ಜಗಳೂರು: ೩ ದಶಕಗಳ ಹೋರಾಟದ ಫಲವಾಗಿ ಒಳಮೀಸಲಾತಿ ಕುರಿತು ಸುಪ್ರಿಂಕೋರ್ಟ್ ಐತಿಹಾಸಿಕ ತೀರ್ಪು ನೀಡಿರುವುದು ಶೋಷಿತ ಸಮುದಾಯಗಳಿಗೆ ನ್ಯಾಯ ದೊರಕಿದಂತಾಗಿದೆ ಎಂದು ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಸಮಿತಿ ಅಧ್ಯಕ್ಷ ಪೂಜಾರಿ ಸಿದ್ದಪ್ಪ ಸಂತಸ ವ್ಯಕ್ತಪಡಿಸಿದರು.
ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಸೋಮವಾರ ಒಳಮೀಸಲಾತಿ ಹೋರಾಟ ಸಮಿತಿ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಪುತ್ಹಳಿಗೆ ಹೂವಿನ ಹಾರ ಹಾಕಿ, ಸಿಹಿ ಹಂಚಿ ಅವರು ಮಾತನಾಡಿದರು. ನ್ಯಾ.ಸದಾಶಿವ ಆಯೋಗ ವರದಿಯನ್ನು ಎತಾವತ್ತಾಗಿ ಸರ್ಕಾರ ಕೂಡಲೇ ಜಾರಿಗೊಳಿಸಿ ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕೆಂದು ಒತ್ತಾಯಿಸಿದರು. ಪರಿಶಿಷ್ಟ ಜಾತಿಯಲ್ಲಿ ಮೂಲ ಅಸ್ಪೃಶ್ಯ ಜಾತಿಗಳಿಗೆ ಇಷ್ಟು ವರ್ಷಗಳ ಕಾಲ ಅನ್ಯಾಯವಾಗಿತ್ತು. ನ್ಯಾ.ಸದಾಶಿವ ಆಯೋಗದ ವರದಿ ಜಾರಿಗಾಗಿ ಸುಮಾರು ವರ್ಷಗಳ ಹೋರಾಟ, ಪ್ರತಿಭಟನೆ, ಸತ್ಯಾಗ್ರಹ ಸೇರಿದಂತೆ ಅನೇಕ ಹೋರಾಟದಲ್ಲಿ ಹೋರಾಟಗಾರರು ನೋವುಗಳು ಅನುಭವಿಸಿ ಜೈಲು ಸೇರಿದ್ದನ್ನು ಸ್ಮರಿಸಬೇಕೆಂದರು. ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಕ ಶಿವಣ್ಣ ಮಾತನಾಡಿ, ಪರಿಶಿಷ್ಟ ಜಾತಿಯಲ್ಲಿ ೧೦೧ ಜಾತಿಗಳಿದ್ದು, ಮೂಲ ಪರಿಶಿಷ್ಟ ಸಮುದಾಯಗಳಿಗೆ ತೀವ್ರ ಅನ್ಯಾಯವಾಗಿದೆ. ಈಗ ನ್ಯಾ.ಸದಾಶಿವ ಆಯೋಗ ವರದಿ ಯತ್ತಾವತ್ತಾಗಿ ಜಾರಿಯಾದರೆ ಶೇ.೬ ಮೀಸಲಾತಿಯಿಂದ ಯುವ ಪೀಳಿಗೆ ಅನುಕೂಲವಾಗಿದೆ. ಮತ್ತು ಮೂಲ ಅಸ್ಪೃಶ್ಯರಿಗೆ ಆರ್ಥಿಕ, ಶೈಕ್ಷಣಿಕ, ರಾಜಕೀಯ ಕ್ಷೇತ್ರಗಳಲ್ಲಿ ಬೆಳವಣಿಗೆ ಕಾಣಲು ಸಾಧ್ಯ ಎಂದರು. ಈಗ ನಡೆಬೇಕಾಗಿರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನ್ಯಾ.ಸದಾಶಿವ ಆಯೋಗ ವರದಿ ಜಾರಿಗೊಳ್ಳುವವರೆಗೂ ತಡೆಹಿಡಿಬೇಕೆಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ದಲಿತ ಮುಖಂಡರಾದ ಕುಬೇಂದ್ರಪ್ಪ, ಶಿವಣ್ಣ, ಹನುಮಂತಪ್ಪ, ಚಂದ್ರಪ್ಪ, ಪಾಂಡು, ನಾಗರಾಜ್ ಸೇರಿದಂತೆ ಮತ್ತಿತರರಿದ್ದರು.- - - -05 ಜೆ.ಎಲ್.ಆರ್. 2:ಜಗಳೂರು ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಸೋಮವಾರ ಒಳಮೀಸಲಾತಿ ಹೋರಾಟ ಸಮಿತಿ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಪುತ್ಹಳಿಗೆ ಹೂವಿನ ಹಾರ ಹಾಕಿ, ಸಿಹಿ ಹಂಚಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಸಮಿತಿ ಅಧ್ಯಕ್ಷ ಪೂಜಾರಿ ಸಿದ್ದಪ್ಪ ಅವರು ಮಾತನಾಡಿದರು.