್ಕೆ ಸಂಚಕಾರ

KannadaprabhaNewsNetwork |  
Published : Jul 05, 2026, 01:30 AM IST
೪ಶಿರಾ೨: ಶಿರಾ ತಾಲೂಕು ಕಳ್ಳಂಬೆಳ್ಳ ಹೋಬಳಿ ದೊಡ್ಡ ಆಲದಮರ ಗ್ರಾಮದ ಎಕ್ಸಲೆಂಟ್ ಪಬ್ಲಿಕ್ ಶಾಲೆಯಲ್ಲಿ ನಡೆದ ವೈದ್ಯರ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ.ನಿತಿನ್, ಗುರು ರಾಘವೇಂದ್ರ ಆಸ್ಪತ್ರೆಯ ಡಾ.ಲಿಖಿತ್ ಹಾಗೂ ಡಾ. ನಿಶ್ಚಿಂತ ಹಾಗೂ ಬ್ರಹ್ಮಸಂದ್ರ ಕಿರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಕ ರವಿಕುಮಾರ್ ಅವರನ್ನು ಸನ್ಮಾನಿಸಲಾಯಿತು. | Kannada Prabha

ಸಾರಾಂಶ

ಇತ್ತೀಚಿನ ದಿನಗಳಲ್ಲಿ ಮಕ್ಕಳು ಹೆಚ್ಚು ಬೇಕರಿ ಹಾಗೂ ರಸ್ತೆ ಬದಿಯಲ್ಲಿ ಸಿಗುವ ತಿಂಡಿ ತಿನಿಸುಗಳನ್ನು ಜಂಕ್ ಫುಡ್ ಗಳನ್ನು ತಿನ್ನುವ ಅಭ್ಯಾಸ ಬೆಳೆಸಿಕೊಂಡಿರುವುದರಿಂದ ಮಕ್ಕಳ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ ಇದು ಅವರ ಜೀವ್ಕಕೆ ಸಂಚಕಾರ ತರುತ್ತಿದೆ ಎಂದು ಡಾ.ಲಿಖಿತ್ ಕಳವಳ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಶಿರಾ

ಇತ್ತೀಚಿನ ದಿನಗಳಲ್ಲಿ ಮಕ್ಕಳು ಹೆಚ್ಚು ಬೇಕರಿ ಹಾಗೂ ರಸ್ತೆ ಬದಿಯಲ್ಲಿ ಸಿಗುವ ತಿಂಡಿ ತಿನಿಸುಗಳನ್ನು ಜಂಕ್ ಫುಡ್ ಗಳನ್ನು ತಿನ್ನುವ ಅಭ್ಯಾಸ ಬೆಳೆಸಿಕೊಂಡಿರುವುದರಿಂದ ಮಕ್ಕಳ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ ಇದು ಅವರ ಜೀವ್ಕಕೆ ಸಂಚಕಾರ ತರುತ್ತಿದೆ ಎಂದು ಡಾ.ಲಿಖಿತ್ ಕಳವಳ ವ್ಯಕ್ತಪಡಿಸಿದರು.

ಅವರು ಶಿರಾ ತಾಲೂಕು ದೊಡ್ಡ ಆಲದಮರ ಗ್ರಾಮದ ಎಕ್ಸಲೆಂಟ್ ಪಬ್ಲಿಕ್ ಶಾಲೆಯಲ್ಲಿ ನಡೆದ ವೈದ್ಯರ ದಿನಾಚರಣೆ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಮಕ್ಕಳಲ್ಲಿ ಆರೋಗ್ಯದ ಕುರಿತು ಜಾಗೃತಿಯ ಕೊರತೆಯೇ ಇದಕ್ಕೆಲ್ಲಾ ಕಾರಣವಾಗಿದ್ದು, ಪೋಷಕರು ಈ ಬಗ್ಗೆ ಎಚ್ಚರ ವಹಿಸಬೇಕು. ಮಕ್ಕಳಿಗೆ ಹೆಚ್ಚು ತರಕಾರಿ, ಹಣ್ಣು, ಸಿರಿಧಾನ್ಯದಂತಹ ಆಹಾರ ಪದಾರ್ಥಗಳನ್ನು ಹೆಚ್ಚು ನೀಡಬೇಕು. ಇದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ ಎಂದರು.

ರವಿ ಅವರು ಮಾತನಾಡಿ, ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಉತ್ತಮ ಜೀವನ ಶೈಲಿಯನ್ನು ರೂಢಿಸಿಕೊಳ್ಳಬೇಕು ಹಾಗೂ ತಂದೆ ತಾಯಿಯರು ಮಾಡಿಕೊಡುವ ಪೋಷಕಾಂಶಯುಕ್ತ ಆಹಾರವನ್ನು ಸೇವಿಸಿ ಜಂಕ್ ಫುಡ್ ಗಳನ್ನು ತಿನ್ನುವುದನ್ನು ನಿಲ್ಲಿಸಬೇಕು ಶುಚಿತ್ವದ ಕಡೆಗೆ ಹೆಚ್ಚಿನ ಗಮನ ಹರಿಸಿ ತಮ್ಮ ಸುತ್ತಮುತ್ತಲಿನ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು. ಸಾಂಕ್ರಾಮಿಕ ರೋಗಗಳ ಬಗ್ಗೆ ತಿಳುವಳಿಕೆ ನೀಡಿದರು.

ಈ ಸಂದರ್ಭದಲ್ಲಿ ಶಾಲೆಯ ವಿದ್ಯಾರ್ಥಿಗಳಿಗೆ ವೈದ್ಯರ ಉಡುಪುಗಳನ್ನು ಧರಿಸಿ ಮಕ್ಕಳ ವೈದ್ಯರಾಗುವ ಕನಸುಗಳನ್ನು ಶಾಲೆಯ ಆಡಳಿತ ಮಂಡಳಿ ಬಿತ್ತುವ ಪ್ರಯತ್ನ ಮಾಡಿತು, ಕಾರ್ಯಕ್ರಮದಲ್ಲಿ ಹುಲಿಕುಂಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ನಿತಿನ್, ಗುರು ರಾಘವೇಂದ್ರ ಆಸ್ಪತ್ರೆಯ ಡಾ.ಲಿಖಿತ್ ಹಾಗೂ ಡಾ. ನಿಶ್ಚಿಂತ ಹಾಗೂ ಬ್ರಹ್ಮಸಂದ್ರ ಕಿರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಕ ರವಿಕುಮಾರ್ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಅಂತಾಪುರ ಮಂಜುನಾಥ್, ಪ್ರಾಂಶುಪಾಲರಾದ ಜ್ಯೋತಿ ಶಿವಲಿಂಗಪ್ಪ, ಸೇರಿದಂತೆ ಸಹ ಶಿಕ್ಷಕರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪೌರ ಕಾರ್ಮಿಕರ ನಡುವೆ ತಾರತಮ್ಯ ಬೇಡ
ಪೌರಕಾರ್ಮಿಕರ ಸಮಸ್ಯೆ ಪರಿಹರಿಸಲು ಮುತುವರ್ಜಿ ವಹಿಸಿ