ಕನ್ನಡಪ್ರಭ ವಾರ್ತೆ ಯಳಂದೂರು
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಪೊಲೀಸ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ, ಕಾರ್ಮಿಕ ಇಲಾಖೆ ಹಾಗೂ ಸಾಂತ್ವನ ಸಹಾಯವಾಣಿ ಕೇಂದ್ರ, ಗ್ರೀನ್ ಗ್ರಾಮೀಣಾಭಿವೃದ್ಧಿ ಸಂಸ್ಥೆ, ಮಕ್ಕಳು ಮಕ್ಕಳ ಸಹಾಯವಾಣಿ 1098 ವತಿಯಿಂದ ಹಮ್ಮಿಕೊಂಡಿದ್ದ ಮಕ್ಕಳ ಹಕ್ಕುಗಳು, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಪೋಕ್ಸೋ, ಮಕ್ಕಳಿಗೆ ಸಂಬಂಧಿತ ಕಾನೂನುಗಳು, ಮಾದಕ ವಸ್ತುಗಳ ದುಷ್ಪರಿಣಾಮ ಕುರಿತು ಶಾಲಾ ಕಾಲೇಜು ಮಕ್ಕಳಿಗೆ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮಕ್ಕಳು ಪ್ರೌಢಾವಸ್ಥೆಯಲ್ಲಿ ಚಂಚಲ ಸ್ವಭಾವವನ್ನು ಹೊಂದಿರುತ್ತಾರೆ. ಈ ವೇಳೆ ಮಾದಕ ವಸ್ತುಗಳ ಚಟ, ಧೂಮಪಾನ, ಮದ್ಯಪಾನ ಹಾಗೂ ಪ್ರೀತಿ, ಪ್ರೇಮದಂತಹ ವಿಷಯಗಳಿಗೆ ಆಕರ್ಷಿತರಾಗಿ ಚಟಗಳ ದಾಸರಾಗುತ್ತಾರೆ. ಈ ಚಟಕ್ಕೆ ಬಿದ್ದರೆ ಅವರು ತಮ್ಮ ಅಮೂಲ್ಯ ಸಮಯ ಕಳೆದುಕೊಂಡು ಬಿಡುತ್ತಾರೆ. ಕಲಿಕೆಯ ವಯಸ್ಸಿನಲ್ಲಿ ಇಂತಹ ದುರಾಭ್ಯಾಸಗಳು ಶಿಕ್ಷಣವನ್ನೇ ಮೊಟುಕುಗೊಳಿಸುವ ಅಪಾಯವಿದೆ. ಈ ವಯಸ್ಸಿನಲ್ಲಿ ಮಕ್ಕಳು ಇದನ್ನು ಬಿಟ್ಟು ಶಿಕ್ಷಣಕ್ಕೆ ಆದ್ಯತೆ ನೀಡಿ ತಮ್ಮ ಜೀವನ್ನು ಉಜ್ವಲಗೊಳಿಸಕೊಳ್ಳಬೇಕು ಎಂದು ಹೇಳಿದರು.ಸಿವಿಲ್ ನ್ಯಾಯಾಧೀಶ ಆಕರ್ಷ್ ಮಾತನಾಡಿ, ಕಾನೂನು ಎಂದರೆ ನಮ್ಮ ವಿವೇಚನಾ ಶಕ್ತಿಯಾಗಿದೆ. ನಾವು ನಮ್ಮ ವಿವೇಚನೆಯನ್ನು ಒಳ್ಳೆಯದಕ್ಕೆ ಬಳಸಿಕೊಂಡರೆ ಕೃತ್ಯಗಳನ್ನು ನಿಯಂತ್ರಿಸಲು ಸಾಧ್ಯವಾಗುತ್ತದೆ ಎಂದರು.
ಕಾನೂನಿಗೆ ಶಿಕ್ಷೆ ಕೊಡುವ ಶಕ್ತಿ ಮಾತ್ರ ಇದೆ. ಆದರೆ ಅಪರಾಧ ಮಾಡುವ ಮನೋಭಾವನೆಯ ವ್ಯಕ್ತಿ ಇದರಿಂದ ತನ್ನ ಹಾಗೂ ತನ್ನ ಇಡೀ ಕುಟುಂಬದ ನೆಮ್ಮದಿ ಕಳೆದುಕೊಳ್ಳುತ್ತಾನೆ. ಹಾಗಾಗಿ ಪ್ರತಿಯೊಬ್ಬರೂ ಕಾನೂನನ್ನು ಗೌರವಿಸಿ ಹಾಗೂ ಅಪರಾಧ ಕೃತ್ಯದಿಂದ ದೂರವಿರಬೇಕು. ವಿದ್ಯಾರ್ಥಿಗಳು ಕಲಿಕೆಯನ್ನು ತಮ್ಮ ಜ್ಞಾನಾರ್ಜನೆ ದೃಷ್ಟಿಯಿಂದ ಕಲಿತರೆ ಫಲಿತಾಂಶ ತಾನಾಗಿಯೇ ಬರುತ್ತದೆ ಎಂದು ಹೇಳಿದರು. ಇದಕ್ಕೂ ಮುನ್ನ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜಾಥಾವನ್ನು ನಡೆಸಲಾಯಿತು.